ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅ.21 ರಂದು ಪ್ರವಾಹ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದೇನೆ: ಸಿಎಂ ಯಡಿಯೂರಪ್ಪ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಅಕ್ಟೋಬರ್ 19: ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳು ಭಾರಿ ಮಳೆಯಿಂದ ನೆರೆ ಹಾವಳಿ ಎದುರಾಗಿದ್ದು, ಅ.21 ರಂದು ಪ್ರವಾಹ ಉಂಟಾಗಿರುವ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದಲ್ಲಿ ಕಸಬಾ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸಿಎಂ ಬಿ.ಎಸ್ ಯಡಿಯೂರಪ್ಪ ಮಾತನಾಡಿ, ಅ.21 ರಂದು ನೆರೆ ಸಮೀಕ್ಷೆ ನಡೆಸುವುದಾಗಿ ಹೇಳಿದರು.

ಶಿಕಾರಿಪುರ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಸಿಎಂ ಯಡಿಯೂರಪ್ಪ ಚಾಲನೆಶಿಕಾರಿಪುರ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಸಿಎಂ ಯಡಿಯೂರಪ್ಪ ಚಾಲನೆ

ಕೊರೊನಾ ವೈರಸ್ ಮತ್ತು ಇತರೆ ಕಾರಣಕ್ಕಾಗಿ ಇಷ್ಟು ದಿನ ಬೆಂಗಳೂರು ಬಿಟ್ಟು ಎಲ್ಲೂ ಹೊರಗೆ ಹೋಗಿರಲಿಲ್ಲ, ಇಂದು ತಮ್ಮ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆಗೆ ಆಗಮಿಸಿದ್ದೇನೆ ಎಂದರು.

I Will Conduct An Aerial Survey In Flood Affected Areas On October 21st: CM Yediyurappa

ಸುಮಾರು 198 ಕೋಟಿ ರೂ. ವೆಚ್ಚದಲ್ಲಿ ಬಹು ವರ್ಷದ ನೀರಾವರಿ ಯೋಜನೆಗೆ ಚಾಲನೆ ನೀಡಿದ್ದೇನೆ, ಶಿಕಾರಿಪುರ ಮತ್ತು ಸೊರಬದ ನೀರಾವರಿ ಯೋಜನೆ ಆದಷ್ಟು ಬೇಗನೆ ಪೂರ್ಣಗೊಳ್ಳಲಿದೆ ಎಂದ ಸಿಎಂ ಯಡಿಯೂರಪ್ಪ, ಶಿವಮೊಗ್ಗದ ಎಲ್ಲಾ ನೀರಾವರಿ ಯೋಜನೆಗಳಿಗೆ ಚಾಲನೆ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.

ಶಿವಶರಣೆ ಅಕ್ಕಮಹಾದೇವಿ ಜನ್ಮಸ್ಥಳ ಉಡುತಡಿ ಕ್ಷೇತ್ರದ ಅಭಿವೃದ್ಧಿಗೂ ಬದ್ಧವಾಗಿದ್ದು, ಇದು ಕೂಡ ಆದಷ್ಟು ಬೇಗನೆ ಪೂರ್ಣಗೊಳ್ಳಲಿದೆ.‌ ಕೋವಿಡ್-19 ಮತ್ತು ಪ್ರವಾಹದ ನಡುವೆಯೂ ಅಭಿವೃದ್ಧಿ ನಿಲ್ಲಬಾರದು ಎಂಬುದು ನನ್ನ ಅನಿಸಿಕೆ ಹೀಗಾಗಿ ಎಲ್ಲರ ಸಹಕಾರದಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದರು.

ಮುಂದಿನ 2 ವರ್ಷದಲ್ಲಿ ಶಿವಮೊಗ್ಗ ಮತ್ತು ಶಿಕಾರಿಪುರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಬಾಕಿ ಉಳಿದಿರಬಾರದು ಎಂದ ಸಿಎಂ ಬಿ.ಎಸ್ ಯಡಿಯೂರಪ್ಪ, ರಾಜ್ಯದ ಎಲ್ಲಾ ಜಿಲ್ಲೆಗಳ ಅಭಿವೃದ್ಧಿಗೆ ಪಣತೊಟ್ಟಿದ್ದೇನೆ, ನೀರಾವರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡುತ್ತೇನೆ, ರೈತರ ಬದುಕು ಬಂಗಾರವಾಗಬೇಕಿದೆ ಎಂದರು.

English summary
Chief Minister BS Yeddyurappa said that many districts of North Karnataka are faced heavy rainfall and will conduct an aerial survey in areas affected by floods.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X