ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ: ಗೀತಾ ಶಿವರಾಜಕುಮಾರ್
ಸೊರಬ, ನವೆಂಬರ್ 27: ಕುಟುಂಬದ ಹೊಣೆಗಾರಿಕೆ ಜತೆಗೆ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವೆ ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದರು.
ಖಾಸಗಿ ಕಾರ್ಯಕ್ರಮದ ನಿಮಿತ್ತ ಶಿವಮೊಗ್ಗಕ್ಕೆ ಆಗಮಿಸಿದ್ದ ಅವರು, ಜಿಲ್ಲೆಯ ಸೊರಬ ತಾಲೂಕು ಬಂಗಾರಧಾಮದಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸಮಾಧಿಗೆ ಪತಿ ಶಿವರಾಜ್ ಕುಮಾರ್ ಅವರೊಂದಿಗೆ ಭಾನುವಾರ ಬೆಳಿಗ್ಗೆ ಪೂಜೆ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

"ತಂದೆ ಬಂಗಾರಪ್ಪ ಅವರು ಬಡವರ ಪರವಾಗಿ ಸಾರ್ವಜನಿಕ ಜೀವನದಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದರು. ಯುವ ಸಮುದಾಯಕ್ಕೆ ಅಂತಹ ಮಹಾನ್ ನಾಯಕರ ನಾಯಕತ್ವವನ್ನು ತಿಳಿಸುವ ಅಗತ್ಯವಿದೆ," ಎಂದ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತೇನೆ ಎಂದರು.

ಗೀತಾ ಶಿವರಾಜ್ ಕುಮಾರ್ ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆ.ಡಿ.ಎಸ್. ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ನಂತರದಲ್ಲಿ ಅವರು ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು.












Click it and Unblock the Notifications