103 ಕೆಜಿ ಜಿಂಕೆ ಮಾಂಸ ಅಕ್ರಮ ಸಾಗಾಣಿಕೆ ಮಾಡುತ್ತಿದ್ದವರ ಬಂಧನ
ಶಿವಮೊಗ್ಗ. ಸೆಪ್ಟೆಂಬರ್ 7: ಅಕ್ರಮವಾಗಿ ಜಿಂಕೆ ಮಾಂಸ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗಳನ್ನು ಶಿವಮೊಗ್ಗ ಜಿಲ್ಲಾ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಚರಣೆ ಮೂಲಕ ಬಂಧಿಸಿದ್ದಾರೆ.
ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆಯ ಜಂಟಿ ಕಾರ್ಯಚರಣೆ ನಡೆಸಿ ಜಿಂಕೆಯ ಮಾಂಸವನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ಒಟ್ಟು 103 ಕೆಜಿ ಜಿಂಕೆಯ ಮಾಂಸ ಹಾಗೂ ಪ್ಯಾಂಸೆಂಜರ್ ಆಟೋವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ರೀತ್ಯಾ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.
ಪ್ಯಾಸೆಂಜರ್ ಆಟೋದಲ್ಲಿ ಜಿಂಕೆಮಾಂಸ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ತುಂಗಾನಗರ ಠಾಣೆಯ ಪೊಲೀಸ್ ಖಚಿತ ಮಾಹಿತಿ ಬಂದ ಮೇರೆಗೆ ತುಂಗಾನಗರ ಪೊಲೀಸ್ ಠಾಣಾ ಪಿಎಸ್ಐ ತಿರುಮಲೇಶ್ ಹಾಗೂ ಪೊಲೀಸ್ ಸಿಬ್ಬಂದಿಗಳು ಮತ್ತು ಶಿವಮೊಗ್ಗದ ಶಂಕರ ವಲಯದ ಉಪ ವಲಯ ಅರಣ್ಯಾಧಿಕಾರಿಗಳಾದ ಅಬ್ದುಲ್ ಮಜೀದ್ ಸೇರಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ಶಿವಮೊಗ್ಗದ ಸ್ವಾಮಿ ವಿವೇಕಾನಂದ ಬಡಾವಣೆಯ ಸಾರ್ವಜನಿಕ ರಸ್ತೆಯಲ್ಲಿ ಕಾಡುಪ್ರಾಣಿ ಜಿಂಕೆಯ ಮಾಂಸವನ್ನು ಮಾರಾಟ ಮಾಡುವ ಸಲುವಾಗಿ ಪ್ಯಾಸೆಂಜರ್ ಆಟೋದಲ್ಲಿ ಸಾಗಾಣಿಕೆ ಮಾಡುತ್ತಿದ್ದರು.
ಆರೋಪಿಗಳಾದ ಮಂಜುನಾಥ ಅಲಿಯಾಸ್ ಜಿಂಕೆ ಮಂಜ, ಉಮೇಶ್ ನಾಯ್ಕ ಆರೋಪಿಗಳಿಂದ ಒಟ್ಟು 103 ಕೆಜಿ ಜಿಂಕೆ ಮಾಂಸ, ರೂ. 800 ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ ಪ್ಯಾಂಸೆಂಜರ್ ಆಟೋವನ್ನು ವಶಪಡಿಸಿಕೊಂಡು, ದೂರು ದಾಖಲಿಸಿ ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications