• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

103 ಕೆಜಿ ಜಿಂಕೆ ಮಾಂಸ ಅಕ್ರಮ ಸಾಗಾಣಿಕೆ ಮಾಡುತ್ತಿದ್ದವರ ಬಂಧನ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ. ಸೆಪ್ಟೆಂಬರ್ 7: ಅಕ್ರಮವಾಗಿ ಜಿಂಕೆ ಮಾಂಸ ಸಾಗಾಣಿಕೆ‌ ಮಾಡುತ್ತಿದ್ದ ವ್ಯಕ್ತಿಗಳನ್ನು ಶಿವಮೊಗ್ಗ ಜಿಲ್ಲಾ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿ‌ ಕಾರ್ಯಚರಣೆ ಮೂಲಕ‌ ಬಂಧಿಸಿದ್ದಾರೆ.

ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆಯ ಜಂಟಿ ಕಾರ್ಯಚರಣೆ ನಡೆಸಿ ಜಿಂಕೆಯ ಮಾಂಸವನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ಒಟ್ಟು 103 ಕೆಜಿ ಜಿಂಕೆಯ ಮಾಂಸ ಹಾಗೂ ಪ್ಯಾಂಸೆಂಜರ್ ಆಟೋವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ರೀತ್ಯಾ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.

ಶಿವಮೊಗ್ಗದ ಗ್ರಾಮಕ್ಕೆ ಬಂದ ಚಿರತೆ: ಕ್ರಮ ಕೈಗೊಳ್ಳದ ಅರಣ್ಯ ಇಲಾಖೆಶಿವಮೊಗ್ಗದ ಗ್ರಾಮಕ್ಕೆ ಬಂದ ಚಿರತೆ: ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ

ಪ್ಯಾಸೆಂಜರ್ ಆಟೋದಲ್ಲಿ ಜಿಂಕೆ‌ಮಾಂಸ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ತುಂಗಾನಗರ ಠಾಣೆಯ ಪೊಲೀಸ್ ಖಚಿತ ಮಾಹಿತಿ ಬಂದ ಮೇರೆಗೆ ತುಂಗಾನಗರ ಪೊಲೀಸ್ ಠಾಣಾ ಪಿಎಸ್ಐ ತಿರುಮಲೇಶ್ ಹಾಗೂ ಪೊಲೀಸ್ ಸಿಬ್ಬಂದಿಗಳು ಮತ್ತು ಶಿವಮೊಗ್ಗದ ಶಂಕರ ವಲಯದ ಉಪ ವಲಯ ಅರಣ್ಯಾಧಿಕಾರಿಗಳಾದ ಅಬ್ದುಲ್ ಮಜೀದ್ ಸೇರಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ಶಿವಮೊಗ್ಗದ ಸ್ವಾಮಿ ವಿವೇಕಾನಂದ ಬಡಾವಣೆಯ ಸಾರ್ವಜನಿಕ ರಸ್ತೆಯಲ್ಲಿ ಕಾಡುಪ್ರಾಣಿ ಜಿಂಕೆಯ ಮಾಂಸವನ್ನು ಮಾರಾಟ ಮಾಡುವ ಸಲುವಾಗಿ ಪ್ಯಾಸೆಂಜರ್ ಆಟೋದಲ್ಲಿ ಸಾಗಾಣಿಕೆ ಮಾಡುತ್ತಿದ್ದರು.

ಆರೋಪಿಗಳಾದ ಮಂಜುನಾಥ ಅಲಿಯಾಸ್ ಜಿಂಕೆ ಮಂಜ, ಉಮೇಶ್ ನಾಯ್ಕ ಆರೋಪಿಗಳಿಂದ ಒಟ್ಟು 103 ಕೆಜಿ ಜಿಂಕೆ‌ ಮಾಂಸ, ರೂ. 800 ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ ಪ್ಯಾಂಸೆಂಜರ್ ಆಟೋವನ್ನು ವಶಪಡಿಸಿಕೊಂಡು, ದೂರು ದಾಖಲಿಸಿ‌ ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

English summary
The Shivmogga District Forest Department and the Police Department have jointly arrested Two persons who illegally transport Deer meat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X