ಶಿವಮೊಗ್ಗದಲ್ಲಿ ಸ್ವ ಉದ್ಯೋಗ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಅಕ್ಟೋಬರ್ 18: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ 10 ದಿನಗಳ ಕೋಳಿ ಸಾಕಾಣಿಕೆ ಉಚಿತ ತರಬೇತಿಯನ್ನು ಹಮ್ಮಿಕೊಂಡಿದೆ.

ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿದ್ದು, 7ನೇ ತರಗತಿ ಉತ್ತೀರ್ಣರಾಗಿರಬೇಕು.

ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು ಮತ್ತು ಕಡ್ಡಾಯವಾಗಿ ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಬಿಪಿಎಲ್ ಕಾರ್ಡ್ ಹೊಂದಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಮಾಡಲಾಗಿದ್ದು, ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

Invitation To Apply For Free Self Job Training In Shivamogga

ಉಚಿತ ತರಬೇತಿಯು ನವೆಂಬರ್ 2 ರಿಂದ ಪ್ರಾರಂಭವಾಗಲಿದ್ದು, ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂಬರ್. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ, ಹೊನ್ನಾಳಿ ರಸ್ತೆ, ಹೊಳಲೂರು-577 216 (ಶಿವಮೊಗ್ಗ ತಾಲ್ಲೂಕು) ಇವರಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9481955721/ 9743429595/9449371579/ 9538271653 ಅಥವಾ ದೂರವಾಣಿ ನಂ: 08182-245721 ಸಂಪರ್ಕಿಸುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+