ಜನತಾ ಕರ್ಫ್ಯೂ ಯಶಸ್ವಿ: ಶಿವಮೊಗ್ಗ ಜನರಿಂದ ಚಪ್ಪಾಳೆ

ಶಿವಮೊಗ್ಗ, ಮಾರ್ಚ್ 22: ಪ್ರಧಾನಿ ಕರೆ ನೀಡಿದ್ದ ಜನತಾ ಕರ್ಫ್ಯೂ ಯಶಸ್ವಿ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಜನರು ಈ ದಿನ ನಿಸ್ವಾರ್ಥ ಸೇವೆ ಸಲ್ಲಿಸಿದವರಿಗೆ ಧನ್ಯವಾದ ಸಲ್ಲಿಸುವ ಕಾರ್ಯಕ್ರಮ ನಡೆಯಿತು. ಶಿಕಾರಿಪುರದ ನಿವಾಸದ ಮುಂದೆ ಸಂಸದ ಬಿ.ವೈ ರಾಘವೇಂದ್ರ ಅವರು ಇಂದು ಚಪ್ಪಾಳೆ ತಟ್ಟಿ ಅಭಿನಂದಿಸಿದರು.

ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಗಿರುವ ಬಿ.ವೈ ವಿಜಯೇಂದ್ರ ಸಹ ಚಪ್ಪಾಳೆ ತಟ್ಟಿ ಅಭಿನಂದಿಸಿದರು. ವಿದ್ಯಾನಗರ ಸಮೀಪದ ನಿವಾಸದಲ್ಲಿ ವಿಜಯೇಂದ್ರ ಅಭಿನಂದನೆ ಸಲ್ಲಿಸಿದರು.

ಇನ್ನು ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್ ಶಂಕರಮೂರ್ತಿ ಅವರು ಧನ್ಯವಾದ ಸಮರ್ಪಣೆ ಮಾಡಿದರು. ಶಿವಮೊಗ್ಗದ ವಿನಾಯಕನಗರದ ನಿವಾಸದಲ್ಲಿ ನಿಸ್ವಾರ್ಥ ಸೇವೆ ಮಾಡಿದವರಿಗೆ ಅಭಿನಂದಿಸಿದರು.

Janata Curfew Successful In Shivamogga

ಇವರಿಗೆ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್ ಅರುಣ್ ಸಾಥ್ ನೀಡಿದರು. ಶಿವಮೊಗ್ಗ ಜಿಲ್ಲೆಯ ಹಲವೆಡೆ ಜನರಿಂದಲೂ ಧನ್ಯವಾದ ಸಮರ್ಪಣೆ ಮಾಡಲಾಯಿತು.

Janata Curfew Successful In Shivamogga

ಶಿವಮೊಗ್ಗ, ಸಾಗರ, ಶಿಕಾರಿಪುರ, ಭದ್ರಾವತಿ ಸೇರಿದಂತೆ ಹಲವೆಡೆ ಜನರಿಂದ ಅಭಿನಂದನೆ. ರಸ್ತೆ, ಪೆಟ್ರೋಲ್ ಬಂಕ್, ಅಪಾರ್ಟ್ಮೆಂಟ್ ಸೇರಿದಂತೆ ಹಲವೆಡೆ ಜನರಿಂದ ಧನ್ಯವಾದ ಸಮರ್ಪಿಸಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+