• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿವಮೊಗ್ಗ : ಸಾಗರದಲ್ಲಿ ಶನಿವಾರ ಉದ್ಯೋಗ ಮೇಳ

|

ಶಿವಮೊಗ್ಗ, ಡಿ.5 : ನಿರುದ್ಯೋಗ ಯುವಕ-ಯುವತಿಯರಿಗೆ ಅನುಕೂಲವಾಗಲು ಸಾಗರದಲ್ಲಿ ಶನಿವಾರ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. 140 ಕಂಪನಿಗಳು 6300 ಖಾಲಿ ಹುದ್ದೆಗಳ ನೇಮಕಾತಿಯನ್ನು ಮೇಳದಲ್ಲಿ ಮಾಡಿಕೊಳ್ಳಲಿವೆ.

ಡಿ.6ರಂದು ಬೆಳಗ್ಗೆ 9ಗಂಟೆಗೆ ಸಾಗರದ ನೆಹರೂ ಮೈದಾನದಲ್ಲಿ ಉದ್ಯೋಗ ಮೇಳಕ್ಕೆ ಚಾಲನೆ ದೊರೆಯಲಿದೆ. ಕಾರ್ಮಿಕ ಸಚಿವ ಪರಮೇಶ್ವರ ನಾಯಕ್ ಉದ್ಯೋಗ ಮೇಳವನ್ನು ಉದ್ಘಾಟಿಸಲಿದ್ದು, ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ನಡೆಯಲಿರುವ ಉದ್ಯೋಗ ಮೇಳದಲ್ಲಿ 140 ಕಂಪನಿಗಳು ಪಾಲ್ಗೊಳ್ಳಲಿದ್ದು, 6300 ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲಿವೆ. [81 ವಲಯ ಅರಣ್ಯಾಧಿಕಾರಿ ಹುದ್ದೆಗಳು ಖಾಲಿ ಇವೆ]

ಎಸ್‌ಎಸ್‌ಎಲ್‌ಸಿ ಅನುತ್ತೀರ್ಣ/ಉತ್ತೀರ್ಣ, ಜೆಓಸಿ, ಐಟಿಐ, ಡಿಪ್ಲೊಮೋ, ಸಾಮಾನ್ಯ ಪದವೀಧರರು, ಇಂಜಿನಿಯರಿಂಗ್, ಸ್ನಾತಕೋತ್ತರ ಪದವೀಧರರು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಸಂಜೆ 4 ಗಂಟೆಗೆ ಉದ್ಯೋಗ ಪತ್ರ ವಿತರಣೆ ಮಾಡಲಾಗುತ್ತದೆ.

ನೂತನ ರೈಲಿಗೆ ಶನಿವಾರ ಚಾಲನೆ : ವಾರಕ್ಕೆ ಎರಡು ಬಾರಿ (ಶನಿವಾರ-ಭಾನುವಾರ) ಯಶವಂತಪುರದಿಂದ-ಶಿವಮೊಗ್ಗಕ್ಕೆ ಸಂಚರಿಸುವ ನೂತನ ರೈಲಿಗೆ ಶನಿವಾರ ಬೆಳಗ್ಗೆ 11 ಗಂಟೆಗೆ ಚಾಲನೆ ದೊರೆಯಲಿದೆ. ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಸಂಸದ ಯಡಿಯೂರಪ್ಪ ಅವರು ರೈಲಿಗೆ ಚಾಲನೆ ನೀಡಲಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Walk-in Interview on Job Fair in Sagara taluk of Shimogga on December 6, 2014. Job Fair will held in Neharu maidana from 9.30 AM.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more