ಶಿವಮೊಗ್ಗ: ಮೇ 9ರಂದು ಉದ್ಯೋಗ ಮೇಳ, ವಿವರಗಳು

ಶಿವಮೊಗ್ಗ, ಮೇ 08: ಶಿವಮೊಗ್ಗ ಮತ್ತು ಬಳ್ಳಾರಿಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿ ಇದೆ. ಶಿವಮೊಗ್ಗದಲ್ಲಿ ಮೇ 9ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಬಳ್ಳಾರಿಯಲ್ಲಿ ಅತಿಥಿ ಶಿಕ್ಷಕ, ಉಪನ್ಯಾಸಕರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮೇ 9ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

Job Fair Shivamogga Employment Exchange Office May 9

ಈ ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಇತರ ಪದವಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಭಾಗವಹಿಸಬಹುದು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಆಸಕ್ತ, ಅರ್ಹ ಅಭ್ಯರ್ಥಿಗಳು ರೆಸ್ಯೂಮ್, ಆಧಾರ್ ಕಾರ್ಡ್ ಪ್ರತಿ, ಅಗತ್ಯ ದಾಖಲೆಗಳ ಜೊತೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಖುದ್ದಾಗಿ ಭೇಟಿ ನೀಡಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 08182-255293/ 9380663606/ 9901914601.

ಬಳ್ಳಾರಿಯಲ್ಲಿ ಕೆಲಸ ಖಾಲಿ ಇದೆ: ಬಳ್ಳಾರಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕಂಪ್ಲಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಬಳ್ಳಾರಿ ನಗರದ ಅಲ್ಪಸಂಖ್ಯಾತರ ಮೌಲನಾ ಆಜಾದ್ ಮಾದರಿ ಮಾದರಿ ಪದವಿ ಪೂರ್ವ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ, ಶಿಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.

2025-26ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಅತಿಥಿ ಶಿಕ್ಷಕ ಮತ್ತು ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅತಿಥಿ ಶಿಕ್ಷಕರ ಹುದ್ದೆಗೆ ಬಿಎಸ್ಸಿ/ ಬಿಇಡಿ ಮತ್ತು ಅತಿಥಿ ಉಪನ್ಯಾಸಕರ ಹುದ್ದೆಗೆ ಎಂಎ/ ಬಿಇಡಿ ಅಥವಾ ಎಂಎಸ್ಸಿ/ ಬಿಇಡಿ ವಿದ್ಯಾರ್ಹತೆ ಹೊಂದಿದ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಂಪ್ಲಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 7353346069 ಮತ್ತು 8861623814. ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲನಾ ಆಜಾದ್ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯನ್ನು ಸಹ ಸಂಪರ್ಕಿಸಬಹುದು.

ಕೌಶಲ್ಯಾಭಿವೃದ್ಧಿ ತರಬೇತಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಮೇ 20 ರಿಂದ ಜೂನ್ 18 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿಯನ್ನು ನೀಡಲಿದೆ.

ಬೆಣ್ಣೆ ಬಿಸ್ಕೆಟ್, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕೆಟ್, ಮಸಾಲ ಬಿಸ್ಕೆಟ್, ಕೋಕೊನಟ್ ಕ್ಯಾಸಲ್ಸ್, ಫ್ರೂಟ್‌ ಕೇಕ್, ಸ್ಪಾಂಜ್‌ಕೇಕ್, ಜೆಲ್‌ಕೇಕ್, ಬಟರ್ ಐಸಿಂಗ್, ಮಿಲ್ಕ್ ಬ್ರೆಡ್, ದಿಲ್ ಪಸಂದ್, ಬಾಂಬೆ ಖಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿ ಆಯೋಜಿಸಿದೆ.

ಆಕಸ್ತರು ತರಬೇತಿ ಶುಲ್ಕ ರೂ. 4500 ಗಳನ್ನು ಪಾವತಿಸಿ, ಮೇ 19 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯವನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ 9449187763 ಮತ್ತು 9686555897 ಸಂಖ್ಯೆಗೆ ಕರೆ ಮಾಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+