ಜೋಗ ಜಲಪಾತ ವೀಕ್ಷಣೆಗೆ ಹೋಗುವ ಪ್ರವಾಸಿಗರಿಗೆ ಗುಡ್ ನ್ಯೂಸ್
ಶಿವಮೊಗ್ಗ, ಏಪ್ರಿಲ್ 29: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತಕ್ಕೆ ಹೋಗುವ ಪ್ರವಾಸಿಗರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಮೇ 1ರ ಗುರುವಾರದಿಂದ ಜೋಗ ಪ್ರವಾಸಿಗರಿಗೆ ಮುಕ್ತವಾಗಲಿದೆ. ಜೋಗ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿಗಳ ಕಾರಣ ಜನವರಿ ತಿಂಗಳಿನಿಂದ ಏಪ್ರಿಲ್ 30ರ ತನಕ ಜೋಗಕ್ಕೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು.
ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರಿದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಮೇ 1 ರಿಂದ ಸಾರ್ವಜನಿಕರ ಹಾಗೂ ಪ್ರವಾಸಿಗರಿಗೆ ಜೋಗ ಜಲಪಾತದ ವೀಕ್ಷಣೆಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ನೂರಾರು ಪ್ರವಾಸಿಗರ ಭೇಟಿ: ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಜೋಗ ಜಲಪಾತ ಒಂದಾಗಿದೆ. ಭಾರತದ ಅತಿ ಎತ್ತರದ ಜೋಗ ಜಲಪಾತ ಮತ್ತು ಸುತ್ತಮುತ್ತಲಿನ ನಿಸರ್ಗದ ಸೌಂದರ್ಯವನ್ನು ಸವಿಯಲು ಸದಾ ಕಾಲ ಪ್ರವಾಸಿಗರು ಆಗಮಿಸುತ್ತಾರೆ. ವಾರಾಂತ್ಯ ಮತ್ತು ಸಾಲು ಸಾಲು ರಜೆಗಳ ಸಂದರ್ಭದಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕವಾಗಿರುತ್ತದೆ.
ಜೋಗದಲ್ಲಿ ಶರಾವತಿ ನದಿ ರಾಜಾ, ರಾಣಿ, ರೋರರ್ ಮತ್ತು ರಾಕೆಟ್ ಹೆಸರಿನ ಜಲಧಾರೆಗಳ ಮೂಲಕ ಧುಮ್ಮಿಕ್ಕುತ್ತದೆ. ಮಳೆಗಾಲದಲ್ಲಿ ಜೋಗದ ಸೌಂದರ್ಯವನ್ನು ಸವಿಯುವುದು ಒಂದು ಅವಿಸ್ಮರಣೀಯ ಅನುಭವಾಗಿದೆ. ಜೋಗ ಸುತ್ತಮುತ್ತಲೂ ಅನೇಕ ಪ್ರವಾಸಿ ತಾಣಗಳಿದ್ದು, ಸದಾ ಕಾಲ ಜನರು ಭೇಟಿ ನೀಡುತ್ತಲೇ ಇರುತ್ತಾರೆ.
ದಟ್ಟವಾದ ಕಾಡು ಮತ್ತು ಗುಡ್ಡಗಳ ನಡುವಲ್ಲಿ ಹರಿದು ಶರಾವತಿ ನದಿಯು ಹರಿದು ಅತಿ ಎತ್ತರದಿಂದ ಭೋರ್ಗರೆಯುತ್ತಾ ನಾಲ್ಕು ಸೀಳಾಗಿ ಧುಮುಕುತ್ತಿರುವ ಜೋಗ ಜಲಪಾತದ ವೈಭವವನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ, ಅದನ್ನು ಕಣ್ತುಂಬಿಕೊಂಡು ಆನಂದಿಸಬೇಕು.
'ಸರ್ವ ಋತು ಜೋಗ' ಎಂಬ ಹೆಸರಿನಲ್ಲಿ ಸರ್ಕಾರ ಜೋಗ ಜಲಪಾತದ ಅಭಿವೃದ್ಧಿ ಕಾರ್ಯವನ್ನು ಕೈಗೊಂಡಿದೆ. ಪ್ರವಾಸಿ ತಾಣವಾಗಿ ಜೋಗವನ್ನು ಅಭಿವೃದ್ಧಿ ಪಡಿಸಲು ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಸುಂದರವಾದ ಜೋಗ ಜಲಪಾತದಲ್ಲಿ ಪ್ರವಾಸಿಗರಿಗೆ ಅಗತ್ಯ ಮೂಲ ಸೌಕರ್ಯವನ್ನು ಒದಗಿಸಲು ಕೈಗೊಂಡ ಹಲವು ಕಾಮಗಾರಿಗಳು ಪೂರ್ಣಗೊಂಂಡಿವೆ.
ಸುಮಾರು 183 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಜೋಗಕ್ಕೆ ಆಗಮಿಸುವ ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳ ಜೊತೆ ಮನರಂಜನೆಯನ್ನು ಒದಗಿಸಲು ವಿವಿಧ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ಜೋಗ ಜಲಪಾತದ ಪ್ರವೇಶ ದ್ವಾರವನ್ನು ಅಭಿವೃದ್ಧಿಗೊಳಿಸಲಾಗಿದೆ.
ತಾತ್ಕಾಲಿಕ ನಿರ್ಬಂಧ: 2024ರ ಡಿಸೆಂಬರ್‌ನಲ್ಲಿ ಜೋಗಕ್ಕೆ ಪ್ರವಾಸಿಗರ ಭೇಟಿ ತಾತ್ಕಾಲಿಕವಾಗಿ ನಿರ್ಬಂಧಿಸಿ ಆದೇಶವನ್ನು ಹೊರಡಿಸಲಾಗಿತ್ತು. ಮುಖ್ಯದ್ವಾರದ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು, ಜನವರಿ 1 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಭಂದಿಸಲಾಗಿತ್ತು. ಬಳಿಕ ಅದನ್ನು ಏಪ್ರಿಲ್ 30ರ ತನಕ ವಿಸ್ತರಣೆ ಮಾಡಲಾಗಿತ್ತು.
ಕಾಮಗಾರಿಯ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆ ಉಂಟಾಗಬಾರದು ಎಂದು ಪ್ರವೇಶ ನಿರ್ಭಂದಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜೋಗ ನಿರ್ವಹಣಾ ಪ್ರಾಧಿಕಾರ ಮನವಿ ಮಾಡಿತ್ತು.
ಜೋಗದಲ್ಲಿ ಈಗಾಗಲೇ ಪ್ರವಾಸಿಗರ ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ದ್ವಿಚಕ್ರ ವಾಹನ ಹಾಗೂ ಲಘು ವಾಹನಗಳು ಪ್ರತ್ಯೇಕ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡುವಂತೆ ವ್ಯವಸ್ಥೆ ಮಾಡಲಾಗಿದೆ. ಜೋಗ ಪರಿಸರವನ್ನು ಸಂಪೂರ್ಣ ಪ್ಲಾಸ್ಟಿಕ್ ಮುಕ್ತಗೊಳಿಸಲು ಹಲವು ಕ್ರಮ ಕೈಗೊಳ್ಳಲಾಗಿದೆ.
ಜೋಗದ ಸುತ್ತಮುತ್ತಲಿನ ಪ್ರದೇಶದಲ್ಲಿ, ಶೌಚಾಲಯಗಳ ಬಳಿ, ತೂಗು ಸೇತುವೆಯ ಬಳಿ ಪ್ರವಾಸಿಗರ ಪಾದಚಾರಿ ಮಾರ್ಗ, ಜೋಗ ವೀಕ್ಷಣಾಲಯದ ರಸ್ತೆಯ ಅಕ್ಕಪಕ್ಕದಲ್ಲಿರುವ ಅನುಪಯುಕ್ತ ತ್ಯಾಜ್ಯಗಳನ್ನು ತಕ್ಷಣ ವಿಲೇವಾರಿ ಮಾಡಬೇಕು. ಪ್ಲಾಸ್ಟಿಕ್ ಸೇರಿದಂತೆ ಪರಿಸರಕ್ಕೆ ಹಾನಿಕಾರಕವಾದ ವಸ್ತುಗಳನ್ನು ಎಸೆಯದಂತೆ ಪ್ರವಾಸಿಗರಿಗೆ ನಿರಂತರ ಸೂಚನೆಗಳನ್ನು ನೀಡಲು ವ್ಯವಸ್ಥೆ ಮಾಡಲಾಗುತ್ತಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications