ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಎಸ್ ಎಸ್ ಜ್ಯೋತಿಪ್ರಕಾಶ್ ನೇಮಕ
ಶಿವಮೊಗ್ಗ, ಆಗಸ್ಟ್ 27: ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ಅಧ್ಯಕ್ಷರಾಗಿ ಎಸ್.ಎಸ್.ಜ್ಯೋತಿಪ್ರಕಾಶ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ಈ ಕುರಿತು ನಗರಾಭಿವೃದ್ಧಿ ಇಲಾಖೆಯು ಅಧಿಕೃತ ಪ್ರಕಟಣೆ ಹೊರಡಿಸಿದೆ. ನಾಲ್ಕು ಜನ ಸದಸ್ಯರು ಹಾಗೂ ಓರ್ವ ಅಧ್ಯಕ್ಷರ ಹೆಸರನ್ನು ನೇಮಕಗೊಳಿಸಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಅದರಂತೆ ಎಸ್.ಎಸ್.ಜ್ಯೋತಿಪ್ರಕಾಶ್ ಅವರನ್ನು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಶಿವಮೊಗ್ಗದ ಉಮಾಮೂರ್ತಿ, ಎಸ್.ದೇವರಾಜ್, ಭದ್ರಾವತಿಯ ಬಿ.ಜಿ.ರಾಮಲಿಂಗಯ್ಯ, ಹಾಗೂ ಕದಿರೇಶ್ ಅವರನ್ನು ಸೂಡಾ ಸದಸ್ಯರನ್ನಾಗಿ ನೇಮಕಗೊಳಿಸಿ ಆದೇಶಿಸಲಾಗಿದೆ.












Click it and Unblock the Notifications