ಶಿವಮೊಗ್ಗ ಕಾಂಗ್ರೆಸ್ ಕಚೇರಿಯಲ್ಲಿ ಉಲ್ಟ ಧ್ವಜ ಹಾರಿಸಿದ ಕಾಗೋಡು
ಶಿವಮೊಗ್ಗ, ಆಗಸ್ಟ್ 16 : ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಉಲ್ಟ ಧ್ವಜ ಹಾರಿಸಿದ್ದಾರೆ.
ಧ್ವಜ ಹಾರಿದ ನಂತರವೇ ಪ್ರಮಾದ ಬೆಳಕಿಗೆ ಬಂದಿದ್ದು, ಕೂಡಲೇ ಧ್ವಜವನ್ನು ಕೆಳಗಿಳಿಸಿ ಸರಿ ಪಡಿಸಿ ಮತ್ತೆ ಹಾರಿಸಲಾಯಿತು. ರಾಷ್ಟ್ರೀಯ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಆಗಿರುವ ಈ ಪ್ರಮಾದಕ್ಕೆ ಸಾಮಾಜಿಕ ಮಾಧ್ಯಮ ಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಗೋಡು ತಿಮ್ಮಪ್ಪ, ಹಾಗೇನೂ ಆಗಿಲ್ಲ. ಸ್ವಲ್ಪ ವ್ಯತ್ಯಾಸ ಆಗಿತ್ತು ಸರಿ ಮಾಡಿದ್ದೇವೆ. ನಮ್ಮ ಪಕ್ಷದವರೇ ಈ ವಿಷಯ ಬಹಿರಂಗ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಸಕ ಪ್ರಸನ್ನ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀ.ನಾ.ಶ್ರೀನಿವಾಸ ಇನ್ನಿತರರು ಉಪಸ್ಥಿತರಿದ್ದರು.