ಕಾಗೋಡು ತಿಮ್ಮಪ್ಪ ಕಾಗದದ ಹುಲಿ : ಕೆಎಸ್ ಈಶ್ವರಪ್ಪ

 KS Eshwarappa
ಶಿವಮೊಗ್ಗ, ಡಿ. 9 : ಸಾಗರ ಕ್ಷೇತ್ರದ ಶಾಸಕ ಮತ್ತು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಕಾಗಗದ ಹುಲಿ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಅವರಿಗೆ ಯಾವುದೇ ಕಾಳಜಿ ಇಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಹುಸಿ ಭರವಸೆ ನೀಡುವ ಕಾಗೋಡು ತಿಮ್ಮಪ್ಪ ಅವರು ರಾಜ್ಯದ ಮತ್ತು ಜಿಲ್ಲೆಯ ಸಮಸ್ಯೆಗಳ ಕುರಿತು ಕೇವಲ ಹೇಳಿಕೆಗಳನ್ನು ಮಾತ್ರ ನೀಡುತ್ತಾರೆ ಎಂದು ಅವರು ಆರೋಪಿಸಿದ್ದಾರೆ.

ಸೋಮವಾರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಾಗರ ಕ್ಷೇತ್ರದ ಶಾಸಕ ಮತ್ತು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲ. ಕೇವಲ ಪತ್ರಿಕೆಗಳಲ್ಲಿ ಹೇಳಿಕೆ ನೀಡುವ ಮೂಲಕ ಅವರು ಅಭಿವೃದ್ಧಿ ಬಗ್ಗೆ ಮಾತನಾಡುತ್ತಾರೆ. ಅವರು ಕೇವಲ ಕಾಗದಕ್ಕೆ ಮಾತ್ರ ಸೀಮಿತ ಎಂದು ಈಶ್ವರಪ್ಪ ವ್ಯಂಗ್ಯವಾಡಿದರು.

ರಾಜ್ಯದ ಸಮಸ್ಯೆಗಳ ಬಗ್ಗೆ ಕಾಗೋಡು ತಿಮ್ಮಪ್ಪ ತಲೆಕೆಡಿಸಿಕೊಳ್ಳುತ್ತಿಲ್ಲ, ಹುಸಿ ಭರವಸೆ ನೀಡುವ ಮೂಲಕ ಕಾರ್ಯನಿರ್ವಹಿಸುತ್ತಾರೆ. ಸಿಎಂ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದಿದೆ. ಕಾಗೋಡು ತಿಮ್ಮಪ್ಪ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗಾಗಿ ಏನು ಮಾಡಿದ್ದಾರೆ ಎಂದು ಈಶ್ವರಪ್ಪ ಪ್ರಶ್ನಿಸಿದರು. ಸರ್ಕಾರ ರೈತರ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗುತ್ತಿಲ್ಲ. ಸ್ಪೀಕರ್ ಸಹ ಜಿಲ್ಲೆಯ ಅಭಿವೃದ್ಧಿಯನ್ನು ಕಡೆಗಣಿಸಿಲ್ಲ ಎಂದು ಆರೋಪಿಸಿದರು.

ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಪರಿಹಾರ ಒದಗಿಸಿ ಕೊಡುವುದಾಗಿ ಕಾಗೋಡು ತಿಮ್ಮಪ್ಪ ಸಿಎಂ ಸಿದ್ದರಾಮಯ್ಯ ಅವರನ್ನು ಜಿಲ್ಲೆಗೆ ಕರೆ ತಂದಿದ್ದರು. ಆದರೆ, ಇಲ್ಲಿಯ ತನಕ ಯಾವ ಬೆಳೆಗಾರರಿಗೂ ಪರಿಹಾರ ದೊರಕಿಲ್ಲ. ಕಾಗೋಡು ತಿಮ್ಮಪ್ಪ ಕೇವಲ ಕಾಗದಕ್ಕೆ ಮಾತ್ರ ಸೀಮಿತ. ಆದ್ದರಿಂದ ಅವರು ಪೇಪರ್ ಟೈಗರ್ ಎಂದು ಈಶ್ವರಪ್ಪ ಕುಟುಕಿದರು.

ಶ್ವೇತ ಪತ್ರ ಹೊರಡಿಸಿ : ಸಿಎಂ ಸಿದ್ದರಾಮಯ್ಯ ರಾಜ್ಯದ ರೈತರ ಸಮಸ್ಯೆ ಪರಿಹಾರ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ರಾಜ್ಯದ ಹಣಕಾಸು ಪರಿಸ್ಥಿತಿ ಬಗ್ಗೆ ಅನುಮಾನ ಉಂಟಾಗುತ್ತಿದೆ. ತಕ್ಷಣ ಸಿಎಂ ಶ್ವೇತ ಪತ್ರ ಹೊರಡಿಸಿ, ರಾಜ್ಯದ ಆರ್ಥಿಕ ಸ್ಥಿತಿಗತಿ ಕುರಿತು ಮಾಹಿತಿ ನೀಡಬೇಕು ಎಂದು ಈಶ್ವರಪ್ಪ ಒತ್ತಾಯಿಸಿರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+