ಯಡಿಯೂರಪ್ಪ ವಿರುದ್ಧ ಕಾಗೋಡು ತಿಮ್ಮಪ್ಪ ಸ್ಪರ್ಧೆ?
ಶಿವಮೊಗ್ಗ, ಫೆ.18 : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ತಾತ್ಕಾಲಿಕ ಉತ್ತರ ದೊರಕಿದ್ದು, ವಿಧಾನಸಭೆ ಸ್ಪೀಕರ್ ಮತ್ತು ಸಾಗರ ಕ್ಷೇತ್ರದ ಶಾಸಕ ಕಾಗೋಡು ತಿಮ್ಮಪ್ಪ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.
ದೆಹಲಿಯಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಕೇಂದು ಚುನಾವಣಾ ಸಮಿತಿ ಸಭೆಯಲ್ಲಿ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಕುರಿತಂತೆ ಚರ್ಚೆ ನಡೆದಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಕಾಗೋಡು ತಿಮ್ಮಪ್ಪ ಅವರನ್ನು ಯಡಿಯೂರಪ್ಪ ವಿರುದ್ಧ ಕಣಕ್ಕಿಳಿಸಬೇಕು ಎಂಬ ಕುರಿತು ಸಹ ಚರ್ಚೆ ನಡೆದಿದ್ದು, ಈ ಕುರಿತು ಅಂತಿಮ ತೀರ್ಮಾನ ಕೈಗೊಂಡಿಲ್ಲ. [ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯಾರು]

ಮೊದಲು ಯಡಿಯೂರಪ್ಪ ಅವರು ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರಿಂದ ಕಾಂಗ್ರೆಸ್ ಸಂತಸಗೊಂಡಿತ್ತು. ಕ್ಷೇತ್ರವನ್ನು ಸುಲಭವಾಗಿ ಕೈವಶ ಮಾಡಿಕೊಳ್ಳಬಹುದು ಎಂದು ಯೋಜನೆ ರೂಪಿಸಿತ್ತು. ಆದರೆ, ಕಾರ್ಯಕರ್ತರ ಒತ್ತಡಕ್ಕೆ ಮಣಿದ ಯಡಿಯೂರಪ್ಪ ಶಿವಮೊಗ್ಗದಿಂದ ಸ್ಪರ್ಧಿಸುತ್ತೇನೆ ಎಂದು ಘೋಷಿಸಿದರು. [ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಸರತ್ತು ಎಲ್ಲಿಗೆ ಬಂತು]
ಅಂದಿನಿಂದಲೇ ಯಡಿಯೂರಪ್ಪ ಅವರಿಗೆ ಪ್ರತಿಸ್ಪರ್ಧೆ ನೀಡಬಲ್ಲ ಅಭ್ಯರ್ಥಿಗಾಗಿ ಕಾಂಗ್ರೆಸ್ ಶಿವಮೊಗ್ಗದಲ್ಲಿ ಹುಡುಕಾಟ ಆರಂಭಿಸಿತು. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಕುಮಾರ್ ಬಂಗಾರಪ್ಪ, ಮಂಜುನಾಥ್ ಭಂಡಾರಿ, ಮಾಜಿ ಶಾಸಕ ಚಂದ್ರಶೇಖರಪ್ಪ ಪುತ್ರ ಸೇರಿದಂತೆ ಹಲವರು ಹೆಸರು ಕೇಳಿಬಂದಿತು. ಕೊನೆಗೆ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಹೆಸರುಗಳು ಕೇಳಿಬಂದವು. [ಕಾಂಗ್ರೆಸ್ ಸಂಭಾವ್ಯ ಪಟ್ಟಿ]
ಆದರೆ, ಯಡಿಯೂರಪ್ಪ ಅವರಿಗೆ ಪ್ರತಿಸ್ಪರ್ಧೆ ನೀಡುವ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಕಾಗೋಡು ತಿಮ್ಮಪ್ಪ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಸೋಮವಾರ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿಯೂ ಈ ಕುರಿತು ಚರ್ಚೆ ನಡೆಸಿದ್ದು, ಕಾಗೋಡು ತಿಮ್ಮಪ್ಪ ಅವರನ್ನು ಕಣಕ್ಕಿಳಿಸುವ ಕುರಿತು ಚರ್ಚಿಸಲಾಗಿದೆ. ಆದರೆ, ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗಿಲ್ಲ.












Click it and Unblock the Notifications