ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಗೋಡು ತಿಮ್ಮಪ್ಪಗೆ ಕೋವಿಡ್ ಸೋಂಕು; ಆಸ್ಪತ್ರೆಗೆ ದಾಖಲು

|
Google Oneindia Kannada News

ಶಿವಮೊಗ್ಗ, ಅಕ್ಟೋಬರ್ 11: ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರನ್ನು ಆಸ್ಪತ್ರೆ ದಾಖಲು ಮಾಡಲಾಗಿದೆ. ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿದೆ.

88 ವರ್ಷದ ಕಾಗೋಡು ತಿಮ್ಮಪ್ಪ ಅವರನ್ನು ಸಾಗರದಿಂದ ಬೆಂಗಳೂರಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯಾವುದೇ ರೋಗದ ಲಕ್ಷಣಗಳಿಲ್ಲ, ಅವರು ಆರೋಗ್ಯವಾಗಿದ್ದಾರೆ ಎಂದು ಕುಟುಂಬದವರು ಹೇಳಿದ್ದಾರೆ.

ಕಾಗೋಡು ತಿಮ್ಮಪ್ಪಗೆ ಪತ್ನಿ ವಿಯೋಗಕಾಗೋಡು ತಿಮ್ಮಪ್ಪಗೆ ಪತ್ನಿ ವಿಯೋಗ

ಶನಿವಾರ ಸಣ್ಣದಾಗಿ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕಾಗೋಡು ತಿಮ್ಮಪ್ಪ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ. ಶುಕ್ರವಾರ ಅವರು ಕೋವಿಡ್ ಪರೀಕ್ಷೆಗೆ ಮಾದರಿ ಕೊಟ್ಟಿದ್ದು, ಶನಿವಾರ ವರದಿ ಪಾಸಿಟಿವ್ ಎಂದು ಬಂದಿದೆ.

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತೀವ್ರ ಅಸ್ವಸ್ಥ, ಆಸ್ಪತ್ರೆಗೆ ದಾಖಲು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತೀವ್ರ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Kagodu Thimmappa Tested Positive For COVID 19

ಇಳಿ ವಯಸ್ಸಿನಲ್ಲಿಯೂ ಕಾಗೋಡು ತಿಮ್ಮಪ್ಪ ಸಕ್ರಿಯರಾಗಿದ್ದರು. ಮಾಸ್ಕ್, ಕೈಗವಸುಗಳನ್ನು ಹಾಕಿಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ವಿರುದ್ಧ ನಡೆದ ಪ್ರತಿಭಟನೆಯಲ್ಲಿಯೂ ಪಾಲ್ಗೊಂಡಿದ್ದರು.

ರಾಜಕೀಯ ನಿವೃತ್ತಿ ಘೋಷಿಸಿದ ಕಾಗೋಡು ತಿಮ್ಮಪ್ಪ!ರಾಜಕೀಯ ನಿವೃತ್ತಿ ಘೋಷಿಸಿದ ಕಾಗೋಡು ತಿಮ್ಮಪ್ಪ!

ಇಳಿ ವಯಸ್ಸಿನಲ್ಲಿಯೂ ಕಾಗೋಡು ತಿಮ್ಮಪ್ಪ ಸಕ್ರಿಯರಾಗಿದ್ದರು. ಮಾಸ್ಕ್, ಕೈಗವಸುಗಳನ್ನು ಹಾಕಿಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ವಿರುದ್ಧ ನಡೆದ ಪ್ರತಿಭಟನೆಯಲ್ಲಿಯೂ ಪಾಲ್ಗೊಂಡಿದ್ದರು.

2013ರ ವಿಧಾನಸಭೆ ಚುನಾವಣೆಯಲ್ಲಿ ಸಾಗರ ಕ್ಷೇತ್ರದಲ್ಲಿ ಕಾಗೋಡು ತಿಮ್ಮಪ್ಪ ಗೆಲುವು ಸಾಧಿಸಿದ್ದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಮೊದಲು ಸ್ಪೀಕರ್ ಆಗಿದ್ದರು, ಬಳಿಕ ಕಂದಾಯ ಸಚಿವರಾಗಿ ಸಿದ್ದರಾಮಯ್ಯ ಸಂಪುಟದಲ್ಲಿ ಕೆಲಸ ಮಾಡಿದ್ದರು.

ಶನಿವಾರದ ವರದಿಯಂತೆ ಶಿವಮೊಗ್ಗ ಜಿಲ್ಲೆಯಲ್ಲಿ 259 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 18,650.

English summary
Senior Congress leader and former revenue minister Kagodu Thimmappa admitted to the private hospital in Bengaluru after he tested positive for COVID 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X