ಶಿವಮೊಗ್ಗ; ಮೇ 13ರಂದು ಮತ ಎಣಿಕೆ, ಸಂಚಾರ ಮಾರ್ಗ ಬದಲು

ಶಿವಮೊಗ್ಗ, ಮೇ 11; ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯಗೊಂಡಿದೆ. ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಮತ ಎಣಿಕೆ ಕೇಂದ್ರವಾದ ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಬಿಗಿಭದ್ರತೆಯಲ್ಲಿ ಇಡಲಾಗಿದೆ. ಮೇ 13ರ ಶನಿವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ.

ವಿಧಾನಸಭಾ ಚುನಾವಣೆಯ ಮತ ಎಣಿಕೆ ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ಸುಗಮ ಸಂಚಾರದ ದೃಷ್ಟಿಯಿಂದ ಅಂದು ತಾತ್ಕಾಲಿಕವಾಗಿ ವಾಹನಗಳ ಸಂಚಾರ ಮಾರ್ಗ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Karnataka Assembly Elections 2023 Counting

ಮತ ಎಣಿಕೆಯ ಹಿನ್ನಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಸುಗಮವಾಗಿರುವಂತೆ ನೋಡಿಕೊಳ್ಳಲು ಮೇ 13 ರ ಬೆಳಗ್ಗೆ 6 ರಿಂದ ಮೇ 14ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ .ಆರ್ ಆದೇಶ ಹೊರಡಿಸಿದ್ದಾರೆ.

ಶನಿವಾರ ಶಿವಮೊಗ್ಗ ನಗರದಲ್ಲಿ ವಾಹನ ಸಂಚಾರ ಮಾರ್ಗದಲ್ಲಿ ಬಲಾವಣೆ ಮಾಡಿದ್ದು, ಪರ್ಯಾಯ ಮಾರ್ಗದಲ್ಲಿ ವಾಹನಗಳು ಸಂಚಾರ ನಡೆಸಲು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ. ಆರ್ ಅಧಿಸೂಚನೆ ಹೊರಡಿಸಿದ್ದಾರೆ.

Karnataka Assembly Elections 2023 Counting

ಮಾರ್ಗದ ವಿವರ ಹೀಗಿದೆ

* ಸಹ್ಯಾದ್ರಿ ಕಾಲೇಜಿನ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧಿಸಲಾಗಿದೆ.

* ಬೆಂಗಳೂರು, ಭದ್ರಾವತಿ, ಎನ್. ಆರ್. ಪುರ ಕಡೆಯಿಂದ ಬರುವ ಎಲ್ಲಾ ಭಾರೀ ವಾಹನ ಮತ್ತು ಎಲ್ಲಾ ಬಸ್ಸುಗಳು ಹಾಗೂ ಕಾರು, ದ್ವಿಚಕ್ರ, ತ್ರಿಚಕ್ರ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಹೋಗುವುದು.

* ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರೀ ವಾಹನ ಮತ್ತು ಬಸ್ಸುಗಳು ಬಿ. ಹೆಚ್. ರಸ್ತೆ ಮಾರ್ಗವಾಗಿ ಬಸ್‍ ನಿಲ್ದಾಣಕ್ಕೆ ಹೋಗುವುದು.

* ಹೊನ್ನಾಳಿ ದಾವಣಗೆರೆಯಿಂದ ಬರುವ ಭಾರೀ ವಾಹನ, ಎಲ್ಲಾ ಬಸ್‍ಗಳು 100 ಅಡಿ ರಸ್ತೆ, ವಿನೋಬನಗರ ಮಾರ್ಗವಾಗಿ ಹೋಗುವುದು.

* ಕೆ. ಎಸ್. ಆರ್. ಟಿ. ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಹರಿಹರ, ದಾವಣಗೆರೆಗೆ ಹೋಗುವ ಎಲ್ಲಾ ಬಸ್‍ಗಳು ಎಎ ಸರ್ಕಲ್, ಗೋಪಿ ಸರ್ಕಲ್, ಮಹಾವೀರ ಸರ್ಕಲ್, ಕೆಇಬಿ ಸರ್ಕಲ್ ಮುಖಾಂತರವಾಗಿ ಹೋಗುವುದು.

* ಕೆ. ಎಸ್. ಆರ್. ಟಿ. ಸಿ. ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು ಭದ್ರಾವತಿ ಎನ್. ಆರ್. ಪುರ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಎಂ. ಆರ್. ಎಸ್ ಸರ್ಕಲ್ ಕಡೆಗೆ ಹೋಗುವುದು.

* ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು, ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ.

* ಏಜೆಂಟರು ಮತ್ತು ಎಲ್ಲಾ ಇಲಾಖೆಯ ಅಧಿಕಾರಿಗಳ ವಾಹನಗಳ ನಿಲುಗಡೆ ಸಹ್ಯಾದ್ರಿ ಸೈನ್ಸ್ ಕಾಲೇಜು ಎದುರು ಮತ್ತು ವಜ್ರ ಮಹೋತ್ಸವ ಕಟ್ಟಡದ ಎದುರು ಪಾರ್ಕಿಂಗ್‍ಗೆ ಅನುಮತಿ ನೀಡಿದೆ.

* ಏಜೆಂಟರು ಮತ್ತು ಎಲ್ಲಾ ಇಲಾಖೆಯ ಅಧಿಕಾರಿಗಳ ವಾಹನಗಳ ನಿಲುಗಡೆ ಬಿ. ಹೆಚ್. ರಸ್ತೆಗೆ ಹೊಂದಿಕೊಂಡಂತಿರುವ ಮ್ಯಾಚ್ ಫ್ಯಾಕ್ಟರಿಗೆ ಸೇರಿದ ಮೈದಾನದಲ್ಲಿ ವಾಹನ ನಿಲುಗಡೆಗೆ ಅನುಮತಿ ನೀಡಿದೆ.

* ಎಂ. ಆರ್. ಎಸ್. ಸರ್ಕಲ್‍ನ ಹತ್ತಿರವಿರುವ ಕೆಇಬಿ ಸಮುದಾಯ ಭವನದ ಹಿಂಭಾಗ ವಾಹನಗಳ ನಿಲುಗಡೆಗೆ ಅನುಮತಿ ನೀಡಿದೆ.

* ಸಾರ್ವಜನಿಕರ ಕಾರು ಮತ್ತು ದ್ವಿಚಕ್ರ ವಾಹನಗಳ ನಿಲುಗಡೆಗೆ ಎಂ. ಆರ್‍. ಎಸ್. ನಿಂದ ಎನ್. ಆರ್. ಪುರ ರಸ್ತೆಯ ಎಡಭಾಗದಲ್ಲಿ ಪಾರ್ಕಿಂಗ್‍ಗೆ ಅನುಮತಿ ನೀಡಿದೆ.

* ಬೈಪಾಸ್ ರಸ್ತೆಗೆ ಹೊಂದಿಕೊಂಡಂತಿರುವ ಸಹ್ಯಾದ್ರಿ ಕಾಲೇಜಿನ ಸ್ಟೇಡಿಯಂ ಹತ್ತಿರ ಸಾರ್ವಜನಿಕರ ಎಲ್ಲಾ ವಾಹನಗಳ ನಿಲುಗಡೆಗೆ ಅನುಮತಿ ನೀಡಿದೆ.

* ಎಂ. ಆರ್. ಎಸ್. ಸರ್ಕಲ್‌ನಿಂದ ಬಿ. ಹೆಚ್. ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್‍ವರೆಗೆ ಸಾರ್ವಜನಿಕರ ವಾಹನಗಳು ಓಡಾಡದಂತೆ ನಿಷೇಧಿಸಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಸೊರಬ, ಸಾಗರ, ತೀರ್ಥಹಳ್ಳಿ, ಭದ್ರಾವತಿ ಮತ್ತು ಶಿಕಾರಿಪುರ ವಿಧಾನಸಭಾ ಕ್ಷೇತ್ರಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+