ಕರ್ನಾಟಕ ಚುನಾವಣೆ; ಶಿವಮೊಗ್ಗದ ಮತದಾರರು, ಮತಗಟ್ಟೆ ಮಾಹಿತಿ

ಶಿವಮೊಗ್ಗ, ಮಾರ್ಚ್ 31; ಕರ್ನಾಟಕದ ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. 224 ಕ್ಷೇತ್ರಗಳಿಗೆ ಮೇ 10ರ ಬುಧವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ, ಚುನಾವಣಾ ಫಲಿತಾಂಶ ಮೇ 13ರಂದು ಪ್ರಕಟವಾಗಲಿದೆ. ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಗೆ ಬಂದಿದೆ.

ಚುನಾವಣಾ ವೇಳಾಪಟ್ಟಿ ಪ್ರಕಟವಾದ ಬಳಿಕ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಚುನಾಣಾಧಿಕಾರಿ ಮತ್ತು ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ಪತ್ರಿಕಾಗೋಷ್ಠಿ ನಡೆಸಿದರು. ಭಾರತೀಯ ಚುನಾವಣಾ ಆಯೋಗವು ರಾಜ್ಯ ವಿಧಾನಸಭಾ ಚುನಾವಣೆ ಘೋಷಿಸಿದ್ದು, ಇಂದಿನಿಂದಲೇ ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತಿಯನ್ನು ಕಟುನಿಟ್ಟಿನಿಂದ ಜಾರಿಗೊಳಿಸಲಾಗಿದೆ ಎಂದರು.

Karnataka Assembly Elections 2023 Shivamogga Voters And Polling Booth

ಶಿವಮೊಗ್ಗದಲ್ಲಿ ಒಟ್ಟು 14,58,680 ಮತದಾರರು ನೋಂದಾಯಿಸಿಕೊಂಡಿದ್ದಾರೆ. 722080 ಪುರುಷ, 736574 ಮಹಿಳೆ, 14773 ಅಂಗವಿಲ ಮತ್ತು 26 ಇತರೆ ಮತದಾರರಿದ್ದಾರೆ. 1775 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಚುನಾವಣಾ ದಿನದಂದು ಕಾರ್ಯ ನಿರ್ವಹಿಸಲು 8520 ಅಧಿಕಾರಿ/ ಸಿಬ್ಬಂದಿಗಳ ಅವಶ್ಯಕತೆ ಇದ್ದು ಈಗಾಗಲೇ 10700 ಸಿಬ್ಬಂದಿಗಳ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಹೇಳಿದರು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 247, ಭದ್ರಾವತಿಯಲ್ಲಿ 253, ಶಿವಮೊಗ್ಗದಲ್ಲಿ 282 ಮತಗಟ್ಟೆಗಳು, ತೀರ್ಥಹಳ್ಳಿಯಲ್ಲಿ 258, ಶಿಕಾರಿಪುರದಲ್ಲಿ 232, ಸೊರಬದಲ್ಲಿ 239, ಸಾಗರದಲ್ಲಿ 264 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು. ಉಮೇದುವಾರಿಕೆ ಸಲ್ಲಿಕೆಯ ಅವಧಿಯವರೆಗೆ ಅಂದರೆ ಏಪ್ರಿಲ್ 20 ರವರೆಗೆ ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬಹುದು ಹಾಗೂ ನಮೂನೆ 8 ರಲ್ಲಿ ತಿದ್ದುಪಡಿಗೆ ಅವಕಾಶವಿರುತ್ತದೆ ಎಂದು ಸ್ಪಷ್ಟಪಡಿಸಿದರು.

36 ಚೆಕ್‌ಪೋಸ್ಟ್‌ ಸ್ಥಾಪನೆ; ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೆ. ಮಿಥುನ್ ಕುಮಾರ್ ಮಾತನಾಡಿ, "ಜಿಲ್ಲೆಯಲ್ಲಿ 36 ಕಡೆ ಚೆಕ್‍ಪೋಸ್ಟ್‌ಗಳನ್ನು ಸ್ಥಾಪಿಸಿದ್ದು, 7 ಚೆಕ್‍ಪೋಸ್ಟ್ ಈಗಾಗಲೇ ಕಾರ್ಯ ನಿರ್ವಹಿಸುತ್ತಿವೆ. ಚುನಾವಣೆಗೆ 6 ಸಿಆರ್‌ಪಿಎಫ್ ತಂಡಗಳು ಬರಲಿವೆ. ಸ್ಟ್ರಾಂಗ್ ರೂಂ, ಮತ ಎಣಿಕೆ ಕೇಂದ್ರಗಳಿಗೆ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಕಳೆದ ತಿಂಗಳಿಂದ ಜಿಲ್ಲೆಯಲ್ಲಿ 55 ಜನರಿಗೆ ಗಡಿಪಾರು ಆದೇಶ ಮತ್ತು ಕಳೆದ 5-6 ತಿಂಗಳಿಂದ 6 ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ" ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 2023ರ ವಿಧಾನಸಭಾ ಚುನಾವಣೆಯನ್ನು ವಿದ್ಯುನ್ಮಾನ ಮತಯಂತ್ರ ಬಳಸಿ ನಿರ್ವಹಿಸಲಾಗುತ್ತಿದೆ. ಜಿಲ್ಲೆಯಲ್ಲಿ 3350 ಬ್ಯಾಲೆಟ್ ಯೂನಿಟ್‍ಗಳು, 2352 ಕಂಟ್ರೋಲ್ ಯುನಿಟ್ ಹಾಗೂ 2417 ವಿವಿ ಪ್ಯಾಟ್ ಲಭ್ಯವಿರುತ್ತದೆ. ಜಿಲ್ಲೆಯಲ್ಲಿ 1950 ಸಂಖ್ಯೆಯ ಸಹಾಯವಾಣಿ ಆರಂಭಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರಕ್ಕೆ 08182-200508. ಭದ್ರಾವತಿಗೆ 08282-263466, ಶಿವಮೊಗ್ಗಕ್ಕೆ 08182-277906 ತೀರ್ಥಹಳ್ಳಿಗೆ 08181-200925. ಶಿಕಾರಿಪುರಕ್ಕೆ 08187-222239. ಸೊರಬಕ್ಕೆ 08184-272241., ಸಾಗರಕ್ಕೆ 08183-226601 ಸಹಾಯವಾಣಿ ಸಂಖ್ಯೆಯಾಗಿದೆ.

ಚುನಾವಣಾ ಅಕ್ರಮಗಳನ್ನು ತಡೆಯಲು ಒಟ್ಟು ಸೆಕ್ಟರ್ ಆಫೀಸರ್ 166, ಅಸಿಸ್ಟೆಂಟ್ ಎಕ್ಸ್‌ಪೆಂಡೆಚರ್ ಅಬ್ಸರ್ವರ್ 7, ಅಕೌಂಟಿಂಗ್ ಟೀಂ 7, ಫ್ಲೈಯಿಂಗ್ ಸ್ಕ್ವಾಡ್ 44, ಸ್ಟಾಟಿಕ್ ಸರ್ವೆಲೆನ್ಸ್ ಟೀಂ 36, ಎಂಸಿಸಿ 7, ವಿಡಿಯೋ ಸರ್ವೆಲೆನ್ಸ್ ಟೀಂ 44, ವಿಡಿಯೋ ವ್ಯೂವಿಂಗ್ ಟೀಂ 7 ನಿಯೋಜನೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಧಾನಸಭಾ ಕ್ಷೇತ್ರಗಳು; ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ಶಿವಮೊಗ್ಗ ನಗರ, ತೀರ್ಥಹಳ್ಳಿ, ಶಿಕಾರಿಪುರ, ಸೊರಬ, ಸಾಗರ ವಿಧಾನಸಭಾ ಕ್ಷೇತ್ರಗಳಿವೆ. ಶಿವಮೊಗ್ಗ ಜಿಲ್ಲೆಯಲ್ಲಿಯೂ ಚುನಾವಣಾ ನೀತಿ ಸಂಹಿತೆ ಚುನಾವಣಾ ವೇಳಾಪಟ್ಟಿ ಪ್ರಕಟವಾದ ತಕ್ಷವೇ ಜಾರಿಗೆ ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+