ಕರ್ನಾಟಕ ಬಂದ್ : ಶಿವಮೊಗ್ಗದಲ್ಲಿ ಬಸ್ ಸಂಚಾರ ಸ್ಥಗಿತ
ಶಿವಮೊಗ್ಗ, ಜವನರಿ 25 : ಮಹದಾಯಿ ವಿವಾದ ಬಗೆಹರಿಸುವಂತೆ ಒತ್ತಾಯಿಸಿ ಗುರುವಾರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಶಿವಮೊಗ್ಗದಲ್ಲಿ ಸರ್ಕಾರಿ ಬಸ್ ಸಂಚಾರ ಸ್ಥಗಿತಗೊಂಡಿದೆ.
ಚಿತ್ರಗಳು : ಮಹದಾಯಿಗಾಗಿ ಕರ್ನಾಟಕ ಬಂದ್
ಶಿವಮೊಗ್ಗದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸೇರಿ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ. ಬಂದ್ ಕರೆ ಹಿನ್ನಲೆಯಲ್ಲಿ ಇಂದು ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಫೆ.12ಕ್ಕೆ ಮುಂದೂಡಲಾಗಿದೆ.
ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಬೆಳಗ್ಗೆ 11 ಗಂಟೆ ಬಳಿಕ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.

ಶಿವಮೊಗ್ಗ ಡಿಪೋದಿಂದ ಹೊರಡುವ ಕೆಎಸ್ಆರ್‌ಟಿಸಿ ಬಸ್ಸುಗಳನ್ನು ಸ್ಥಗಿತಗೊಳಿಸಲಾಗಿದೆ. ಬೇರೆ ಜಿಲ್ಲೆಗಳಿಂದ ಬರುವ ಬಸ್ಸುಗಳು ನಗರಕ್ಕೆ ಆಗಮಿಸಿಲ್ಲ. ಆದ್ದರಿಂದ, ಜನರು ಪರದಾಡುತ್ತಿದ್ದಾರೆ.
ಶಿವಮೊಗ್ಗ ನಗರದಿಂದ ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ಯಾವುದೇ ಜಿಲ್ಲೆಗಳಿಗೆ ಬಸ್ ಸಂಚಾರ ನಡೆಸುತ್ತಿಲ್ಲ. ಇದರಿಂದಾಗಿ ಜನರು ನಿಲ್ದಾಣದಲ್ಲಿಯೇ ಕಾದು ಕುಳಿತಿದ್ದಾರೆ.












Click it and Unblock the Notifications