ಕರ್ನಾಟಕ ಬಜೆಟ್ 2020; ತವರು ಜಿಲ್ಲೆ ಶಿವಮೊಗ್ಗಕ್ಕೆ ಬಿಎಸ್‌ವೈ ಕೊಡುಗೆ
ಬೆಂಗಳೂರು, ಮಾರ್ಚ್ 05 : 2020ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗಕ್ಕೆ ಹಲವು ಕೊಡುಗೆಗಳನ್ನು ಘೋಷಣೆ ಮಾಡಿದರು. ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ.
ಮುಖ್ಯಮಂತ್ರಿ, ಹಣಕಾಸು ಸಚಿವರು ಆಗಿರುವ ಬಿ. ಎಸ್. ಯಡಿಯೂರಪ್ಪ ಗುರುವಾರ 2020ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ಶಿಕಾರಿಪುರ ಕ್ಷೇತ್ರದ ಶಾಸಕರಾಗಿರುವ ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗಕ್ಕೆ ಹಲವು ಕೊಡುಗೆ ನೀಡಿದರು.

* ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಯನ್ನು ಗಮನದಲ್ಲಿಟ್ಟುಕೊಂಡು ಶಿವಮೊಗ್ಗದಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ
* ಅಡಿಕೆ ಬೆಳೆಗಾರರ ಪ್ರಾಥಮಿಕ ಸಹಕಾರ ಸಂಘಗಳಿಗೆ 2 ಲಕ್ಷದವರೆಗಿನ ಸಾಲಕ್ಕೆ ಶೇ 5ರಷ್ಟು ಬಡ್ಡಿ ವಿನಾಯಿತಿ.
* ಬುಡಕಟ್ಟು ವೈದ್ಯ ಪದ್ಧತಿಗೆ ಪೂರಕವಾಗಿ ಔಷಧಿ ತಯಾರಿಕೆಗಾಗಿ ಶಿವಮೊಗ್ಗದಲ್ಲಿ ಔಷಧಿ ತಯಾರಿಕಾ ಘಟಕ ಸ್ಥಾಪನೆ












Click it and Unblock the Notifications