ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಜೆಟ್; ತವರು ಜಿಲ್ಲೆ ಶಿವಮೊಗ್ಗಕ್ಕೆ ಯಡಿಯೂರಪ್ಪ ಕೊಡುಗೆಗಳು

|
Google Oneindia Kannada News

ಶಿವಮೊಗ್ಗ, ಮಾರ್ಚ್ 08: ಹಣಕಾಸು ಸಚಿವ, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ಬಜೆಟ್‌ನಲ್ಲಿ ತವರು ಜಿಲ್ಲೆ ಶಿವಮೊಗ್ಗಕ್ಕೆ ಯಡಿಯೂರಪ್ಪ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಪ್ರಮುಖವಾಗಿ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಬಿರುಸಿನಿಂದ ನಡೆಯುತ್ತಿದೆ. ಆದ್ದರಿಂದ, ಜಿಲ್ಲೆಯ ಜನರು ಅಪಾರವಾದ ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು.

ಕರ್ನಾಟಕ ಬಜೆಟ್ 2021: ಶಿಕ್ಷಣ ಕ್ಷೇತ್ರಕ್ಕೆ ಯಡಿಯೂರಪ್ಪ ಘೋಷಿಸಿದ್ದೇನು? ಕರ್ನಾಟಕ ಬಜೆಟ್ 2021: ಶಿಕ್ಷಣ ಕ್ಷೇತ್ರಕ್ಕೆ ಯಡಿಯೂರಪ್ಪ ಘೋಷಿಸಿದ್ದೇನು?

ಯಡಿಯೂರಪ್ಪ ಅವರು ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಕಾಲುಸಂಕಗಳನ್ನು ನಿರ್ಮಿಸಲು ಗ್ರಾಮಬಂಧ ಸೇತುವೆ ಯೋಜನೆಯಡಿ ಬಜೆಟ್‌ನಲ್ಲಿ 100 ಕೋಟಿ ರೂ.ಗಳ ಅನುದಾನವನ್ನು ಘೋಷಣೆ ಮಾಡಿದ್ದಾರೆ.

ಕರ್ನಾಟಕ ಬಜೆಟ್ 2021: ಪೆಟ್ರೋಲ್, ಡೀಸೆಲ್‌ನಿಂದ ತೆರಿಗೆ ಹೊರೆ ಇಲ್ಲಕರ್ನಾಟಕ ಬಜೆಟ್ 2021: ಪೆಟ್ರೋಲ್, ಡೀಸೆಲ್‌ನಿಂದ ತೆರಿಗೆ ಹೊರೆ ಇಲ್ಲ

Karnataka Budget 2021 What For Shivamogga District

ಶಿವಮೊಗ್ಗ ಜಿಲ್ಲೆಗೆ ಸಿಕ್ಕಿರುವುದು

* ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಅಡಕೆ ಬೆಳೆಗಾರರು ಹಳದಿ ರೋಗದಿಂದ ಕಂಗಾಲಾಗಿದ್ದಾರೆ. ಈ ರೋಗದ ಕುರಿತು ಸಂಶೋಧನೆ ನಡೆಸಲು ಮತ್ತು ಪರ್ಯಾಯ ಬೆಳೆ ಪ್ರೋತ್ಸಾಹಕ್ಕೆ ಯಡಿಯೂರಪ್ಪ 25 ಕೋಟಿ ರೂ. ಘೋಷಣೆ ಮಾಡಿದ್ದಾರೆ.

ಕರ್ನಾಟಕ ಬಜೆಟ್ 2021: ಧಾರ್ಮಿಕ, ಮಠಗಳ ಅಭಿವೃದ್ಧಿಗೆ ಅನುದಾನಕರ್ನಾಟಕ ಬಜೆಟ್ 2021: ಧಾರ್ಮಿಕ, ಮಠಗಳ ಅಭಿವೃದ್ಧಿಗೆ ಅನುದಾನ

* 2 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜಿನಲ್ಲಿ ಸಂಶೋಧನಾ ಕೇಂದ್ರವನ್ನು ಆರಂಭಿಸಲಾಗುತ್ತದೆ ಎಂದು ಘೋಷಣೆ ಮಾಡಿದ್ದಾರೆ.

* ಶಿವಮೊಗ್ಗದ ಆಯುರ್ವೇದ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.

* ಕ್ಯಾನ್ಸರ್ ರೋಗಿಗಳಿಗೆ ಸಹಾಯಕವಾಗುವಂತೆ ಮೈಸೂರು ಮತ್ತು ಶಿವಮೊಗ್ಗದಲ್ಲಿ ಕಿದ್ವಾಯಿ ಆಸ್ಪತ್ರೆ ಮಾದರಿಯಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತೆ ಎಂದು ಹೇಳಿದ್ದಾರೆ.

* ಶಿವಮೊಗ್ಗ- ಸವಳಂಗ-ಶಿಕಾರಿಪುರ-ಶಿರಾಳಕೊಪ್ಪ ಮಾರ್ಗದಲ್ಲಿ ಆಧುನಿಕ ಸಂಚಾರ ವ್ಯವಸ್ಥೆ ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸ್ಟಿಸ್ಟಮ್ ಮತ್ತು ಸೇಫ್ಟಿ ಸಲ್ಯೂಷನ್‌ ಪ್ರಾಯೋಗಿಕವಾಗಿ ಆರಂಭವಾಗಲಿದೆ.

* ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 384 ಕೋಟಿ ರೂ. ಅನುದಾನವನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ.

English summary
Karnataka Budget 2021: Chief Minister B. S. Yediyurappa presented Karnataka budget 2021-22. What for Shivamoga home towm of Yediyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X