ಶಿಕಾರಿಪುರದಲ್ಲಿ ಮತದಾನ ಮಾಡಿದ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ
ಶಿಕಾರಿಪುರ, ಮೇ 10: ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅವರ ಮಗ ಬಿವೈ ವಿಜಯೇಂದ್ರ ಕುಟುಂಬ ಸಮೇತವಾಗಿ ಮತದಾನ ಮಾಡಿದರು.
ಇದಕ್ಕೂ ಮುನ್ನ ಕ್ಷೇತ್ರ ಹುಚ್ಚರಾಯ ಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತ ಪೂಜೆ ಸಲ್ಲಿಸಿದ ಬಿಎಸ್ ಯಡಿಯೂರಪ್ಪ ಅವರು ಎಲ್ಲರು ತಪ್ಪದೇ ಮತದಾನ ಮಾಡುವಂತೆ ಕೋರಿದರು. ಈ ಬಾರಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಬಿಎಸ್ ಯಡಿಯೂರಪ್ಪನವರ ಮಗ ಬಿವೈ ವಿಜಯೇಂದ್ರ ಅವರು ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ.

ಶಿಕಾರಿಪುರದಲ್ಲಿ ಮತದಾನದ ಬಳಿಕ ಬಿಎಸ್ ಯಡಿಯೂರಪ್ಪ ಅವರು ಮಾತನಾಡಿ, 'ಸಿಎಂ ಬಸವರಾಜ ಬೊಮ್ಮಾಯಿ ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ, ರಾಜ್ಯದ ಉದ್ದಗಲಕ್ಕೂ ಸುತ್ತಿ ಜನರಿಂದ ಪಡೆದ ಮಾಹಿತಿ ಮೇರೆಗೆ ಹೇಳುತ್ತಿದ್ದೇನೆ, ರಾಜ್ಯದಲ್ಲಿ ಬಹುಮತದಿಂದ ಬಿಜೆಪಿ ಗೆಲುವು ಸಾಧಿಸುತ್ತದೆ. ಶಿಕಾರಿಪುರದಲ್ಲಿ ವಿಜಯೇಂದ್ರ 40000 ಮತಗಳ ಅಂತರದಿಂದ ಗೆಲ್ಲುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ರಾಜ್ಯದ ಬಗ್ಗೆ ಸಾಕಷ್ಟು ಒಲವು ಹೊಂದಿದ್ದಾರೆ. ಅವರ ಆಶೀರ್ವಾದದಿಂದ ನಾವು ಗೆಲುವು ಸಾಧಿಸುತ್ತೇವೆ' ಎಂದು ಬಿಎಸ್ ಯಡಿಯೂರಪ್ಪ ಹೇಳಿದರು.
#WATCH | "I request all people to cast their votes as early as possible. I am 100% sure they will vote in favour of the BJP. More than 75-80% will support BJP. We will win 130-135 seats," says Former Karnataka CM and senior BJP leader BS Yediyurappa#KarnatakaElections pic.twitter.com/PckMSr7jLC
— ANI (@ANI) May 10, 2023












Click it and Unblock the Notifications