ಅಂತೂ ಇಂತೂ ಶಿವಮೊಗ್ಗದಲ್ಲಿ ಗೆದ್ದೇ ಬಿಟ್ಟರು ಕೆ.ಎಸ್.ಈಶ್ವರಪ್ಪ.!

ಶಿವಮೊಗ್ಗ ಮೇ 15: ಕಳೆದ ಬಾರಿ... ಅಂದ್ರೆ 2013 ರ ವಿಧಾನಸಭೆ ಚುನಾವಣೆಯಲ್ಲಿ ತೀವ್ರ ಮುಖಭಂಗ ಅನುಭವಿಸಿದ್ದ ಕೆ.ಎಸ್.ಈಶ್ವರಪ್ಪ ಮುಖದಲ್ಲಿ ಇದೀಗ ಮಂದಹಾಸ ಮೂಡಿದೆ.

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಕೆ.ಎಸ್.ಈಶ್ವರಪ್ಪ ಗೆಲುವಿನ ನಗೆ ಬೀರಿದ್ದಾರೆ. ಹಾಲಿ ಶಾಸಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಸನ್ನ ಕುಮಾರ್ ವಿರುದ್ಧ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕೆಜೆಪಿ ನಡುವಿನ ಮತ ವಿಭಜನೆಯಿಂದಾಗಿ ಈಶ್ವರಪ್ಪ ಅವರು ಸೋಲು ಕಂಡಿದ್ದರು. ಇದರ ಲಾಭ ಕಾಂಗ್ರೆಸ್ ಪಕ್ಷದ ಪ್ರಸನ್ನ ಕುಮಾರ್ ರವರಿಗಾಗಿತ್ತು.

Karnataka Election Results 2018: BJP Candidate KS Eshwarappa wins Shimoga Constituency

ಆದ್ರೀಗ, ಯಡಿಯೂರಪ್ಪ ಬಿಜೆಪಿಗೆ ವಾಪಸ್ ಆಗಿದ್ದಾರೆ. ಈ ಬಾರಿಯ ಚುನಾವಣೆಗೆ ಯಡಿಯೂರಪ್ಪ ಅವರೇ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ. ಆದ್ದರಿಂದ ತವರು ಜಿಲ್ಲೆಯನ್ನೂ ಉಳಿಸಿಕೊಳ್ಳುವಲ್ಲಿ ಯಡಿಯೂರಪ್ಪ ಹಾಗೂ ಈಶ್ವರಪ್ಪ ಯಶಸ್ವಿಯಾಗಿದ್ದಾರೆ. ಶಿವಮೊಗ್ಗದಲ್ಲಿ ಮತ್ತೊಂದು ಬಾರಿ ಕಮಲ ಅರಳಿದೆ.

ಬಿಜೆಪಿ ಪಕ್ಷದ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪಡೆದಿರುವ ಒಟ್ಟು ಮತಗಳು - 104027. ಇನ್ನೂ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಪ್ರಸನ್ನ ಕುಮಾರ್ ಪಡೆದಿರುವ ಒಟ್ಟು ಮತಗಳು - 57920. 5796 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ ಜೆ.ಡಿ.ಎಸ್ ನ ಎಚ್.ಎನ್.ನಿರಂಜನ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+