'ಸಹೋದರರ ಕಾಳಗ'ದಲ್ಲಿ ಗೆಲುವು ಕಂಡ ಕುಮಾರ ಬಂಗಾರಪ್ಪ
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ತವರು ಕ್ಷೇತ್ರ ಸೊರಬದ ಪ್ರತಿ ಬಾರಿಯ ಚುನಾವಣೆಯಲ್ಲಿ ಬಂಗಾರಪ್ಪ ಪುತ್ರರಾದ ಕುಮಾರ್ ಬಂಗಾರಪ್ಪ, ಮಧು ಬಂಗಾರಪ್ಪ ಅವರ ಸ್ಪರ್ಧೆಯಿಂದಾಗಿ ಕ್ಷೇತ್ರ ರಾಜ್ಯದ ಗಮನ ಸೆಳೆಯುತ್ತೆ.
ನಿರೀಕ್ಷೆಯಂತೆ ಮಧು ಬಂಗಾರಪ್ಪ ಮತ್ತು ಕುಮಾರ್ ಬಂಗಾರಪ್ಪ ನಡುವೆ ನೇರ ಹಣಾಹಣಿಯ ಲೆಕ್ಕಾಚಾರ ಹಾಕಲಾಗಿತ್ತು. ಇದೀಗ, ಸಹೋದರರ ಕಾಳಗದಲ್ಲಿ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಮೇಲುಗೈ ಸಾಧಿಸಿದ್ದಾರೆ.
ಕಳೆದ ಬಾರಿ ಮುಖಭಂಗ ಎದುರಿಸಿದ್ದ ಕುಮಾರ್ ಬಂಗಾರಪ್ಪ ಈ ಬಾರಿ ಗೆಲುವು ತನ್ನದಾಗಿಸಿಕೊಂಡಿದ್ದಾರೆ. ಅತಿಯಾದ ಆತ್ಮವಿಶ್ವಾಸದಲ್ಲಿದ್ದ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರಿಗೆ ಹಿನ್ನೆಡೆಯಾಗಿದೆ.
ಕುಮಾರ್ ಬಂಗಾರಪ್ಪ ಪಡೆದ ಮತಗಳು : 72091
ಮಧು ಬಂಗಾರಪ್ಪ ಪಡೆದ ಮತ : 58805

2008ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಬಿಜೆಪಿಯ ಹರತಾಳು ಹಾಲಪ್ಪ ಗೆಲುವು ಸಾಧಿಸಿದ್ದರು. 2013ರ ಚುನಾವಣೆಯಲ್ಲಿ ಮಧು ಬಂಗಾರಪ್ಪ ಗೆಲುವು ಸಾಧಿಸಿದ್ದಾರೆ. ಈಗ ಬಿಜೆಪಿಯ ಕುಮಾರ್ ಬಂಗಾರಪ್ಪ ಅವರಿಗೆ ವಿಜಯಲಕ್ಷ್ಮಿ ಒಲಿದಿದ್ದಾಳೆ.












Click it and Unblock the Notifications