ಶಿವಮೊಗ್ಗ : ಮಹಿಳಾ ಮತದಾರರಿಗೆ 18ಪಿಂಕ್ ಮತಗಟ್ಟೆಗಳು

ಶಿವಮೊಗ್ಗ, ಮೇ 09 : ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಶಿವಮೊಗ್ಗ ಜಿಲ್ಲೆಯ 18 ಮತಗಟ್ಟೆಗಳನ್ನು ಪಿಂಕ್ ಮತಗಟ್ಟೆಗಳೆಂದು ಗುರುತಿಸಿಸಲಾಗಿದೆ. ಈ ಮತಗಟ್ಟೆಗಳು ಮದುವೆ ಮಂಟಪದಂತೆ ಶೃಂಗಾರಗೊಂಡಿದ್ದು, ಮತದಾರರನ್ನು ಆಕರ್ಷಿಸುತ್ತಿವೆ.

ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಎಂ.ಲೋಕೇಶ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಕೇಶ್ ಕುಮಾರ್ ಅವರು ಮಂಗಳವಾರ ಶಿವಮೊಗ್ಗ ನಗರದ ಗುಡ್ಡೇಕಲ್ ಬಳಿಯ ಸಿದ್ದೇಶ್ವರ ನಗರದಲ್ಲಿನ ಪಿಂಕ್ ಮತಗಟ್ಟೆಗಳಿಗೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಎಲ್ಲಾ ಪಿಂಕ್ ಮತಗಟ್ಟೆಗಳನ್ನು ಬಲೂನ್ ತೋರಣಗಳಿಂದ ಅಲಂಕರಿಸಲಾಗಿದೆ. ಮಹಿಳಾ ಮತದಾರರನ್ನು ಮತಗಟ್ಟೆಗೆ ಆಹ್ವಾನಿಸುವ ಫೆಕ್ಸ್‌ಗಳನ್ನು ಹಾಕಲಾಗಿದೆ. ಮಹಿಳಾ ಮತದಾರರ ಸಂಖ್ಯೆ ಶೇ.50ಕ್ಕಿಂತಲೂ ಅಧಿಕವಿರುವ ಮತಗಟ್ಟೆಗಳನ್ನು ಪಿಂಕ್ ಮತಗಟ್ಟೆಗಳೆಂದು ಗುರುತಿಸಲಾಗಿದೆ.

Karnataka elections : 18 pink polling booths for women in Shivamogga

ಮತಗಟ್ಟೆಗಳ ವಿಶೇಷತೆ ಏನು? : ಈ ಮತಗಟ್ಟೆಗಳಲ್ಲಿ ಚುನಾವಣಾಧಿಕಾರಿ ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಮಹಿಳೆಯರೇ ಆಗಿರುತ್ತಾರೆ. ಹೆಚ್ಚಿನ ಪೊಲೀಸ್ ಸಿಬ್ಬಂದಿ ಸಹ ಮಹಿಳೆಯರೇ ಇರುವುದು ಇದರ ವಿಶೇಷ. ಇದೇ ಮೊದಲ ಬಾರಿಗೆ ಚುನಾವಣಾ ಆಯೋಗ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಪಿಂಕ್ ಮತಗಟ್ಟೆಗಳನ್ನು ಸ್ಥಾಪನೆ ಮಾಡಿದೆ.

ಈ ಪಿಂಕ್ ಮತಗಟ್ಟೆಗಳಲ್ಲಿ ಆಯಾ ಮತಗಟ್ಟೆ ವ್ಯಾಪ್ತಿಯಲ್ಲಿರುವ ಪುರುಷ ಮತದಾರರು ಸಹ ಮತ ಚಲಾಯಿಸಬೇಕಾಗಿದೆ. ಪ್ರತಿಯೊಂದು ಮತಗಟ್ಟೆಗಳಲ್ಲಿ ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕ ಸರತಿ ಸಾಲು ವ್ಯವಸ್ಥೆ ಇರುವುದು. ಪಿಂಕ್ ಮತಗಟ್ಟೆಗಳಲ್ಲಿ ಮಹಿಳೆಯರಿಗೆ ವಿಶ್ರಾಂತಿಗೆ ಕೊಠಡಿ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

Karnataka elections : 18 pink polling booths for women in Shivamogga

ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 7,14,415 ಮಹಿಳಾ ಮತದಾರರು ಇದ್ದಾರೆ. ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 18 ಪಿಂಕ್ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+