ಶಿಕಾರಿಪುರದಲ್ಲಿ ಭರ್ಜರಿ ಜಯ ಸಾಧಿಸಿದ ಬಿ.ಎಸ್.ಯಡಿಯೂರಪ್ಪ
ಶಿವಮೊಗ್ಗ, ಮೇ 15 : ಕರ್ನಾಟಕ ಬಿಜೆಪಿ ಅಧ್ಯಕ್ಷ ಮತ್ತು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸ್ವ ಕ್ಷೇತ್ರ ಶಿಕಾರಿಪುರ ಕ್ಷೇತ್ರದಲ್ಲಿ ಅವರು ಗೆಲುವು ಸಾಧಿಸಿದ್ದಾರೆ.
ಶಿವಮೊಗ್ಗ ಸಂಸದರಾಗಿರುವ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರದಿಂದ 2018ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಚುನಾವಣೆ ದಿನಾಂಕ ಘೋಷಣೆಗೂ ಮೊದಲು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿತ್ತು.
ಬಿ.ಎಸ್.ಯಡಿಯೂರಪ್ಪ ಅವರು ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಆದರೆ, ಎಷ್ಟು ಮತಗಳ ಅಂತದಲ್ಲಿ ಎಂಬುದು ಇನ್ನೂ ಖಚಿತವಾಗಿಲ್ಲ.

ಸದ್ಯದ ಮಾಹಿತಿ ಪ್ರಕಾರ ಪಡೆದ ಮತಗಳು
* ಬಿ.ಎಸ್.ಯಡಿಯೂರಪ್ಪ 61,971
* ಗೋಣಿ ಮಾಲತೇಶ್ 37,554
* ಎಚ್.ಟಿ.ಬಳಿಗಾರ್ 10120












Click it and Unblock the Notifications