• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತೀರ್ಥಹಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ಕೊಲೆ, ಅತ್ಯಾಚಾರ ಶಂಕೆ

|

ಶಿವಮೊಗ್ಗ, ನ.1 : ಅಪ್ರಾಪ್ತ ಶಾಲಾ ಬಾಲಕಿ ಅಪಹರಣ ಮತ್ತು ಕೊಲೆ ಖಂಡಿಸಿ ತೀರ್ಥಹಳ್ಳಿಯಲ್ಲಿ ಇಂದು ಸ್ವಯಂ ಪ್ರೇರಿತ ಬಂದ್ ಆಚರಿಸಲಾಗಿದೆ. ಅ.29ರಂದು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಬಾಲಕಿ ಮಣಿಪಾಲ್ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ತೀರ್ಥಹಳ್ಳಿಯ ಸರ್ಕಾರಿ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ನಂದಿತಾ ಬಾಳೆಬೈಲಿನ ನಿವಾಸಿ ಕೃಷ್ಣಪ್ಪ ಅವರ ಪುತ್ರಿ. ಮೂವರು ಯುವಕರ ಗುಂಪು ಆಕೆಯನ್ನು ಅಪಹರಿಸಿ ಆನಂದ ಗಿರಿ ಬೆಟ್ಟಕ್ಕೆ ಕರೆದುಕೊಂಡು ಹೋಗಿ ವಿಷಪ್ರಾಶನ ಮಾಡಿದ್ದರು.

ಅ.29 ಆನಂದಗಿರಿ ಬೆಟ್ಟದಲ್ಲಿ ಬಾಲಕಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಸ್ಥಳೀಯರು ಬಾಲಕಿಯನ್ನು ರಕ್ಷಿಸಿ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಶುಕ್ರವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಾಳೆ. ಬಾಲಕಿ ತಂದೆ ಈ ಕುರಿತು ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

ಅತ್ಯಾಚಾರ ಶಂಕೆ : ಬಾಲಕಿಯನ್ನು ಅಪಹರಿಸಿರುವ ಯುವಕರು ಆಕೆಗೆ ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ, ಬಲವಂತವಾಗಿ ಕುಡಿಸಿ ಅತ್ಯಾಚಾರ ನಡೆಸಲು ಯತ್ನಿಸಿದ್ದಾರೆ ಎಂದು ಶಂಕಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸ್ವಯಂ ಪ್ರೇರಿತ ಬಂದ್ : ಬಾಲಕಿ ಕೊಲೆಯನ್ನು ಖಂಡಿಸಿ ತೀರ್ಥಹಳ್ಳಿಯಲ್ಲಿ ಶನಿವಾರ ಸ್ವಯಂ ಪ್ರೇರಿತ ಬಂದ್ ನಡೆಸಲಾಗಿದೆ. ಮಾಜಿ ಶಾಸಕ ಆರಗ ಜ್ಞಾನೇಂದ್ರ ಸೇರಿದಂತೆ ಹಲವಾರು ನಾಯಕರು ರಸ್ತೆ ತಡೆ ನಡೆಸಿ, ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಂದ್‌ಗೆ ಕರೆ : ತೀರ್ಥಹಳ್ಳಿ ಪಟ್ಟಣದಲ್ಲಿ ಪುಂಡ ಯುವಕರ ಹಾವಳಿ ಹೆಚ್ಚಾಗುತ್ತಿದೆ, ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳು ಸೋಮವಾರ (ನ.3) ರಂದು ತೀರ್ಥಹಳ್ಳಿ ಬಂದ್‌ಗೆ ಕರೆ ನೀಡಿವೆ.

English summary
A 8th standard high school student from Thirthahalli in Shivamogga district, who kidnapped by unidentified miscreants died in Manipal hospital on Friday, October 31. The girl has been identified as Nandita, a resident of Balebail near Thirthahalli.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X