ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತೀರ್ಥಹಳ್ಳಿ : 2ನೇ ದಿನಕ್ಕೆ ಕಾಲಿಟ್ಟ ಕಿಮ್ಮನೆ ಪಾದಯಾತ್ರೆ

|
Google Oneindia Kannada News

ಶಿವಮೊಗ್ಗ, ಮಾರ್ಚ್ 20 : 'ಜನ ಜಾಗೃತಿ' ಹೆಸರಿನಲ್ಲಿ ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಕಿಮ್ಮನೆ ರತ್ನಾಕರ ಪಾದಯಾತ್ರೆಯನ್ನು ಆರಂಭಿಸಿದ್ದಾರೆ. ಪಾದಯಾತ್ರೆ ಎರಡು ದಿನಗಳನ್ನು ಪೂರ್ಣಗೊಳಿಸಿದ್ದು ಮಾ.21ರಂದು ಸಮಾರೋಪ ಸಮಾರಂಭ ನಡೆಯಲಿದೆ.

ಕಲ್ಲುಕೊಪ್ಪ-ಕರಕುಚ್ಚಿಯಿಂದ ತೀರ್ಥಹಳ್ಳಿ ಪಟ್ಟಣದ ತನಕ ಮೂರು ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ. ಮಂಗಳವಾರಕ್ಕೆ ಪಾದಯಾತ್ರೆ ಎರಡು ದಿನಗಳನ್ನು ಪೂರೈಸಿದೆ. ತೀರ್ಥಹಳ್ಳಿಯಲ್ಲಿ ಬುಧವಾರ ಬೆಳಗ್ಗೆ 11 ಗಂಟೆಗೆ ಬೃಹತ್ ಸಮಾವೇಶ ನಡೆಯಲಿದ್ದು, ಪಾದಯಾತ್ರೆ ಅಂತ್ಯಗೊಳ್ಳಲಿದೆ.

ಆರ್.ಎಂ. ಮಂಜುನಾಥ ಗೌಡ ಪರ ಪ್ರಚಾರಕ್ಕಿಳಿದ ಗೀತಾ ಶಿವರಾಜ್ ಕುಮಾರ್ಆರ್.ಎಂ. ಮಂಜುನಾಥ ಗೌಡ ಪರ ಪ್ರಚಾರಕ್ಕಿಳಿದ ಗೀತಾ ಶಿವರಾಜ್ ಕುಮಾರ್

ಸಮಾರೋಪ ಸಮಾರಂಭದಲ್ಲಿ ಸಚಿವರಾದ ಕಾಗೋಡು ತಿಮ್ಮಪ್ಪ, ಪ್ರಿಯಾಂಕ ಖರ್ಗೆ, ಎಐಸಿಸಿ ಸದಸ್ಯ ಮಂಜುನಾಥ ಭಂಡಾರಿ ಮುಂತಾದವರು ಪಾಲ್ಗೊಳ್ಳಲಿದ್ದಾರೆ. ಬೃಹತ್ ಸಮಾವೇಶದ ಮೂಲಕ ಚುನಾವಣೆ ಹೊಸ್ತಿಲಲ್ಲಿ ಕಿಮ್ಮನೆ ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆ.

Kimmane Rathnakar padayatra enters second day

ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ, ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಲ್ಲಿ ನಡೆದಿರುವ 62 ಕೋಟಿ ರೂ. ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಕಿಮ್ಮನೆ ರತ್ನಾಕರ ಅವರು ಪಾದಯಾತ್ರೆ ನಡೆಸುತ್ತಿದ್ದಾರೆ.

ಕ್ಷೇತ್ರ ಪರಿಚಯ : ತುಂಗಾ ತೀರದ ತೀರ್ಥಹಳ್ಳಿಯಲ್ಲಿ ಗೆಲುವು ಯಾರಿಗೆ?ಕ್ಷೇತ್ರ ಪರಿಚಯ : ತುಂಗಾ ತೀರದ ತೀರ್ಥಹಳ್ಳಿಯಲ್ಲಿ ಗೆಲುವು ಯಾರಿಗೆ?

Kimmane Rathnakar padayatra enters second day

ತೀರ್ಥಹಳ್ಳಿ ಕ್ಷೇತ್ರದ ರಾಜಕಾರಣ ಕಾವು ಪಡೆದುಕೊಳ್ಳುತ್ತಿದೆ. ಹಾಲಿ ಶಾಸಕ ಕಿಮ್ಮನೆ ರತ್ನಾಕರ ಅವರು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವುದು ಖಚಿತವಾಗಿದೆ. ಬಿಜೆಪಿಯಿಂದ ಆರಗ ಜ್ಞಾನೇಂದ್ರ, ಜೆಡಿಎಸ್‌ನಿಂದ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರು ಅಭ್ಯರ್ಥಿಗಳಾಗಿದ್ದಾರೆ.

English summary
Thirthahalli MLA and Former minister Kimmane Rathnakar padayatra entered second day on March 20, 2018. Kimmane Rathnakar begins 3 days of padayatra in the name of Jana Jagruthi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X