ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ: ಮಾ.20ಕ್ಕೆ ರೈತ ಸಮಾವೇಶ, ರಾಕೇಶ್ ಟಿಕಾಯತ್ ಭಾಗಿ

|
Google Oneindia Kannada News

ಶಿವಮೊಗ್ಗ, ಮಾರ್ಚ್ 03: ಕೃಷಿ ನೀತಿಗಳ ವಿರುದ್ಧ ನಡೆಯುತ್ತಿರುವ ಹೋರಾಟವನ್ನು ಬೆಂಬಲಿಸಿ ಶಿವಮೊಗ್ಗದಲ್ಲಿ ಮಾರ್ಚ್ 20ರಂದು ಬೃಹತ್ ರೈತ ಸಮಾವೇಶ ನಡೆಯಲಿದೆ. ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬುಧವಾರ ಸೊರಬದಲ್ಲಿ ಶಿವಮೊಗ್ಗದಲ್ಲಿ ನಡೆಯುವ ರೈತ ಮಹಾ ಪಂಚಾಯತ್ ಸಮಾವೇಶದ ಪೂರ್ವಭಾವಿ ಸಭೆ ನಡೆಯಿತು. ಮಾಜಿ ಶಾಸಕ, ಜೆಡಿಎಸ್ ನಾಯಕ ಮಧು ಬಂಗಾರಪ್ಪ, ರೈತ ಸಂಘದ ರಾಜ್ಯ ಕಾರ್ಯಧ್ಯಕ್ಷ ಎಚ್. ಆರ್. ಬಸವರಾಜಪ್ಪ, ರೈತ ಮುಖಂಡ ಕೆ. ಟಿ. ಗಂಗಾಧರ್ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಟೊಮೆಟೋ ಬೆಲೆ ಕುಸಿತ: ಟ್ರ್ಯಾಕ್ಟರ್ ನಲ್ಲಿ ತುಂಬಿ ಬೀಳು ಹೊಲಕ್ಕೆ ಸುರಿದ ಚಿತ್ರದುರ್ಗ ರೈತ ಟೊಮೆಟೋ ಬೆಲೆ ಕುಸಿತ: ಟ್ರ್ಯಾಕ್ಟರ್ ನಲ್ಲಿ ತುಂಬಿ ಬೀಳು ಹೊಲಕ್ಕೆ ಸುರಿದ ಚಿತ್ರದುರ್ಗ ರೈತ

"ಹೊಟ್ಟೆಗೆ ಅನ್ನ ತಿನ್ನುವ ಪ್ರತಿಯೊಬ್ಬರು ರೈತರ ಹೋರಾಟಕ್ಕೆ ಬೆಂಬಲ ಸೂಚಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ಕಾನೂನುಗಳನ್ನು ಚರ್ಚೆಯೇ ಇಲ್ಲದೆ ಜಾರಿಗೆ ತಂದಿದ್ದಾರೆ" ಎಂದು ಮಧು ಬಂಗಾರಪ್ಪ ಆರೋಪಿಸಿದರು.

ಕರ್ನಾಟಕದಲ್ಲಿ ಸತತ ಮೂರು ದಿನ ರಾಕೇಶ್ ಟಿಕಾಯತ್ ಭಾಷಣಕರ್ನಾಟಕದಲ್ಲಿ ಸತತ ಮೂರು ದಿನ ರಾಕೇಶ್ ಟಿಕಾಯತ್ ಭಾಷಣ

Kisan Mahapanchayat Rally In Shivamogga On March 20

"ಸರ್ಕಾರಗಳಿಗೆ ಬುದ್ಧಿ ಕಲಿಸಬೇಕಾದರೆ ಈ ರೀತಿಯ ಹೋರಾಟಗಳು ನಡೆಯಬೇಕು. ಶಿವಮೊಗ್ಗ ಹೋರಾಟದ ಭೂಮಿ, ಕರ್ನಾಟಕದಲ್ಲಿ ಇಲ್ಲಿಂದಲೇ ಹೋರಾಟ ಆರಂಭಗೊಂಡಿರುವುದು ಸ್ವಾಗತಾರ್ಹ" ಎಂದು ಹೇಳಿದರು.

ಮಧ್ಯಪ್ರದೇಶ: ಕೃಷಿ ಕಾಯ್ದೆ ವಿರುದ್ಧ ಹೋರಾಟದಲ್ಲಿ ರಾಕೇಶ್ ತಿಕೈಟ್ಮಧ್ಯಪ್ರದೇಶ: ಕೃಷಿ ಕಾಯ್ದೆ ವಿರುದ್ಧ ಹೋರಾಟದಲ್ಲಿ ರಾಕೇಶ್ ತಿಕೈಟ್

ರೈತ ಮುಖಂಡ ಕೆ. ಟಿ. ಗಂಗಾಧರ್ ಮಾತನಾಡಿ, "ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಕಾಯ್ದೆಯನ್ನೇ ತಿರುಚುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ. ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಬಂಡವಾಳಶಾಹಿಗಳಿಗೆ ಅವಕಾಶ ಮಾಡಿಕೊಡುವ ಕೆಲಸವನ್ನು ಮಾಡಲಾಗಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.

Kisan Mahapanchayat Rally In Shivamogga On March 20

"ಮಾರ್ಚ್ 20ರಂದು ಶಿವಮೊಗ್ಗದಲ್ಲಿ ರೈತ ಸಮಾವೇಶ ನಡೆಸಲಾಗುತ್ತದೆ. ಲಕ್ಷ-ಲಕ್ಷ ಸಂಖ್ಯೆಯಲ್ಲಿ ರೈತರು ಇದರಲ್ಲಿ ಭಾಗಿಯಾಗಲಿದ್ದಾರೆ. ರಾಕೇಶ್ ಟಿಕಾಯತ್, ಯದ್ವೀರ್ ಸಿಂಗ್, ಯೋಗೇಂದ್ರ ಯಾದವ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ" ಎಂದು ತಿಳಿಸಿದರು.

English summary
Kisan mahapanchayat rally in Shivamogga on March 20, 2021. BKU leader Rakesh Tikait and Swaraj India president Yogendra Yadav will participate in the rally.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X