ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾವೂ ಹಿಂದೂಗಳೇ, ನನ್ನ ಹೆಸರಲ್ಲಿ ಶಿವ, ಸಿದ್ದರಾಮಯ್ಯ ಹೆಸರಲ್ಲಿ ರಾಮ ಇಲ್ವಾ: ಡಿಕೆ ಶಿವಕುಮಾರ್ ಪ್ರಶ್ನೆ

|
Google Oneindia Kannada News

ಶಿವಮೊಗ್ಗ, ಮಾರ್ಚ್ 13: ನಾವೂ ಹಿಂದೂಗಳೇ, ನನ್ನ ಹೆಸರಲ್ಲಿ ಶಿವ, ಸಿದ್ದರಾಮಯ್ಯ ಹೆಸರಲ್ಲಿ ರಾಮ ಇಲ್ಲವೇ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಬಿಜೆಪಿಯು ಅಧಿಕಾರಕ್ಕೆ ಬಂದ ಬಳಿಕ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ, ಸುಮ್ಮನೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುತ್ತಿದೆ ಎಂದು ಹರಿಹಾಯ್ದರು.

ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಮೇಲೆ ಕೊಲೆ ಯತ್ನ ಕೇಸ್, ಕಾರಣ ಬಿಚ್ಚಿಟ್ಟ ಡಿಕೆಶಿ!ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಮೇಲೆ ಕೊಲೆ ಯತ್ನ ಕೇಸ್, ಕಾರಣ ಬಿಚ್ಚಿಟ್ಟ ಡಿಕೆಶಿ!

ಎಲ್ಲಾ ಧರ್ಮದವರೂ ಒಂದೇ, ಹಿಂದೂಗಳಿಗೆ ಕ್ರೈಸ್ತ, ಮುಸ್ಲಿಂ, ಬೌದ್ಧ ಎನ್ನುವ ಬೇಧಭಾವವಿಲ್ಲ ಎಂದರು. ಕಾಂಗ್ರೆಸ್ ಪಕ್ಷದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ವಿರುದ್ಧ ಪೊಲೀಸ್ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಬೀದಿಗಿಳಿದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.

 KPCC President DK Shivakumar Says We Are Also Hindu

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ದಿನೇಶ್ ಗುಂಡೂರಾವ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.

ಬಿಜೆಪಿ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ವಿಧಾನಸಭೆಯಿಂದ ಸಂಗಮೇಶ್ ಅವರನ್ನು ಅಮಾನತುಗೊಳಿಸಲಾದ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಈ ಪ್ರತಿಭಟನೆ ನಡೆಯುತ್ತಿದೆ.

ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆದಿದ್ದು, ಆ ನಂತರ ಶಿವಮೊಗ್ಗ ಸೈನ್ಸ್ ಮೈದಾನದಲ್ಲಿ ಪ್ರತಿಭಟನಾ ಸಭೆ ಕೂಡ ಹಮ್ಮಿಕೊಂಡಿದೆ.

ಮಾ.28 ರಂದು ಭದ್ರಾವತಿ ಕನಕ ಮಂಟಪದಲ್ಲಿ ನಡೆದ ಕಬ್ಬಡ್ಡಿ ಪಂದ್ಯಾವಳಿ ವೇಳೆ ಜೈ ಶ್ರೀ ರಾಮ್ ಎಂಬ ಘೋಷಣೆ ಕೂಗಿದ ಹಿನ್ನೆಲೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು.

ಘಟನೆಯಲ್ಲಿ ಶಾಸಕ ಸಂಗಮೇಶ್ ಹಾಗೂ ಅವರ ಪುತ್ರರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಜಾತಿ ನಿಂದನೆ ಮತ್ತು ಹಲ್ಲೆ ಯತ್ನ ಪ್ರಕರಣ ದಾಖಲಿಸಲಾಗಿದೆ. ಒಬ್ಬ ಪುತ್ರ ಬಸವೇಶ್ ಬಂಧನಕ್ಕೆ ಒಳಗಾಗಿದ್ದಾರೆ. ಶಾಸಕರಿಗೆ ಜಾತಿ ನಿಂದನೆ ಪ್ರಕರಣಕ್ಕೆ ಮಾತ್ರ ನಿರೀಕ್ಷಣಾ ಜಾಮೀನು ನೀಡಲಾಗಿದೆ.

English summary
KPCC president DK Shivakumar said that we are also hindus, God Shiva In My Name, Rama Is In Siddaramaiah's Name.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X