ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರನ್ನು ಘೋಷಿಸಿದ ಸಿಎಂ
ಶಿವಮೊಗ್ಗ, ಆಗಸ್ಟ್ 31 : ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ. ಎಸ್. ಈಶ್ವರಪ್ಪರನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಅವರು, ಯಡಿಯೂರಪ್ಪ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆಯ ಸಚಿವರು.
ಶನಿವಾರ ಶಿವಮೊಗ್ಗದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, "ಈಶ್ವರಪ್ಪ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು" ಎಂದು ಘೋಷಣೆ ಮಾಡಿದರು. ಯಡಿಯೂರಪ್ಪ ತವರು ಜಿಲ್ಲಾ ಪ್ರವಾಸದಲ್ಲಿದ್ದು, ಜಿಲ್ಲಾ ಪಂಚಾಯತ್‌ನಲ್ಲಿ ಸಭೆ ನಡೆಸಿದರು.
ಸಂಪುಟ, ಖಾತೆ ಹಂಚಿಕೆ ಬಳಿಕ ಯಡಿಯೂರಪ್ಪ ಮುಂದೆ ಮತ್ತೊಂದು ಸವಾಲು
"ಸೆಪ್ಟೆಂಬರ್ 7, 8 ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅದಕ್ಕಾಗಿ ಅನುಮತಿ ಕೇಳಿದ್ದೇವೆ" ಎಂದು ಯಡಿಯೂರಪ್ಪ ಹೇಳಿದರು.
ಯಡಿಯೂರಪ್ಪ ಸಂಪುಟದಲ್ಲಿ ಯಾವ ಸಚಿವರಿಗೆ ಯಾವ ಖಾತೆ?
"ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಬಗ್ಗೆ ಪ್ರಧಾನಿಗಳಿಗೆ ಪವರ್ ಪಾಯಿಂಟ್ ಮೂಲಕ ಮನವರಿಕೆ ಮಾಡಿಕೊಡಲಾಗುತ್ತದೆ. ಕೇಂದ್ರ ತಂಡ ವರದಿ ನೀಡಿದ ಬಳಿಕ ಪರಿಹಾರ ನೀಡಲಾಗುತ್ತದೆ" ಎಂದು ಯಡಿಯೂರಪ್ಪ ತಿಳಿಸಿದರು.
ಡಿಸಿಎಂ ಹುದ್ದೆ ಬದಲಿಗೆ ರಾಮುಲು ಮುಂದಿಟ್ಟರು ಪ್ರಮುಖ ಬೇಡಿಕೆ
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆ ಮಾಡಿ ಖಾತೆ ಹಂಚಿಕೆ ಮಾಡಿದ್ದಾರೆ. ಆದರೆ, ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿಲ್ಲ. ಮೈಸೂರಿನಲ್ಲಿ ದಸರಾ ಹಿನ್ನಲೆಯಲ್ಲಿ ವಿ. ಸೋಮಣ್ಣರನ್ನು ದಸರಾ ಉಸ್ತುವಾರಿಯಾಗಿ ಮಾತ್ರ ನೇಮಿಸಲಾಗಿದೆ.