ಡಿಕೆ ಶಿವಕುಮಾರ್, ವಿಜಯೇಂದ್ರ ಹೊಂದಾಣಿಕೆ ರಾಜಕೀಯ: ಸ್ಫೋಟಕ ಹೇಳಿಕೆ
ಶಿವವಮೊಗ್ಗ, ಆಗಸ್ಟ್ 09: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ 'ಮೈಸೂರು ಚಲೋ' ಪಾದಯಾತ್ರೆ ನಡೆಸುತ್ತಿವೆ. ಇಂತಹ ಸಮಯದಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ತವರು ಜಿಲ್ಲೆಯಲ್ಲಿ ಹೊಂದಾಣಿಕೆ ರಾಜಕೀಯದ ಸ್ಫೋಟಕ ಆರೋಪ ಮಾಡಲಾಗಿದೆ. ಶಿಕಾರಿಪುರ ಕ್ಷೇತ್ರದಿಂದಲೇ ಈ ಹೊಂದಾಣಿಕೆ ಆರಂಭವಾಗಿದೆ ಎಂಬುದು ಹೇಳಿಕೆಯಾಗಿದೆ.
ಶಿವಮೊಗ್ಗದಲ್ಲಿ ಶುಕ್ರವಾರ ಮಾಜಿ ಸಚಿವ, ಬಿಜೆಪಿಯ ಉಚ್ಛಾಟಿತ ನಾಯಕ ಕೆ. ಎಸ್. ಈಶ್ವರಪ್ಪ ಪತ್ರಿಕಾಗೋಷ್ಠಿ ನಡೆಸಿದರು. "ನಾನು ಲೋಕಸಭೆ ಚುನಾವಣೆ 2024ಕ್ಕೆ ಸ್ಪರ್ಧೆ ಮಾಡಿದಾಗ ಹೊಂದಾಣಿಕೆ ರಾಜಕೀಯದ ಬಗ್ಗೆ ಮಾತನಾಡಿದ್ದೆ. ಕಾಂಗ್ರೆಸ್, ಬಿಜೆಪಿ ಹೊಂದಾಣಿಕೆ ರಾಜಕೀಯ ಮಾಡುತ್ತಿದೆ ಎಂದು ಹೇಳಿದ್ದೆ. ಇದು ಈಗ ಸಾಕ್ಷಿ ಸಮೇತವಾಗಿ ಸಾಬೀತಾಗಿದೆ" ಎಂದು ಆರೋಪಿಸಿದರು.

"ನರೇಂದ್ರ ಮೋದಿ ಹೇಳಿದ ಹಾಗೆ ಕುಟುಂಬ ರಾಜಕಾರಣದಿಂದ ಹೊರಗಿರಬೇಕು. ವಿಜಯೇಂದ್ರ, ಡಿ.ಕೆ. ಶಿವಕುಮಾರ್ ಅವರಿಗೆ ಟೀಕೆ ಮಾಡಿದಾಗ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬಹಿರಂಗವಾಗಿ ಹೊಂದಾಣಿಕೆ ರಾಜಕಾರಣ ಒಪ್ಪಿಕೊಂಡಿದ್ದಾರೆ. ನಾವು ನಿಮಗೆ ಸಹಕಾರ ಕೊಟ್ಟಿಲ್ಲ ಎಂದಾಗಿದ್ದರೆ ನೀವು ಶಾಸಕರೇ ಆಗುತ್ತಿರಲಿಲ್ಲ ಎಂದಿದ್ದಾರೆ" ಎಂದು ಈಶ್ವರಪ್ಪ ಹೇಳಿದರು.
"ಶಿಕಾರಿಪುರದಲ್ಲಿ ನಾವು ಹೊಂದಾಣಿಕೆ ಮಾಡಿಕೊಂಡಿಲ್ಲವೆಂದಾಗಿದ್ದರೆ ನೀವು ಶಾಸಕ ಆಗುತ್ತಿರಲಿಲ್ಲ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಹೊಂದಾಣಿಕೆ ರಾಜಕೀಯದ ಬಗ್ಗೆ ಶಿವಕುಮಾರ್ ಒಪ್ಪಿಕೊಂಡಂತಾಗಿದೆ. ಶಿವಕುಮಾರ್ ಆರೋಪ ಮಾಡಿದರು ಕೂಡ, ಯಡಿಯೂರಪ್ಪ ಆಗಲೀ, ವಿಜಯೇಂದ್ರ ಆಗಲೀ, ರಾಘವೇಂದ್ರ ಆಗಲೀ ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ ಎಂದಾದರೆ ಹೊಂದಾಣಿಕೆ ರಾಜಕೀಯ ಒಪ್ಪಿಕೊಂಡಂತಾಗಿದೆ" ಎಂದು ಈಶ್ವರಪ್ಪ ತಿಳಿಸಿದರು.
ಜನರ ಕ್ಷಮೆಯನ್ನು ಕೇಳಿ: ಕೆ. ಎಸ್. ಈಶ್ವರಪ್ಪ ಮಾತನಾಡಿ, "ಇದಕ್ಕಿಂತ ನಾಚಿಕೆಗೇಡು ಮತ್ತೊಂದಿಲ್ಲ. ನೀವಿಬ್ಬರು (ವಿಜಯೇಂದ್ರ, ಯಡಿಯೂರಪ್ಪ) ತಕ್ಷಣವೇ ರಾಜ್ಯದ ಜನರ ಕ್ಷಮೆ ಕೋರಬೇಕು. ಹೊಂದಾಣಿಕೆ ರಾಜಕೀಯ ಮಾಡಿಕೊಂಡು ರಾಜ್ಯದ ಜನರ ದಾರಿ ತಪ್ಪಿಸಲಾಗುತ್ತಿದೆ. ಹೊಂದಾಣಿಕೆ ರಾಜಕೀಯ ಕೇವಲ ಶಿಕಾರಿಪುರವಲ್ಲದೇ, ರಾಜ್ಯದಲ್ಲೂ ಆಗಿರಬೇಕು. ಈ ಬಗ್ಗೆ ಡಿ. ಕೆ. ಶಿವಕುಮಾರ್ ಅವರೇ ತಿಳಿಸಬೇಕು. ಕಾಂಗ್ರೆಸ್ ಋಣದಲ್ಲಿ ನೀನಿದ್ದಿಯಾ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ಶಿಕಾರಿಪುರ ಚುನಾವಣೆ ಬಗ್ಗೆ ಡಿಕೆಶಿ ಹೇಳಿದ್ದಾರೆ" ಎಂದರು.
"ಮೈಸೂರು ಚಲೋ ಪ್ರತಿಭಟನೆ ಯಾವ ಉದ್ದೇಶಕ್ಕೆ?. ಏಕೆ ಪ್ರತಿಭಟನೆ ನಡೆಯುತ್ತಿದೆ ಎಂಬುದೇ ಗೊತ್ತಾಗುತ್ತಿಲ್ಲ. ಯಡಿಯೂರಪ್ಪ, ವಿಜಯೇಂದ್ರ, ಕಾಂಗ್ರೆಸ್‌ನವರು ಪ್ರತಿದಿನ ಪತ್ರಿಕೆಗಳನ್ನು ಓದಬೇಕು. ಯಾವ ವಿಚಾರಕ್ಕೆ ಪ್ರತಿಭಟನೆ ನಡೆಸಲಾಗುತ್ತಿದೆ? ಎಂಬುದೇ ಇವರಿಗೆ ಗೊತ್ತಿಲ್ಲ" ಎಂದು ಈಶ್ವರಪ್ಪ ಲೇವಡಿ ಮಾಡಿದರು.
"ಕೇವಲ ಮುಡಾ ಬಗ್ಗೆ ಪ್ರತಿಭಟನೆ ನಡೆಯದೇ, ವೈಯಕ್ತಿಕ ಟೀಕೆಗಳನ್ನು ನಡೆಸಲಾಗುತ್ತಿದೆ. ಪರಸ್ಪರ ಆಸ್ತಿಗಳ ಬಗ್ಗೆ ಆರೋಪ ಪ್ರತ್ಯಾರೋಪ ನಡೆಯುತ್ತಿದೆ. ರಾಜಕೀಯವನ್ನೇ ನಗ್ನಾವಸ್ಥೆಗೆ ತರಲಾಗುತ್ತಿದೆ" ಎಂದು ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ದೂರಿದರು.
ಶಿಕಾರಿಪುರ ಚುನಾವಣೆ ನೆನಪು: 2023ರ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಕಣಕ್ಕಿಳಿದ ಬಿ. ವೈ. ವಿಜಯೇಂದ್ರ 81810 ಮತಗಳನ್ನು ಪಡೆದು ಜಯಗಳಿಸಿದರು. ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಬಿ. ಎಸ್. ಯಡಿಯೂರಪ್ಪ ರಾಜಕೀಯ ನಿವೃತ್ತಿ ಬಳಿಕ ವಿಜಯೇಂದ್ರ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದರು, ಚುನಾವಣೆ ಗೆದ್ದರು.
ಚುನಾವಣೆಯಲ್ಲಿ ಶಿಕಾರಿಪುರದಲ್ಲಿ ಕಾಂಗ್ರೆಸ್ ಗೋಣಿ ಮಾಲತೇಶ್‌ಗೆ ಟಿಕೆಟ್ ನೀಡಿತ್ತು. ಅವರು 8101 ಮತಗಳನ್ನು ಪಡೆದು ಸೋಲು ಕಂಡರು. ಆದರೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಬಳಿಕ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಸ್. ಪಿ. ನಾಗರಾಜ ಗೌಡ 70802 ಮತಗಳನ್ನು ಪಡೆದು ವಿಜಯೇಂದ್ರಗೆ ಪ್ರಬಲ ಪೈಪೋಟಿ ನೀಡಿದ್ದರು.
ಚುನಾವಣೆಯ ಸಮಯದಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿ ಗೋಣಿ ಮಾಲತೇಶ್ ಅವರನ್ನು ಅಭ್ಯರ್ಥಿಯಾಗಿಸುವ ಮೂಲಕ ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ರಾಜಕೀಯ ನಡೆದಿದೆ ಎಂದು ಎಸ್. ಪಿ. ನಾಗರಾಜ ಗೌಡ ಗಂಭೀರ ಆರೋಪ ಮಾಡಿದ್ದರು. ಬಳಿಕ ಹಲವು ಬಾರಿ ಹೊಂದಾಣಿಕೆ ರಾಜಕೀಯದ ಕುರಿತು ಬಿಜೆಪಿ ನಾಯಕರೇ ಮಾತನಾಡಿದ್ದಾರೆ.
-
Copra Price: ಇದೇ ಮೊಟ್ಟ ಮೊದಲ ಬಾರಿ ತಿಪಟೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು












Click it and Unblock the Notifications