ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಏ.19ರಂದು ನಾಮಪತ್ರ ಸಲ್ಲಿಸಲಿದ್ದಾರೆ ಕೆ.ಎಸ್.ಈಶ್ವರಪ್ಪ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಏಪ್ರಿಲ್ 09 : ಶಿವಮೊಗ್ಗ ನಗರ ಕ್ಷೇತ್ರದಿಂದ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು 2018ರ ಚುನಾವಣೆ ಅಭ್ಯರ್ಥಿಯಾಗಿದ್ದಾರೆ. ಏಪ್ರಿಲ್ 19ರಂದು ಅವರು ನಾಮಪತ್ರವನ್ನು ಸಲ್ಲಿಸಲಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

ಶಿವಮೊಗ್ಗದಲ್ಲಿ ಸೋಮವಾರ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ ನಡೆಸಿದರು. 'ಏ.19ರಂದು ಬೆಳಗ್ಗೆ 10 ಗಂಟೆಗೆ ರಾಮಣ್ಣ ಶ್ರೇಷ್ಟಿ ಪಾರ್ಕ್‌ನಿಂದ ಮೆರವಣಿಗೆ ಹೊರಟು 11.30ಕ್ಕೆ ನಾಮಪತ್ರ ಸಲ್ಲಿಸಲಿದ್ದೇನೆ' ಎಂದು ಹೇಳಿದರು.

'ಏ.17 ಮತ್ತು 18ರಂದು ನಗರದ ಎಲ್ಲಾ ವಾರ್ಡ್‌ಗಳ ಪ್ರಮುಖ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಲಾಗುವುದು ಹಾಗೂ ಮಠಾಧೀಶರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಾಗುವುದು' ಎಂದು ಈಶ್ವರಪ್ಪ ಮಾಹಿತಿ ನೀಡಿದರು.

ಬಿಜೆಪಿ ಮೊದಲ ಪಟ್ಟಿ ಬಿಡುಗಡೆ : ಶಿವಮೊಗ್ಗದಲ್ಲಿ ಹೆಚ್ಚಾಯ್ತು ಕುತೂಹಲ!ಬಿಜೆಪಿ ಮೊದಲ ಪಟ್ಟಿ ಬಿಡುಗಡೆ : ಶಿವಮೊಗ್ಗದಲ್ಲಿ ಹೆಚ್ಚಾಯ್ತು ಕುತೂಹಲ!

'ಬಿಜೆಪಿ 72 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಟಿಕೆಟ್ ಸಿಗದವರು ಆತುರದ ನಿರ್ಧಾರ ಕೈಗೊಳ್ಳಬಾರದು. ಅತೃಪ್ತರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು' ಎಂದು ಕೆ.ಎಸ್.ಈಶ್ವರಪ್ಪ ತಿಳಿಸಿದರು.

KS Eshwarappa to file nomination on 19 April from Shivamogga

'ಈಗಾಗಲೇ ದೇಶದ 21 ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ. ಬಿಜೆಪಿ ಹಾಗೂ ಮೈತ್ರಿಕೂಟ ಸರ್ಕಾರ ಅಧಿಕಾರದಲ್ಲಿದ್ದು, 22ನೇ ರಾಜ್ಯವಾಗಿ ಕರ್ನಾಟಕದಲ್ಲೂ ಬಿಜೆಪಿ ಸ್ಪಷ್ಟ ಬಹುಮತ ಗಳಿಸಿ ಅಧಿಕಾರಕ್ಕೆ ಬರಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

'ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಯಾಗುವುದಿಲ್ಲ ಎಂದು ಹೇಳಿದ್ದರು. ಸಿದ್ದರಾಮಯ್ಯ ಆಗುತ್ತೆ ಅನ್ನುವುದು ಆಗುವುದಿಲ್ಲ. ಆಗುವುದಿಲ್ಲ ಎನ್ನುವುದು ಆಗುತ್ತದೆ. ಹಾಗಾಗಿ ಯಡಿಯೂರಪ್ಪ ಅವರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ' ಎಂದರು.

KS Eshwarappa to file nomination on 19 April from Shivamogga

ಪತ್ರಿಕಾಗೋಷ್ಠಿಯಲ್ಲಿ ಡಿ.ಎಸ್.ಅರುಣ್, ಕೆ.ಜಿ.ಕುಮಾರಸ್ವಾಮಿ, ಎಸ್.ಎನ್.ಚನ್ನಬಸಪ್ಪ, ಎನ್.ಜೆ.ರಾಜಶೇಖರ್, ಎಸ್.ಜ್ಞಾನೇಶ್ವರ್, ಎಸ್.ದತ್ತಾತ್ರಿ, ಮೋಹನ್ ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.

English summary
Opposition leader in the Legislative Council K.S. Eshwarappa said that, He would file his nomination on 19 April, 2018 from the Shivamogga assembly constituency for Karnataka assembly elections 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X