ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋಡಿಹಳ್ಳಿ ಸಮಾಜಘಾತುಕ ಕೃತ್ಯ ಮಾಡುತ್ತಿದ್ದಾರೆ; ಈಶ್ವರಪ್ಪ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಡಿಸೆಂಬರ್ 14: "ಕೋಡಿಹಳ್ಳಿ ಚಂದ್ರಶೇಖರ್‌ಗೂ ಕೆಎಸ್ಆರ್‌ಟಿಸಿ ನೌಕರರಿಗೂ ಏನು ಸಂಬಂಧ ಎಂದು ತಿಳಿದಿಲ್ಲ?. ಇಂತಹ ವ್ಯಕ್ತಿಗಳ ಬಗ್ಗೆ ಎಲ್ಲರೂ ಜಾಗೃತರಾಗಿರಬೇಕು" ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ ಕರೆ ನೀಡಿದರು.

ಸೋಮವಾರ ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಈಶ್ವರಪ್ಪ, "ಅನಾವಶ್ಯಕವಾಗಿ ಕೆಎಸ್‌ಆರ್‌ಟಿಸಿ ನೌಕರರಿಗೆ ಕುಮ್ಮಕ್ಕು ನೀಡಿ, ಸಾರ್ವಜನಿಕರಿಗೆ ನಾಲ್ಕು ದಿನ ತೊಂದರೆಯಾಗಲು ಕೋಡಿಹಳ್ಳಿ ಚಂದ್ರಶೇಖರ್ ನೇರ ಕಾರಣ" ಎಂದು ದೂರಿದರು.

ಸಾರಿಗೆ ಮುಷ್ಕರ: ಕೋಡಿಹಳ್ಳಿ ಚಂದ್ರಶೇಖರ್ ಹಿಂದಿರುವ ಆ ಕಾಣದ 'ಕೈ'! ಸಾರಿಗೆ ಮುಷ್ಕರ: ಕೋಡಿಹಳ್ಳಿ ಚಂದ್ರಶೇಖರ್ ಹಿಂದಿರುವ ಆ ಕಾಣದ 'ಕೈ'!

"ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮವಾದ ಆಡಳಿತ ನೀಡುತ್ತಿದ್ದು, ಇದನ್ನು ಸಹಿಸಲು ಬಹಳಷ್ಟು ಮಂದಿಗೆ ಆಗುತ್ತಿಲ್ಲ. ಹೀಗಾಗಿ, ಇಂತಹ ವ್ಯಕ್ತಿಗಳು ಸರ್ಕಾರದ ವಿರುದ್ಧ ಕುತಂತ್ರ ಮಾಡುತ್ತಿದ್ದಾರೆ. ಅನಾವಶ್ಯಕವಾಗಿ ಸಾರಿಗೆ ನೌಕರರನ್ನು ಸರ್ಕಾರದ ವಿರುದ್ಧ ಎತ್ತಿಕಟ್ಟಿ, ಜನರಿಗೆ ತೊಂದರೆಯಾಗಲು ಕೋಡಿಹಳ್ಳಿ ಚಂದ್ರಶೇಖರ್ ಕಾರಣ, ಇದು ಸಮಾಜಘತಕ ಕೃತ್ಯ" ಎಂದರು.

 ಸಾರಿಗೆ ನೌಕರರ ಮುಷ್ಕರ; ನಷ್ಟಕ್ಕೆಲ್ಲ ಕೋಡಿಹಳ್ಳಿ ಚಂದ್ರಶೇಖರ್ ಹೊಣೆ ಎಂದ ಸಿಎಂ ಸಾರಿಗೆ ನೌಕರರ ಮುಷ್ಕರ; ನಷ್ಟಕ್ಕೆಲ್ಲ ಕೋಡಿಹಳ್ಳಿ ಚಂದ್ರಶೇಖರ್ ಹೊಣೆ ಎಂದ ಸಿಎಂ

 KS Eshwarappa Verbal Attack On Kodihalli Chandrashekar

"ರಾಜ್ಯದಲ್ಲಿ 50ಕ್ಕೂ ಅಧಿಕ ಕಾರ್ಪೊರೇಷಶನ್‌ಗಳಿವೆ. ಅದರಲ್ಲಿನ ನೌಕರರು ಸರ್ಕಾರಿ ನೌಕರರಿಗಿಂತಲೂ ಹೆಚ್ಚಿನ ವೇತನ ಪಡೆಯುತ್ತಿದ್ದಾರೆ. ಹೀಗಿರುವಾಗ, ಎಲ್ಲರೂ ತಮ್ಮನ್ನು ಸರ್ಕಾರಿ ನೌಕರರಾಗಿ ಪರಿಗಣಿಸಿ ಎಂದು ಕೇಳಿದರೆ ವಾಸ್ತವವಾಗಿ ಅದು ಸಾಧ್ಯವಿದೆಯೇ?" ಎಂದು ಈಶ್ವರಪ್ಪ ಪ್ರಶ್ನಿಸಿದರು.

ಸಾರಿಗೆ ಮುಷ್ಕರ ವಾಪಸ್: ಕೆಎಸ್ಸಾರ್ಟಿಸಿ ಸಂಚಾರ ಆರಂಭ ಸಾರಿಗೆ ಮುಷ್ಕರ ವಾಪಸ್: ಕೆಎಸ್ಸಾರ್ಟಿಸಿ ಸಂಚಾರ ಆರಂಭ

ತಮ್ಮನ್ನು ಸರ್ಕಾರಿ ನೌಕರರು ಎಂದು ಪರಿಗಣಿಸುವಂತೆ ಸಾರಿಗೆ ನೌಕರರು ಶುಕ್ರವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಈ ಹೋರಾಟದ ನೇತೃತ್ವ ವಹಿಸಿದ್ದಾರೆ. ಆದ್ದರಿಂದ, ವಿವಿಧ ಸಚಿವರು ಅವರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

English summary
Transport employees strike minister K. S. Eshwarappa verbal attack on Kodihalli Chandrashekar president of the Karnataka Rajya Raitha Sangha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X