ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ; ಅನ್‌ಲಾಕ್‌ ಆರಂಭ, ರಸ್ತೆಗಿಳಿದ ಸರ್ಕಾರಿ ಬಸ್‌ಗಳು

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜೂನ್ 21; ಕೋವಿಡ್ ಲಾಕ್‌ಡೌನ್‌ನಿಂದ ಸ್ಥಗಿತವಾಗಿದ್ದ ಕೆಎಸ್ಆರ್‌ಟಿಸಿ ಬಸ್‌ಗಳ ಸಂಚಾರ ಪುನಾರಂಭವಾಗಿದೆ. ಶಿವಮೊಗ್ಗ ಜಿಲ್ಲೆಯಿಂದಲೂ ಹಲವಾರು ಬಸ್‌ಗಳು ವಿವಿಧ ಕಡೆಗೆ ಹೊರಟಿವೆ.

Recommended Video

ಚಾಮರಾಜನಗರ: ಬಸ್‌ ಸಂಚಾರ ಆರಂಭ, ಒಂದು ಬಸ್‌ನಲ್ಲಿ 30 ಜನರಿಗಷ್ಟೇ ಅವಕಾಶ

ಎರಡು ತಿಂಗಳು ಡಿಪೋದಲ್ಲಿದ್ದ ಬಸ್ಸುಗಳನ್ನು ಸ್ವಚ್ಛಗೊಳಿಸಿ, ಸ್ಯಾನಿಟೈಸ್ ಮಾಡಿ, ನಿಲ್ದಾಣಕ್ಕೆ ತರಲಾಗಿದೆ. ಪ್ರಯಾಣಿಕರ ಆದ್ಯತೆಗೆ ಅನುಗುಣವಾಗಿ ವಿವಿಧ ಮಾರ್ಗದಲ್ಲಿ ಬಸ್‌ಗಳ ಸಂಚಾರ ಆರಂಭಿಸಲಾಗಿದೆ.

ಶಿವಮೊಗ್ಗ, ಭದ್ರಾವತಿ ನಗರಗಳಿಗೆ ಹೊಸ ಲಾಕ್‌ಡೌನ್ ರೂಲ್ಸ್ ಶಿವಮೊಗ್ಗ, ಭದ್ರಾವತಿ ನಗರಗಳಿಗೆ ಹೊಸ ಲಾಕ್‌ಡೌನ್ ರೂಲ್ಸ್

ಕರ್ನಾಟಕ ಸರ್ಕಾರದ ಮಾರ್ಗಸೂಚಿಯಂತೆ ಶೇ 50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ. ಪ್ರತಿ ಸೀಟಿನಲ್ಲಿ ಒಬ್ಬರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ.

ಶಿವಮೊಗ್ಗ; ವಿಮಾನ ನಿಲ್ದಾಣದ ಟರ್ಮಿನಲ್ ನೀಲನಕ್ಷೆ ಅನಾವರಣಶಿವಮೊಗ್ಗ; ವಿಮಾನ ನಿಲ್ದಾಣದ ಟರ್ಮಿನಲ್ ನೀಲನಕ್ಷೆ ಅನಾವರಣ

KSRTC Bus Services Resume In Shivmogga

ಎಲ್ಲೆಲ್ಲಿಗೆ ಬಸ್ ಸಂಚಾರ; ಶಿವಮೊಗ್ಗದಿಂದ ಹಲವು ಮಾರ್ಗಗಳಿಗೆ ಬಸ್ ಸಂಚಾರ ಆರಂಭಿಸಲಾಗಿದೆ. ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ಮಂಗಳೂರು, ತುಮಕೂರು, ಶಿಕಾರಿಪುರ, ಸಾಗರ, ಹೊಸನಗರ, ಭದ್ರಾವತಿ, ತೀರ್ಥಹಳ್ಳಿ, ಸೊರಬ, ಹರಿಹರ, ಕಡೂರು, ತರೀಕೆರೆ, ಚನ್ನಗಿರಿಗೆ ಬಸ್ ಸಂಚಾರ ಆರಂಭವಾಗಿದೆ.

ಶಿವಮೊಗ್ಗ; ತರಕಾರಿ, ದಿನಸಿ ತಲುಪದ ಹಳ್ಳಿಗಳಲ್ಲೂ ಸಿಕ್ತಿದೆ ಮದ್ಯ!ಶಿವಮೊಗ್ಗ; ತರಕಾರಿ, ದಿನಸಿ ತಲುಪದ ಹಳ್ಳಿಗಳಲ್ಲೂ ಸಿಕ್ತಿದೆ ಮದ್ಯ!

"ಸುಮಾರು 150 ಬಸ್‌ಗಳು ಸೋಮವಾರ ರಸ್ತೆಗಿಳಿದಿವೆ. ತಾಲೂಕು ಮತ್ತು ಆಯ್ದ ಜಿಲ್ಲಾ ಕೇಂದ್ರಗಳಿಗೆ ಬಸ್ ಸಂಚಾರ ಆರಂಭವಾಗಿದೆ. ಪ್ರಯಾಣಿಕರ ಆದ್ಯತೆ ಮೇರೆಗೆ ಗ್ರಾಮೀಣ ಭಾಗಕ್ಕೆ ಸಂಚಾರ ಕಲ್ಪಿಸಲಾಗುತ್ತದೆ" ಎಂದು ಶಿವಮೊಗ್ಗ ಕೆಎಸ್‌ಆರ್‌ಟಿಸಿ ವಿಭಾಗೀಯ ಡಿಸಿ ನವೀನ್ ಕುಮಾರ್ ತಿಳಿಸಿದ್ದಾರೆ.

ಬಣಗುಡುತ್ತಿದೆ ಖಾಸಗಿ ನಿಲ್ದಾಣ; ಸರ್ಕಾರಿ ಸಾರಿಗೆ ಬಸ್ ಸಂಚಾರ ಆರಂಭವಾಗಿದೆ. ಆದರೆ ಜಿಲ್ಲೆಯ ಜೀವನಾಡಿಯಾಗಿರುವ ಖಾಸಗಿ ಬಸ್ ಸಂಚಾರ ಶುರುವಾಗಿಲ್ಲ. ಹಾಗಾಗಿ ಖಾಸಗಿ ಬಸ್ ನಿಲ್ದಾಣ ಬಣಗುಡುತ್ತಿದೆ.

ಶಿವಮೊಗ್ಗದ ಸಿಟಿ ಬಸ್ಸುಗಳು ಕೂಡ ರಸ್ತೆಗಿಳಿಯಲು ಅವಕಾಶ ನೀಡಿಲ್ಲ. ಸದ್ಯ ಕೆಎಸ್ಆರ್‌ಟಿಸಿ ಬಸ್ ಸಂಚಾರ ಆರಂಭವಾಗಿರುವುದರಿಂದ ದೂರದ ಊರುಗಳಿಗೆ ತೆರಳುವವರು ನಿಟ್ಟುಸಿರು ಬಿಡುವಂತಾಗಿದೆ.

English summary
Karnataka State Road Transport Corporation (KSRTC) bus services resume in Shivamogga district after the two months lockdown.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X