ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಎಸ್ಆರ್‌ಟಿಸಿ ಬಸ್, ವೇಳಾಪಟ್ಟಿ
ಶಿವಮೊಗ್ಗ, ಸೆಪ್ಟೆಂಬರ್ 01; ಶಿವಮೊಗ್ಗ ಹೊರವಲಯದ ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ಸಂಚಾರ ಆರಂಭವಾಗಿದೆ. ಬೆಂಗಳೂರು-ಶಿವಮೊಗ್ಗ ನಡುವಿನ ವಿಮಾನ ಗುರುವಾರ ಇಳಿಯುವ ಮೂಲಕ ಮಲೆನಾಡಿಗರ ಹಲವು ವರ್ಷಗಳ ಕನಸು ನನಸಾಗಿದೆ. ಸದ್ಯ, ಬೆಂಗಳೂರು-ಶಿವಮೊಗ್ಗ ನಡುವೆ ಮಾತ್ರ ವಿಮಾನ ಸಂಚಾರ ನಡೆಸಲಿದೆ.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 31ರಿಂದ ವಿಮಾನ ಹಾರಾಟ ಆರಂಭವಾದ ಹಿನ್ನಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಜನರು ಸಂಚಾರ ನಡೆಸಲು ಅನುಕೂಲವಾಗುವಂತೆ ಶಿವಮೊಗ್ಗದ ಕೆಎಸ್ಆರ್‌ಟಿಸಿ ವಿಭಾಗ ಬಸ್ ಸೇವೆಯನ್ನು ಆರಂಭಿಸಿದೆ.

ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ಕೆಎಸ್ಆರ್‌ಟಿಸಿಯ ಬಸ್ ಶಿವಮೊಗ್ಗ-ವಿಮಾನ ನಿಲ್ದಾಣ- ಕಾಚಿನಕಟ್ಟೆ ಮಾರ್ಗದಲ್ಲಿ ಸಂಚಾರ ನಡೆಸಲಿದೆ. ವಿಮಾನ ನಿಲ್ದಾಣಕ್ಕೆ ಸಾಗುವ ಜನರು ನೂತನ ಮಾರ್ಗದ ಬಸ್ ಸೇವೆಯನ್ನು ಬಳಕೆ ಮಾಡಿಕೊಳ್ಳಬಹುದು.
ವೇಳಾಪಟ್ಟಿ; ಶಿವಮೊಗ್ಗ ವಿಮಾನ ವಿಮಾನ ನಿಲ್ದಾಣಕ್ಕೆ ಸದ್ಯ ಇಂಡಿಗೋ ಸಂಸ್ಥೆಯ ಬೆಂಗಳೂರು-ಶಿವಮೊಗ್ಗ ನಡುವಿನ ವಿಮಾನ ಮಾತ್ರ ಆಗಮಿಸಲಿದೆ. 11 ಗಂಟೆಗೆ ಶಿವಮೊಗ್ಗಕ್ಕೆ ಬರುವ ವಿಮಾನ, 11.45ಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ವಾಪಸ್ ಹೊರಡಲಿದೆ.
ಕೆಎಸ್ಆರ್‌ಟಿಸಿ ಶಿವಮೊಗ್ಗ-ವಿಮಾನ ನಿಲ್ದಾಣ- ಕಾಚಿನಕಟ್ಟೆ ಮಾರ್ಗದಲ್ಲಿ ಬೆಳಗ್ಗೆ 8.30ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಹಾಗೂ ಕಾಚಿನಕಟ್ಟೆಯಿಂದ ಬೆಳಗ್ಗೆ 9 ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಸಂಜೆ 6.30ರ ತನಕ ಬಸ್‍ಗಳ ಸಂಚಾರ ನಡೆಸಲಿದೆ. ಸಾರ್ವಜನಿಕರು ಈ ಸೌಲಭ್ಯದ ಉಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ.
ಕರ್ನಾಟಕದ 9ನೇ ಮತ್ತು ಕರ್ನಾಟಕದ ಮಲೆನಾಡು ಭಾಗದಲ್ಲಿ ನಿರ್ಮಾಣವಾಗಿರುವ ಪ್ರಪ್ರಥಮ ವಿಮಾನ ನಿಲ್ದಾಣ ಶಿವಮೊಗ್ಗ ವಿಮಾನ ನಿಲ್ದಾಣವಾಗಿದೆ. ಈ ವಿಮಾನ ನಿಲ್ದಾಣವನ್ನು ಸುಮಾರು 450 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಈ ವಿಮಾನ ನಿಲ್ದಾಣದಿಂದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ.
ಕರ್ನಾಟಕ ಸರ್ಕಾರ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಂಚಾರ ನಡೆಸುವ ಜನರಿಗೆ ಸಿಹಿಸುದ್ದಿ ನೀಡಿದೆ. ಮುಂದಿನ ಒಂದು ವರ್ಷ ಕಾಲ ಶಿವಮೊಗ್ಗ-ಬೆಂಗಳೂರು ನಡುವೆ ಪ್ರಯಾಣಿಸುವ ಪ್ರತಿಯೊಬ್ಬರ ಟಿಕೆಟ್ ಮೇಲೆ 500 ರೂ. ಸಬ್ಸಿಡಿಯನ್ನು ಸರ್ಕಾರ ನೀಡಲಿದೆ.
ಶಿವಮೊಗ್ಗ ವಿಮಾನ ನಿಲ್ದಾಣವನ್ನು 779 ಎಕರೆ ಜಾಗದಲ್ಲಿ ನಿರ್ಮಾಣ ಮಾಡಲಾಗಿದೆ. ಬೆಂಗಳೂರು ಹೊರತುಪಡಿಸಿದರೆ ಅತಿ ಉದ್ದದ ರನ್ ವೇ ಹೊಂದಿರುವ ವಿಮಾನ ನಿಲ್ದಾಣವಿದು. ಏರ್‌ಬಸ್ 320 ಮಾದರಿಯ ವಿಮಾನಗಳು ಕೂಡ ಇಳಿಯುವ ವ್ಯವಸ್ಥೆ ಇಲ್ಲಿದೆ. ರಾತ್ರಿ ವೇಳೆ ವಿಮಾನಗಳು ಇಳಿಯುವ ಸೌಲಭ್ಯಗಳನ್ನು ಕೂಡ ಕಲ್ಪಿಸಲಾಗುತ್ತಿದೆ.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇನ್ನೂ ಹೆಸರು ಇಟ್ಟಿಲ್ಲ. ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಕೇಂದ್ರ ಸರ್ಕಾರದ ಒಪ್ಪಿಗೆ ಪಡೆಯುವ ಕಾರ್ಯ ಪ್ರಗತಿಯಲ್ಲಿದೆ. ಈ ವರ್ಷದ ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ್ದರು.
ಶಿವಮೊಗ್ಗ-ಬೆಂಗಳೂರು ನಡುವೆ ಇಂಡಿಗೋ ವಿಮಾನ ಸೇವೆ ಆರಂಭಿಸಿದೆ. ಬೆಂಗಳೂರಿಗೆ ಕನೆಕ್ಟಿಂಗ್ ವಿಮಾನಯಾನ ಸೇವೆ ಲಭ್ಯವಾಗಲಿದೆ. ಬೆಂಗಳೂರಿನಿಂದ ಚೆನ್ನೈ, ಮುಂಬೈ ಮತ್ತು ದೆಹಲಿಗೆ ತೆರಳಲಿರುವ ಇಂಡಿಗೋ ಸಂಸ್ಥೆಯ ವಿಮಾನಗಳ ಮೂಲಕ ಪ್ರಯಾಣವನ್ನು ಜನರು ಮುಂದುವರಿಸಬಹುದು.
ಉಡಾನ್ ಯೋಜನೆಯಡಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಸದ್ಯದಲ್ಲೇ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ದೆಹಲಿ, ಹೈದರಾಬಾದ್ ಸೇರಿದಂತೆ ದೇಶದ ನಾನಾ ನಗರಗಳಿಗೆ ಶಿವಮೊಗ್ಗದಿಂದ ನೇರ ವಿಮಾನ ಸೇವೆ ಆರಂಭವಾಗಲಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications