ಮಂಗಳೂರು-ಶಿವಮೊಗ್ಗ-ಬಳ್ಳಾರಿ ನಡುವೆ ರಾಜಹಂಸ ಸೇವೆ

ಶಿವಮೊಗ್ಗ, ಜನವರಿ 29 : ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು-ಬಳ್ಳಾರಿ-ಮಂಗಳೂರು ಮಾರ್ಗದಲ್ಲಿ ಹೊಸ ರಾಜಹಂಸ ಬಸ್ ಸೇವೆಯನ್ನು ಆರಂಭಿಸಿದೆ. ಪ್ರಯಾಣಿಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.

ಕೆಎಸ್ಆರ್ಮಂಗಳೂರು ವಿಭಾಗದಿಂದ ಮಂಗಳೂರು-ಬಳ್ಳಾರಿ-ಮಂಗಳೂರು ಮಾರ್ಗದಲ್ಲಿ ರಾಜಹಂಸ ಬಸ್ ಸೇವೆಯನ್ನು ಆರಂಭಿಸಲಾಗಿದೆ. ಜನವರಿ 23ರಿಂದಲೇ ಬಸ್‌ಗಳು ಸಂಚಾರ ನಡೆಸುತ್ತಿವೆ ಎಂದು ಪ್ರಕಟಣೆ ಹೇಳಿದೆ.

ರಾಜಹಂಸ ಬಸ್ ಮಂಗಳೂರು ನಿಲ್ದಾಣದಿಂದ ಸಂಜೆ 7 ಗಂಟೆಗೆ ಹೊರಡಲಿದೆ. ಉಡುಪಿ, ಕುಂದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಚನ್ನಗಿರಿ, ಹೊಳಲ್ಕೆರೆ, ಚಳ್ಳೆಕೆರೆ, ಚಿತ್ರದುರ್ಗ ಮಾರ್ಗವಾಗಿ ಸಂಚಾರ ನಡೆಸಲಿದ್ದು, ಬೆಳಗ್ಗೆ 6.30ಕ್ಕೆ ಬಳ್ಳಾರಿ ತಲುಪಲಿದೆ.

KSRTC

ಬಳ್ಳಾರಿಯಿಂದ ಸಂಜೆ 5.35ಕ್ಕೆ ಹೊರಡುವ ಬಸ್ ಶಿವಮೊಗ್ಗದಿಂದ ರಾತ್ರಿ 11.30ಕ್ಕೆ ಹೊರಟು ಮರುದಿನ ಬೆಳಗ್ಗೆ 5 ಗಂಟೆಗೆ ಮಂಗಳೂರಿಗೆ ತಲುಪಲಿದೆ ಎಂದು ಕೆಎಸ್ಆರ್‌ಟಿಸಿ ಹೇಳಿದೆ.

ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾಯ್ದಿರಿಸುವ ವ್ಯವಸ್ಥೆ ಇದೆ. ಸಾರ್ವಜನಿಕರು ಈ ಬಸ್ ಸೇವೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮಂಗಳೂರು ವಿಭಾಗದ ನಿಯಂತ್ರಣಾಧಿಕಾರಿಗಳು ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+