Shiva Rajkumar: ಕರುನಾಡ ಚಕ್ರವರ್ತಿ ಶಿವಣ್ಣ ಜಾತ್ರೆಗಳಲ್ಲಿ ಕುಣಿಯುವ ಕೆಲಸ ಮಾಡಲಿ ಎಂದ ಕುಮಾರ ಬಂಗಾರಪ್ಪ!
ಶಿವಮೊಗ್ಗ, ಜೂನ್. 05: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ದೊಡ್ಮನೆ ಸೊಸೆ, ಮಾಜಿ ಸಿಎಂ ಬಂಗಾರಪ್ಪ ಅವರ ಮಗಳು ಗೀತಾ ಶಿವರಾಜ್ ಕುಮಾರ್ ಭಾರೀ ಅಂತರದಲ್ಲಿ ಸೋಲು ಕಂಡಿದ್ದಾರೆ. ಇದಾದ ಬೆನ್ನಲ್ಲೆ ಅವರ ಸಹೋದರ, ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ಸಕತ್ ಟಾಂಗ್ ನೀಡಿದ್ದಾರೆ. ಮಧು ಬಂಗಾರಪ್ಪ, ಗೀತಾ ಮತ್ತು ಶಿವರಾಜ್‌ಕುಮಾರ್ ವಿರುದ್ಧ ಕಿಡಿ ಕಾರಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಕುಮಾರ್ ಬಂಗಾರಪ್ಪ ಹೇಳಿರುವುದೇನು ..."ಕರ್ನಾಟಕ ಕಂಡ ಧೀಮಂತ ರಾಜಕಾರಣಿ ಬಡವರ ಬಂಧು ಎಂಬ ಸಾರ್ಥಕ ಬಿರುದಾವಳಿಯನ್ನು ತಮ್ಮ ಹೆಸರಿನೊಡನೆ ನಡೆಸಿಕೊಂಡು ಬದುಕಿದವರು ಸಾರೆಕೊಪ್ಪ ಬಂಗಾರಪ್ಪ. ಹಿಂದುಳಿದ ವರ್ಗಗಳಿಗೆ ಆಶಾಕಿರಣವಾಗಿದ್ದ, ರೈತಬಂದುವೂ, ಗೇಣಿದಾರರ ಜೀವಜಲವೆನಿಸಿದ್ದ ಹೋರಾಟಗಾರ, ನಾಡು ನುಡಿ ಸಂಸ್ಕೃತಿಗಳ ರಕ್ಷಾ ಧೀಕ್ಷೆಯನ್ನು ತೊಟ್ಟಿದ್ದ ವೀರ ಯೋಧನೆನಿಸಿದ್ದ ಕರ್ನಾಟಕದ ಈ ಮಾಜಿ ಮುಖ್ಯಮಂತ್ರಿಯು ಲಿಂಗಾಯತ, ಬ್ರಾಹ್ಮಣ, ಒಕ್ಕಲಿಗರೆಲ್ಲರಲ್ಲಿಯೂ ಸಮ ಭಾವ, ಸಮಚಿತ್ತದಿಂದ ಬೆರೆತಿದ್ದವರು ಇವರ ಆಡಳಿತ ವ್ಯೆಖರಿಯು ಅನುಕರಣೀಯ ಮಾತ್ರವಲ್ಲದೆ ಆದರ್ಶರೂಪದ್ದಾಗಿತ್ತು" ಎಂದಿದ್ದಾರೆ.

ಬಂಗಾರಪ್ಪನನ್ನು ನನ್ನ ತಮ್ಮ ಹಾಗೂ ತಂಗಿ ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡರು!
"ಇವರು ಜಾರಿಗೆ ತಂದಿದ್ದ ಪಂಚಮುಖಿ ಕಾರ್ಯಕ್ರಮಗಳಾದ ವಿಶ್ವ, ಸುಶ್ರತ, ಆರಾಧನ,ಆಶ್ರಯ, ಅಕ್ಷಯ ಮುಂತಾದವನ್ನು ಇಡೀ ರಾಜ್ಯ ನೆನೆಯುತ್ತಾ ಆರಾಧಿಸುತ್ತಿದೆ, ಬೇರೆ ರಾಜ್ಯಗಳೂ ಅನುಕರಿಸುತ್ತಿವೆ. ಇಂತಹ ಒಬ್ಬ ಧಿರೋದ್ದಾತ ನಾಯಕನನ್ನು ನನ್ನ ತಮ್ಮ ಹಾಗೂ ತಂಗಿ ತಮ್ಮ ಸ್ವಾರ್ಥಸಾಧನೆ ಗಾಗಿ, ಕೇವಲ ಒಂದು ಲೋಕಸಭಾ ಕ್ಷೇತ್ರಕ್ಕೆ ಅಂದರೆ ಶಿವಮೊಗ್ಗ ಕ್ಷೇತ್ರಕ್ಕೆ ಸೀಮಿತಗೊಳಿಸಿದ್ದು ಇವರ ಸಂಕುಚಿತ ಸ್ವಭಾವದಿಂದ ಬಂಗಾರಪ್ಪನವರನ್ನು ಕೇವಲ ಪ್ರಚಾರ ಸಾಮಗ್ರಿಯನ್ನಾಗಿ ಬಳಸಿಕೊಂಡ ಇವರಿಗೆ ತಕ್ಕ ಶಾಸ್ತಿಯಾಯಿತು" ಎಂದು ಟೀಕಿಸಿದ್ದಾರೆ.
"ಈ ಮಹಾಪರಾಧಕ್ಕಾಗಿ ಜಿಲ್ಲೆಯ, ಕ್ಷೇತ್ರದ ಜನರ ಕ್ಷಮಾಪಣೆ ಕೇಳಿ ಹೋಗಿಬರಲಿ, ಟಾಟಾ! ಮೇಲಾಗಿ, ಕನ್ನಡದ ಕಣ್ಮಣಿ ಡಾ. ರಾಜಕುಮಾರ್ ಅವರ ಹೆಸರನ್ನು ದುರುಪಯೋಗ ಪಡಿಸಿಕೊಂಡಿದ್ದಲ್ಲದೆ ಅವರಿಗಿಲ್ಲದಿದ್ದ ಇಂಗಿತವನ್ನು ಇತ್ತೆದು ಪ್ರಚುರಪಡಿಸಿ ಲಾಭ ಮಾಡಿಕೊಳ್ಳಬಯಸಿದ ಇವರಿಗೆ ಮಾಡಿದ್ದುಣ್ಣೋ ಮಹಾರಾಯ ಎಂಬಂತ ಸ್ಥಿತಿಯಾಗಿದೆ" ಎಂದು ಕಿಡಿಕಾರಿದ್ದಾರೆ.
ಅವರ ಕ್ಷೇತ್ರ, ಸಿನಿಮಾ ಅದನ್ನು ನಿಭಾಯಿಸಿಕೊಂಡಿರುವುದು ಆರೋಗ್ಯಕರ!
"ಉತ್ತಮ ಉದ್ದೇಶ ಇವರದ್ದಾಗಿದ್ದರೆ ಖಂಡಿತ ವಿಜಯಲಕ್ಷ್ಮಿ ಒಲಿಯುತ್ತಿದ್ದಳು, ಸ್ವಂತ ಸಹೋದರನ ಭವಿಷ್ಯಕ್ಕೆ ತೊಡರುಗಾಲು ಹಾಕಲೆಂದೇ ಬೆಂಗಳೂರಿನಿಂದ ಧಾವಿಸಿಬಂದು ತಿಳಿಯಾಗಿಸಬೇಕಿದ್ದ ವಾತಾವರಣವನ್ನು ಕಲುಷಿತಗೊಳಿಸಿ, ದಿಕ್ಕು ದೆಸೆ ಇಲ್ಲದಂತಾಗಿ ಹೋಗಿ ಗೂಡು ಸೇರಿಕೊಂಡಿದ್ದಾರೆ ಬೆಂಗಳೂರಿಗೆ, ಹಿಂತಿರುಗಿ ಬರುವುದು ಕನಸಿನ ಮಾತು" ಎಂದಿದ್ದಾರೆ.
"ಅವರ ಕ್ಷೇತ್ರ, ಸಿನಿಮಾ ಅದನ್ನು ನಿಭಾಯಿಸಿಕೊಂಡಿರುವುದು ಆರೋಗ್ಯಕರ. ಈ ವಿಜಯೋತ್ಸವದ ಕೊಡುಗೆ ಜಿಲ್ಲೆಯ ಹಾಗೂ ಲೋಕ ಸಭಾ ಕ್ಷೇತ್ರದ ಮತದಾರರಿಂದ ಲಭಿಸಿದ್ದು, ಅವರಿಗೆ ನಾವು ಚಿರಋಣಿಗಳಾಗಿರುತ್ತೇವೆ. ಅವರ ಆಶಯಗಳನ್ನು ಸಾಕಾರಗೊಳಿಸುತ್ತೇವೆ. ಅವರ ನಂಬಿಕೆಗೆ ಚ್ಯುತಿಬಾರದಂತೆ ನಡೆದುಕೊಳ್ಳುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರು, ಹಿರಿಯ, ಕಿರಿಯ ಪದಾಧಿಕಾರಿಗಳು, ಸಂಘಟನೆಯಲ್ಲಿ ತೊಡಗಿಸಿಕೊಂಡ ಬ್ರಿಗೇಡ್/ಶಿಸ್ತಿನ ಸಿಪಾಯಿಗಳು ಹಗಲಿರುಲೆನ್ನದೆ ದುಡಿದು ಬಿವೈ ರಾಘವೇಂದ್ರರಿಗೆ ಅತ್ಯಧಿಕ ಬಹುಮತದಿಂದ ವಿಜಯಶಾಲಿಯನ್ನಾಗಿಸಿದ್ದಾರೆ. ಅವರೆಲ್ಲರಿಗೂ ನನ್ನ ನಮನಗಳು. ರಾಜ್ಯಮಟ್ಟದಲ್ಲಿ, ರಾಷ್ಟ್ರ ಮಟ್ಟದಲ್ಲಿ ಮಾರ್ಗದರ್ಶನ ನೀಡಿದ ನಾಯಕರೆಲ್ಲರಿಗೂ ಧನ್ಯವಾದಗಳು" ಎಂದು ನೂತನ ಸಂಸದರಿಗೆ ಶುಭ ಹಾರೈಸಿದ್ದಾರೆ.

ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ಜಾತ್ರೆಗಳಲ್ಲಿ ಕುಣಿಯಲಿ!
ಮುಂದುವರಿದು, "War is over but battle remains ಅನ್ನುವ ಹಾಗೆ ನಮ್ಮ ನಿಮ್ಮೆಲ್ಲರ ಗುರಿ ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆಗಳು, ಇದೇ ಓಟ ನಿರಂತರವಾಗಿ ನಡೆಯಬೇಕು, ಗೆಲುವನ್ನು ನಮ್ಮದಾಗಿಸಿಕೊಳ್ಳಬೇಕು ಪಣತೋಡೋಣ, ಗುರಿ ಮುಟ್ಟೋಣ. ಜೊತೆ ಜೊತೆಗೆ ಅಭಿವೃದ್ಧಿ ಕಾರ್ಯಗಳು ಶರವೇಗದಲ್ಲಿ ಚಾಲನೆಯಗಬೇಕು. ಪಶ್ಚಿಮ ಘಟ್ಟದ ಈ ತಪ್ಪಲು ಸರ್ವ ಜನಾಂಗದ ಶಾಂತಿಯ ತೋಟವಾಗಿ ಕಂಗೊಳಿಸಬೇಕು" ಎಂದಿದ್ದಾರೆ.
"ಇನ್ನು ನನ್ನ ತಮ್ಮ ಮಧು ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು, ಇಲ್ಲ ಸಿಎಂ ಅವನನ್ನು ಸಂಪುಟ ದಿಂದ ವಜಾ ಮಾಡಬೇಕು. ಕನ್ನಡಕ್ಕೆ, ಕನ್ನಡನಾಡಿಗೆ ಅವಮಾನಪಡಿಸಿದಾತ, ಟ್ರೊಲ್ ಮಾಡಿದವರಿಗೆ, ಮಾಧ್ಯಮದವರಿಗೆ ಶಾಪ ಹಾಕಿ ತಾನೇ ಶಾಪಗ್ರಸ್ತನಾದ. ಅವನ ಭಾವ, ನನ್ನ ತಂಗಿಯ ಗಂಡ ಡಾ. ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು" ಎಂದಿದ್ದಾರೆ.
"ನನ್ನ ತಂಗಿ ಸಿನಿಮಾ ಡಾನ್ ಆಗಿರುವುದರಿಂದ ಬೇಸರಕ್ಕೆ ಕಾರಣವಿಲ್ಲ ದೊಡ್ಡಮನೆಯ ವ್ಯವಹಾರ ಸಾಕಷ್ಟಿರುತ್ತದೆ, ಬೇರೆಯವರಿಗೆ ಅವಕಾಶ ಸಿಗಲಾರದು. ಹೆದರಿಸುವ, ಬೆದರಿಸುವ, ಹುಷಾರ್ ಅನ್ನುವ ಮಾತುಗಳೇನಿದ್ದರೂ ಗಂಟಲೋಳಗೇ, ನಾಲ್ಕು ಗೋಡೆಗಳೊಳಗೆ, ತಮ್ಮ ಪಟಾಲಂ ಮುಂದೆ ಮಾತ್ರ ಚಾಲ್ತಿಯಲ್ಲಿರಬೇಕು. ದಿಕ್ಕು ಗೆಟ್ಟು ದಿಕ್ಕಾಪಾಲಾಗಿ ಹೋಗಿ ಬೆಂಗಳೂರು ಸೇರಿಕೊಂಡವರಿಗೆ ಕೊನೆಯ ಎಚ್ಚರಿಕೆ, ನೀವು ಹಿಂತಿರುಗಿ ಬರುವುದು ಕನಸಿನ ಮಾತು. ಜೈಹಿಂದ್, ಜೈ ಕರ್ನಾಟಕ!" ಎಂದು ಉದ್ದದ ಪೋಸ್ಟ್ ಹಂಚಿಕೊಂಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications