• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೆಎಸ್ ಯುಆರ್ ಎಫ್ ಶ್ರೇಣಿಯಲ್ಲಿ ಕುವೆಂಪು ವಿಶ್ವವಿದ್ಯಾಲಯಕ್ಕೆ ಮೂರನೇ ಸ್ಥಾನ

By ಶಿವಮೊಗ್ಗ ಪ್ರತಿನಿಧಿ
|

ಶಿವಮೊಗ್ಗ, ಸೆಪ್ಟೆಂಬರ್ 18: ಉನ್ನತ ಶಿಕ್ಷಣ ಇಲಾಖೆ ಬಿಡುಗಡೆಗೊಳಿಸಿರುವ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಶ್ರೇಣೀಕರಣ (ಕೆಎಸ್ ಯುಆರ್ ಎಫ್ -Karnataka State Universities Ranking Framework) 2019ರ ಪಟ್ಟಿಯಲ್ಲಿ ಕುವೆಂಪು ವಿಶ್ವವಿದ್ಯಾಲಯಕ್ಕೆ ಮೂರನೇ ಸ್ಥಾನ ಲಭಿಸಿದೆ.

ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಅವರು ಕುವೆಂಪು ವಿವಿಯ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಅವರಿಗೆ ಪ್ರಮಾಣ ಪತ್ರ ನೀಡಿದರು. ಹತ್ತು ವರ್ಷಕ್ಕಿಂತ ಹೆಚ್ಚಿನ ಕಾಲಾವಧಿ ಪೂರೈಸಿರುವ ವಿವಿಗಳ ಪಟ್ಟಿಯಲ್ಲಿ ಒಂದು ಸಾವಿರಕ್ಕೆ 718 ಅಂಕಗಳನ್ನು ಪಡೆದಿರುವ ಕುವೆಂಪು ವಿವಿಯು 2019ನೇ ಸಾಲಿನಲ್ಲಿ ಮೂರನೇ ಸ್ಥಾನ ಗಳಿಸಿದೆ.

"ಇಂಡಿಯನ್ ಯೂನಿವರ್ಸಿಟಿ" ಶ್ರೇಣಿಪಟ್ಟಿಯಲ್ಲಿ ಮೈಸೂರು ವಿವಿಗೆ 21 ಸ್ಥಾನ

ಮೊದಲೆರೆಡು ಸ್ಥಾನಗಳನ್ನು ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ ಮತ್ತು ಕೆ.ಎಲ್.ಇ. ವಿವಿಗಳು ಪಡೆದಿವೆ. ಸರ್ಕಾರಿ ಅನುದಾನಿತ ವಿವಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯು ಮೊದಲ ಸ್ಥಾನವನ್ನು ಪಡೆದ ಸಾಧನೆ ಮಾಡಿದೆ.

ಕೆಎಸ್ ಯುಆರ್ ಎಫ್ ಶ್ರೇಣಿಯನ್ನು ಶಿಕ್ಷಣ ಸಂಸ್ಥೆಯ ಸಂಶೋಧನೆ, ಆವಿಷ್ಕಾರ, ಬೋಧನೆ, ಮೂಲಸೌಕರ್ಯ ಹಾಗೂ ಸಾಮಾಜಿಕ ಪರಿಣಾಮಗಳೆಂಬ ಐದು ಮಾನದಂಡಗಳನ್ನು ಪರಿಗಣಿಸಿ ತಯಾರಿಸಲಾಗುತ್ತದೆ. ಕುವೆಂಪು ವಿವಿಯು ಸಂಶೋಧನೆ ಮತ್ತು ಬೋಧನೆ ವಿಭಾಗಗಳಲ್ಲಿ ಐದಕ್ಕೆ ಐದು ಅಂಕಗಳನ್ನು ಗಳಿಸಿದ್ದು ವಿವಿಯ ಗುಣಮಟ್ಟವನ್ನು ಪ್ರತಿಬಿಂಬಿಸುತ್ತಿದೆ. ಈಗಾಗಲೇ ವಿಶ್ವವಿದ್ಯಾಲಯವು ನ್ಯಾಕ್ ನಿಂದ 'ಎ' ಶ್ರೇಣಿ, ಎನ್.ಐ.ಆರ್.ಎಫ್.ನಿಂದ 73ನೇ ಶ್ರೇಣಿ ಹಾಗೂ ಸೈಮ್ಯಾಗೋ ರ್ಯಾಂಕಿಂಗ್ ನಲ್ಲಿ ಭಾರತಕ್ಕೆ 45ನೇ ಸ್ಥಾನ ಪಡೆದಿದೆ.

ಬೆಂಗಳೂರು ವಿವಿಗೆ ಸ್ನಾತಕೋತ್ತರ ಕೋರ್ಸ್‌ಗೆ ತೃತೀಯ ಲಿಂಗಿಗಳ ಅರ್ಜಿ

"ಪ್ರಸ್ತುತ ಕೆಎಸ್ ಯುಆರ್ ಎಫ್ ranking ಕೂಡ ವಿವಿ ಮೂರನೇ ಶ್ರೇಣಿ ಪಡೆದಿರುವುದು ಶೈಕ್ಷಣಿಕ ಮತ್ತು ಸಂಶೋಧನಾ ಗುಣಮಟ್ಟದ ಸ್ಥಿರತೆಯನ್ನು ತೋರ್ಪಡಿಸುತ್ತದೆ" ಎಂದು ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಹರ್ಷ ವ್ಯಕ್ತಪಡಿಸಿದರು.

ರಾಜ್ಯ ಮುಕ್ತ ವಿವಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶ

ಕೆಎಸ್ ಯುಆರ್ ಎಫ್ ಬಗ್ಗೆ: ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಅಂಗಸಂಸ್ಥೆಯಾದ ಕರ್ನಾಟಕ ಉನ್ನತ ಶಿಕ್ಷಣ ಮಂಡಳಿಯು 2017ರಿಂದ ಕರ್ನಾಟಕ ರಾಜ್ಯದ ವಿಶ್ವವಿದ್ಯಾಲಯಗಳ ಗುಣಮಟ್ಟ, ಕಾರ್ಯ ಸಾಧನೆಗಳ ಮೌಲ್ಯಮಾಪನ ನಡೆಸಲು ಕೆಎಸ್ ಯುಆರ್ಎಫ್ ರ್ಯಾಂಕಿಂಗ್ ಪ್ರಾರಂಭಿಸಿದೆ. ಈ ವರ್ಷದ ranking ಪಟ್ಟಿಯು ಇದರ ಮೂರನೇ ಆವೃತ್ತಿಯಾಗಿದೆ. ರಾಷ್ಟ್ರಮಟ್ಟದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಆರಂಭಿಸಿರುವ ಎನ್.ಐ.ಆರ್.ಎಫ್. ರ್ಯಾಂಕಿಂಗ್ ನಂತೆ ರಾಜ್ಯಮಟ್ಟದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಶ್ರೇಣಿಕರಣವನ್ನು ಕೆಎಸ್ ಯುಆರ್ ಎಫ್ ನಿರ್ಧರಿಸುತ್ತದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Department of Higher Education released the Karnataka State Universities ranking. Kuvempu University has been ranked third in the 2019 list.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more