ಶಿವಮೊಗ್ಗ: ಸಿಎಂ ಸ್ವಕ್ಷೇತ್ರ ಶಿಕಾರಿಪುರ ಪುರಸಭೆ ಬಿಜೆಪಿ ತೆಕ್ಕೆಗೆ
ಶಿವಮೊಗ್ಗ, ನವೆಂಬರ್ 9: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪುರಸಭಾ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆದಿದ್ದು, ಅಧ್ಯಕ್ಷೆಯಾಗಿ 12ನೇ ವಾರ್ಡಿನ ಲಕ್ಷ್ಮಿ ಮಹಾಲಿಂಗಪ್ಪ, ಉಪಾಧ್ಯಕ್ಷರಾಗಿ ಮಹಮ್ಮದ್ ಸಾದೀಕ್ ಆಯ್ಕೆಯಾಗಿದ್ದಾರೆ.
ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದು, ಬಿಜೆಪಿಗೆ ಬೆಂಬಲ ನೀಡಿದ್ದ ಮಹಮ್ಮದ್ ಸಾದೀಕ್ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಕಮಲಮ್ಮ, ಉಪಾಧ್ಯಕ್ಷ ಸ್ಥಾನಕ್ಕೆ ಮಹಮ್ಮದ್ ದಸ್ತಗೀರ್ ನಾಮಪತ್ರ ಸಲ್ಲಿಸಿದ್ದರು.
ಶಿಕಾರಿಪುರ ಪಟ್ಟಣ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಕೂಡ ಭಾಗಿಯಾಗಿದ್ದು, ಬಿಜೆಪಿಯ ಅಧ್ಯಕ್ಷ, ಉಪಾಧ್ಯಕ್ಷ ಅಭ್ಯರ್ಥಿಗಳ ಪರವಾಗಿ ಮತ ಚಲಾವಣೆ ಮಾಡಿದರು.

ಬಿಜೆಪಿ ಅಭ್ಯರ್ಥಿ ಲಕ್ಷ್ಮಿ ಮಹಾಲಿಂಗಪ್ಪ ಪರ 12 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಕಮಲಮ್ಮ ಪರವಾಗಿ 9 ಮತಗಳು ಚಲಾವಣೆಯಾಗಿದ್ದು, ಅಂತಿಮವಾಗಿ ಬಿಜೆಪಿ ಅಭ್ಯರ್ಥಿ ಲಕ್ಷ್ಮಿ ಮಹಾಲಿಂಗಪ್ಪ ಆಯ್ಕೆಯಾಗಿದ್ದಾರೆ.
ಅಭ್ಯರ್ಥಿಗಳ ಪರವಾಗಿ ಕೈ ಎತ್ತುವ ಮೂಲಕ ಮತ ಚಲಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಮಹಮ್ಮದ್ ಸಾದೀಕ್ ಪರವಾಗಿ 12 ಮತಗಳು ಕಾಂಗ್ರೆಸ್ ಅಭ್ಯರ್ಥಿ ಮಹಮ್ಮದ್ ದಸ್ತಗಿರ್ ಪರವಾಗಿ 9 ಮತಗಳು ಚಲಾವಣೆ ಆಗಿದ್ದು, ಅಂತಿಮವಾಗಿ ಬಿಜೆಪಿ ಅಭ್ಯರ್ಥಿ ಮಹಮ್ಮದ್ ಸಾದೀಕ್ ಉಪಾಧ್ಯಕ್ಷರಾಗಿ ಆಯ್ಕೆಯಾಗದರು. ಚುನಾವಣೆ ಅಧಿಕಾರಗಳಾದ ತಹಶಿಲ್ದಾರ ಕವಿರಾಜ್ ಅಧಿಕೃತ ಘೋಷಣೆಯನ್ನು ಹೊರಡಿಸಿದರು.












Click it and Unblock the Notifications