• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿವಮೊಗ್ಗ: ಸಿಎಂ ಸ್ವಕ್ಷೇತ್ರ ಶಿಕಾರಿಪುರ ಪುರಸಭೆ ಬಿಜೆಪಿ ತೆಕ್ಕೆಗೆ

By ಶಿವಮೊಗ್ಗ ಪ್ರತಿನಿಧಿ
|

ಶಿವಮೊಗ್ಗ, ನವೆಂಬರ್ 9: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪುರಸಭಾ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆದಿದ್ದು, ಅಧ್ಯಕ್ಷೆಯಾಗಿ 12ನೇ ವಾರ್ಡಿನ ಲಕ್ಷ್ಮಿ ಮಹಾಲಿಂಗಪ್ಪ, ಉಪಾಧ್ಯಕ್ಷರಾಗಿ ಮಹಮ್ಮದ್ ಸಾದೀಕ್ ಆಯ್ಕೆಯಾಗಿದ್ದಾರೆ.

ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದು, ಬಿಜೆಪಿಗೆ ಬೆಂಬಲ ನೀಡಿದ್ದ ಮಹಮ್ಮದ್ ಸಾದೀಕ್ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಕಮಲಮ್ಮ, ಉಪಾಧ್ಯಕ್ಷ ಸ್ಥಾನಕ್ಕೆ ಮಹಮ್ಮದ್ ದಸ್ತಗೀರ್ ನಾಮಪತ್ರ ಸಲ್ಲಿಸಿದ್ದರು.

ಜಗಳೂರು ಪ.ಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಿಜೆಪಿ ಪಾಲುಜಗಳೂರು ಪ.ಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಿಜೆಪಿ ಪಾಲು

ಶಿಕಾರಿಪುರ ಪಟ್ಟಣ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಕೂಡ ಭಾಗಿಯಾಗಿದ್ದು, ಬಿಜೆಪಿಯ ಅಧ್ಯಕ್ಷ, ಉಪಾಧ್ಯಕ್ಷ ಅಭ್ಯರ್ಥಿಗಳ ಪರವಾಗಿ‌ ಮತ ಚಲಾವಣೆ ಮಾಡಿದರು.

ಬಿಜೆಪಿ ಅಭ್ಯರ್ಥಿ ಲಕ್ಷ್ಮಿ ಮಹಾಲಿಂಗಪ್ಪ ಪರ 12 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಕಮಲಮ್ಮ ಪರವಾಗಿ 9 ಮತಗಳು ಚಲಾವಣೆಯಾಗಿದ್ದು, ಅಂತಿಮವಾಗಿ ಬಿಜೆಪಿ ಅಭ್ಯರ್ಥಿ ಲಕ್ಷ್ಮಿ‌ ಮಹಾಲಿಂಗಪ್ಪ ಆಯ್ಕೆಯಾಗಿದ್ದಾರೆ.

ಶಿವಮೊಗ್ಗ: ಕಾರ್ಗಲ್ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿಗೆ ಅಧಿಕಾರಶಿವಮೊಗ್ಗ: ಕಾರ್ಗಲ್ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿಗೆ ಅಧಿಕಾರ

ಅಭ್ಯರ್ಥಿಗಳ ಪರವಾಗಿ ಕೈ ಎತ್ತುವ ಮೂಲಕ ಮತ ಚಲಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಮಹಮ್ಮದ್ ಸಾದೀಕ್ ಪರವಾಗಿ 12 ಮತಗಳು ಕಾಂಗ್ರೆಸ್ ಅಭ್ಯರ್ಥಿ ಮಹಮ್ಮದ್ ದಸ್ತಗಿರ್ ಪರವಾಗಿ 9 ಮತಗಳು ಚಲಾವಣೆ ಆಗಿದ್ದು, ಅಂತಿಮವಾಗಿ ಬಿಜೆಪಿ ಅಭ್ಯರ್ಥಿ ಮಹಮ್ಮದ್ ಸಾದೀಕ್ ಉಪಾಧ್ಯಕ್ಷರಾಗಿ ಆಯ್ಕೆಯಾಗದರು. ಚುನಾವಣೆ ಅಧಿಕಾರಗಳಾದ ತಹಶಿಲ್ದಾರ ಕವಿರಾಜ್ ಅಧಿಕೃತ ಘೋಷಣೆಯನ್ನು ಹೊರಡಿಸಿದರು.

English summary
Lakshmi Mahalingappa of the 12th Ward of the Shikaripura Municipality of Shivmogga District has been elected as President.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X