ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ:12 ಪಾರಂಪರಿಕ ಕಟ್ಟಡಗಳ 3ಡಿ ಡಿಜಿಟಲೀಕರಣ ಕಾರ್ಯಕ್ಕೆ ಚಾಲನೆ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಸೆಪ್ಟೆಂಬರ್ 17: ಶಿವಮೊಗ್ಗ ಜಿಲ್ಲೆಯ ಪಾರಂಪರಿಕ ಕಟ್ಟಡಗಳು, ಸ್ಮಾರಕಗಳು, ಅರಮನೆ, ದೇವಸ್ಥಾನಗಳನ್ನು 3ಡಿ ಲೇಸರ್ ತಂತ್ರಜ್ಞಾನ ಬಳಸಿ ಡಿಜಿಟಲೀಕರಣಗೊಳಿಸುವ ಕಾರ್ಯಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿ ಅವರು ಬುಧವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 12 ಪಾರಂಪರಿಕ ಕಟ್ಟಡ, ಅರಮನೆ, ಸ್ಮಾರಕಗಳನ್ನು ಈ ಕಾರ್ಯಕ್ಕಾಗಿ ಗುರುತಿಸಲಾಗಿದೆ. ಈ ತಂತ್ರಜ್ಞಾನ ಸ್ಮಾರಕಗಳ ಮೂಲಭೂತ ಸ್ವರೂಪವನ್ನು ನಿರ್ಧರಿಸಲು ಮತ್ತು ಪಾರಂಪರಿಕ ತಾಣಗಳ ಸೌಲಭ್ಯಗಳನ್ನು ಸುಧಾರಿಸಲು ಸಹಕಾರಿಯಾಗಲಿದೆ. ಇದರಿಂದ ಡಿಜಿಟಲ್ ಪುನರ್ ನಿರ್ಮಾಣ ಮತ್ತು ಸ್ಮಾರಕಗಳ ಮಾಪನ ವಿಶ್ಲೇಷಣೆ ಮಾಡಬಹುದಾಗಿದೆ ಎಂದರು.

ಶಿವಮೊಗ್ಗ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕವಾಗಿ ಸುರಿದ ಮಳೆ ಶಿವಮೊಗ್ಗ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕವಾಗಿ ಸುರಿದ ಮಳೆ

ಪ್ರಸ್ತುತ ಶಿವಮೊಗ್ಗ ನಗರದ ಶಿವಪ್ಪ ನಾಯಕ ಅರಮನೆ, ಕೋಟೆ ಆಂಜನೇಯ ದೇವಾಲಯ, ಶ್ರೀ ಭೀಮೇಶ್ವರ ದೇವಾಲಯ, ಕುಸ್ಕೂರಿನ ಶ್ರೀ ಭೀಮೇಶ್ವರ ದೇವಾಲಯ, ಭದ್ರಾವತಿಯ ಶ್ರೀ ಲಕ್ಷ್ಮೀ ನರಸಿಂಹ ದೇವಾಲಯ, ಹೊಸನಗರ ತಾಲೂಕಿನ ಸಾಲಗೇರಿಯ ಉಮಾಪತಿ ದೇವಾಲಯ, ಶಿವಪ್ಪ ನಾಯಕನ ಗೋಪುರ, ಶಿಕಾರಿಪುರ-ಚಿಕ್ಕಮಾಗಡಿ ಜೈನ ಬಸದಿ, ನರಸಾಪುರ ಬಸದಿ, ಸೊರಬ ತಾಲೂಕಿನ ಪುರ ಗ್ರಾಮದ ಸೋಮೇಶ್ವರ ದೇವಾಲಯ, ದವನಿ ಭೈಲಿನ ಕಪಿಲೇಶ್ವರ ದೇವಾಲಯಗಳ 3ಡಿ ಡಿಜಿಟಲೀಕರಣ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Launching 3D Digitalization Of 12 Heritage Buildings In Shivamogga District

ಸ್ಮಾರಕಗಳು ಹಾನಿಗೊಳಗಾದರೆ, ಕಟ್ಟಡಗಳ ಮರು ನಿರ್ಮಾಣಕ್ಕೆ ಈ ತಂತ್ರಜ್ಞಾನ ಸಹಕಾರಿಯಾಗಿದೆ. ಡಿಜಿಟಲೀಕರಣದ ಮೂಲಕ ಸ್ಮಾರಕಗಳ ಅಳತೆ, ಆಳ, ಅಗಲ, ಸ್ಮಾರಕಕ್ಕೆ ಬಳಸಲಾಗಿರುವ ಸಾಮಾಗ್ರಿ, ನಿರ್ಮಾಣಗೊಂಡ ವರ್ಷ, ಯಾರ ಕಾಲದಲ್ಲಿ ನಿರ್ಮಾಣಗೊಂಡಿದೆ, ವರ್ಷ ಮತ್ತು ಐತಿಹಾಸಿಕ ವಿವರಗಳು, ವಾಸ್ತು ಶಿಲ್ಪದ ಶೈಲಿಯನ್ನು ಸಹ ಕ್ರೋಢೀಕರಿಸಿ ಸಂಗ್ರಹಿಸಲಾಗುತ್ತದೆ.

ಈ ಮಾಹಿತಿಯು ಸಂಶೋಧಕರಿಗೆ, ಇತಿಹಾಸಕಾರರಿಗೆ ಅನೇಕ ವಿವರಗಳೊಂದಿಗೆ ಇತಿಹಾಸವನ್ನು ಪುನರ್ ನಿರ್ಮಿಸಲು ಅವಕಾಶ ಕಲ್ಪಿಸುತ್ತದೆ ಎಂದರು. ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ವಿದ್ಯಾ ಮಂಡಳಿಯ ರಾಜಶೇಖರ್, ಸಚಿನ್, ಎನ್‍ಆರ್‍ಡಿಎಂಎಸ್ ಸಂಸ್ಥೆಯ ಶಂಕರ್ ಇದ್ದರು.

English summary
Shivamogga Zilla Panchayat CEO ML Vaishali on Wednesday launched the digitalization of heritage buildings, monuments, palaces and temples in Shivamogga district using 3D laser technology.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X