ಪರಿಷತ್ ಚುನಾವಣೆ; ಬಂಡಾಯ ನಾಯಕನಿಗೆ ಈಶ್ವರಪ್ಪ ಬೆಂಬಲ!
ಶಿವಮೊಗ್ಗ, ಮೇ 22: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಜೂನ್ 3ರಂದು ಒಟ್ಟು 6 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಎದುರಿಸುತ್ತಿದ್ದು, ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ.
ನೈಋತ್ಯ ಪದವೀಧರ ಕ್ಷೇತ್ರದ ವ್ಯಾಪ್ತಿಗೆ ಶಿವಮೊಗ್ಗ, ದಾವಣಗೆರೆ (ಹೊನ್ನಾಳಿ, ಚನ್ನಗಿರಿ) ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳು ಸೇರುತ್ತವೆ. ಕ್ಷೇತ್ರದಲ್ಲಿ 108 ಮತಗಟ್ಟೆಗಳಿದ್ದು, ಒಟ್ಟು 85,089 ಮತದಾರರು ಇದ್ದಾರೆ. ಇವರಲ್ಲಿ 43,720 ಪುರುಷ ಮತದಾರರು, 41,368 ಮಹಿಳಾ ಮತದಾರರು ಹಾಗೂ ಒಬ್ಬರು ಇತರೆ ಮತದಾರರು.

ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜನಾಥ. ಬಿಜೆಪಿ ಅಭ್ಯರ್ಥಿ ಶಿವಮೊಗ್ಗದ ಖ್ಯಾತ ವೈದ್ಯರಾದ ಧನಂಜಯ ಸರ್ಜಿ. ಬಿಜೆಪಿ ನಾಯಕ, ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಸಿಕ್ಕಿಲ್ಲ ಎಂದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಈಶ್ವರಪ್ಪ ಬೆಂಬಲ: ಲೋಕಸಭೆ ಚುನಾವಣೆಯಲ್ಲಿ ಪುತ್ರನಿಗೆ ಹಾವೇರಿ ಬಿಜೆಪಿ ಟಿಕೆಟ್ ಸಿಕ್ಕಿಲ್ಲ ಎಂದು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿರುವ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ನೈಋತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ ರಘುಪತಿ ಭಟ್‌ಗೆ ಬೆಂಬಲ ಘೋಷಣೆ ಮಾಡಿದ್ದಾರೆ.
ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆಗೊಂಡಿರುವ ಈಶ್ವರಪ್ಪ 'ರಾಷ್ಟ್ರ ಭಕ್ತರ ಬಳಗ' ಎಂದು ಸ್ಥಾಪಿಸಿಕೊಂಡು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಈಗ ಈ ಬಳಗದ ವತಿಯಿಂದಲೇ ಪರಿಷತ್ ಚುನಾವಣೆಯಲ್ಲಿ ರಘುಪತಿ ಭಟ್‌ಗೆ ಬೆಂಬಲ ನೀಡಲಾಗಿದೆ.
ಮಂಗಳವಾರ ಶಿವಮೊಗ್ಗದಲ್ಲಿ ಕೆ. ಎಸ್. ಈಶ್ವರಪ್ಪ ಮತ್ತು 'ರಾಷ್ಟ್ರಭಕ್ತರ ಬಳಗ'ದ ಜೊತೆ ರಘುಪತಿ ಭಟ್ ಪತ್ರಿಕಾಗೋಷ್ಠಿ ನಡೆಸಿದರು. ವಿಧಾನಪರಿಷತ್ ಚುನಾವಣೆಯಲ್ಲಿ ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ತಮ್ಮನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.
ಕೆ. ಎಸ್. ಈಶ್ವರಪ್ಪ ಮಾತನಾಡಿ, "ಬಿಜೆಪಿ ಎಂದರೆ ಈಶ್ವರಪ್ಪ, ಈಶ್ವರಪ್ಪ ಎಂದರೆ ಬಿಜೆಪಿ ಎನ್ನುತ್ತಿದ್ದ ನನಗೆ ಪಕ್ಷೇತರನಾಗಿ ಸ್ಪರ್ಧಿಸುವ ಸಂದರ್ಭ ಎದುರಾಯಿತು. ಅದೇ ರೀತಿ ನಾನು ಸತ್ತರೆ ನನ್ನ ಎದೆ ಮೇಲೆ ಬಿಜೆಪಿ ಬಾವುಟ ಇರಬೇಕು ಎಂದು ಹೇಳುವ ರಘುಪತಿ ಭಟ್ ಅವರಿಗೂ ಪಕ್ಷದಲ್ಲಿ ಮೋಸವಾಯಿತು" ಎಂದರು.
"ವಿಧಾನಸಸಭೆ ಚುನಾವಣೆ ಸಂದರ್ಭದಲ್ಲಿ ನನಗೆ ಟಿಕೆಟ್ ನಿರಾಕರಣೆ ಮಾಡಿದಾಗ ರಾಷ್ಟ್ರೀಯ ನಾಯಕರಿಂದ ಕರೆ ಬಂದಿತ್ತು. ಆದರೆ ಉಡುಪಿಯಲ್ಲಿ ರಘುಪತಿ ಭಟ್ ಅವರಿಗೆ ಕರೆ ಬರಲಿಲ್ಲ. ಟಿಕೆಟ್ ಘೋಷಣೆಗೆ ಎರಡು ದಿನ ಇರುವಾಗ ನಿಮಗೇ ಟಿಕೆಟ್ ಎಂದು ರಘುಪತಿ ಭಟ್ ಅವರಿಗೆ ಹೇಳಿದವರು ಕೊನೆ ಗಳಿಗೆಯಲ್ಲಿ ಮೋಸ ಮಾಡಿದರು" ಎಂದು ಈಶ್ವರಪ್ಪ ಹೇಳಿದರು.
"ಲೋಕಸಭೆ, ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಬಂದ ಬಳಿಕ ನಮ್ಮ ಸ್ಪರ್ಧೆಯಿಂದ ಪಕ್ಷ ಎಷ್ಟರ ಮಟ್ಟಿಗೆ ಶುದ್ಧೀಕರಣ ಆಗುತ್ತದೆ ಎಂಬುದು ತಿಳಿಯುತ್ತದೆ. ಚುನಾವಣೆ ಮುಗಿಯುತ್ತಿದ್ದಂತೆ ರಘುಪತಿ ಭಟ್ ಅವರಿಗೆ ನೋಟಿಸ್ ಬರಬಹುದು" ಎಂದು ಈಶ್ವರಪ್ಪ ತಿಳಿಸಿದರು.
ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆಗೆ ಮೇ 16ರಂದು ರಘುಪತಿ ಭಟ್ ನಾಮಪತ್ರ ಸಲ್ಲಿಸಿದ್ದರು. ಪಕ್ಷೇತರ ಅಭ್ಯರ್ಥಿಯಾದ ಅವರು ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ನಾಮಪತ್ರ ವಾಪಸ್ ಪಡೆಯದೇ ಅವರು ಕಣದಲ್ಲಿ ಉಳಿದಿದ್ದಾರೆ.
ನೈರುತ್ಯ ಪದವೀಧರರ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ಮಾತ್ರ ನಾಮಪತ್ರ ಹಿಂಪಡೆದಿದ್ದು, ಒಟ್ಟು 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚುನಾವಣೆಗೆ ಮತದಾನ ಜೂನ್ 3 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಜೂನ್ 6ಕ್ಕೆ ಫಲಿತಾಂಶ ಘೋಷಣೆಯಾಗಲಿದೆ.
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಹಾಲಿ ಶಾಸಕರಲ್ಲಿ ರಘುಪತಿ ಭಟ್ ಸಹ ಒಬ್ಬರು. 2018ರ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದಲ್ಲಿ ಅವರು ಜಯಗಳಿಸಿದ್ದರು. ಆದರೆ 2023ರಲ್ಲಿ ಅವರನ್ನು ಬಿಟ್ಟು ಯಶ್‌ಪಾಲ್ ಎ. ಸುವರ್ಣ ಬಿಜೆಪಿ ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು. ಚುನಾವಣೆಯಲ್ಲಿ ಅವರು 97079 ಮತಗಳನ್ನು ಪಡೆದು ಗೆದ್ದರು. ಆದ್ದರಿಂದ ರಘುಪತಿ ಭಟ್ ವಿಧಾನ ಪರಿಷತ್ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications