ಪರಿಷತ್ ಫೈಟ್: 3 ಕ್ಷೇತ್ರದ ಕಾಂಗ್ರೆಸ್, ಬಿಜೆಪಿ ಎದುರಾಳಿಗಳ ಪಟ್ಟಿ

ಶಿವಮೊಗ್ಗ, ಮೇ 12: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಮತದಾನ ಮುಕ್ತಾಯಗೊಂಡು ಮತಯಂತ್ರದಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದೆ. ಈಗ ವಿಧಾನ ಪರಿಷತ್ ಚುನಾವಣೆಯ ಕಾವು ಏರ ತೊಡಗಿದೆ.

ಕೇಂದ್ರ ಚುನಾವಣಾ ಆಯೋಗ ವಿಧಾನ ಪರಿಷತ್ ನ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದೆ. ಮೇ 9ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಜೂನ್ 21ಕ್ಕೆ ವಿಧಾನ ಪರಿಷತ್ತಿನ 3 ಪದವೀಧರರ ಹಾಗೂ 3 ಶಿಕ್ಷಕರ ಕ್ಷೇತ್ರದ ಸ್ಥಾನಗಳ ಅವಧಿ ಮುಕ್ತಾಯವಾಗುವುದರಿಂದ ಚುನಾವಣೆ ನಡೆಸಲಾಗುತ್ತಿದೆ.

Legislative Council Election On June 3 Candidates List

ಅಭ್ಯರ್ಥಿಗಳು ಮೇ 16ರ ತನಕ ನಾಮಪತ್ರಗಳನ್ನು ಸಲ್ಲಿಸಬಹುದು. ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ, ಮೇ 20ರಂದು ನಾಮಪತ್ರಗಳ ವಾಪಸ್ ಪಡೆಯಲು ಕೊನೆಯ ದಿನ. ಜೂನ್ 3ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತ ಎಣಿಕೆ ಜೂನ್ 6ರಂದು ನಡೆಯಲಿದೆ.

ಅಭ್ಯರ್ಥಿಗಳ ಪಟ್ಟಿ: ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಕಾಂಗ್ರೆಸ್ ಮತ್ತು ಬಿಜೆಪಿ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿವೆ.

ನೈರುತ್ಯ ಪದವೀಧರರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ. ಆಯಾ ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಯಾಗಿದ್ದಾರೆ. ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಬೆಂಗಳೂರು ಹಾಗೂ ನೈಋತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಕ್ಕೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳು.

ನೈಋತ್ಯ ಪದವೀಧರರ ಕ್ಷೇತ್ರಕ್ಕೆ ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲ್ಲೂಕುಗಳು ಸೇರಲಿವೆ.

ಆಗ್ನೇಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕುಗಳು ಸೇರಲಿವೆ.

ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲ್ಲೂಕುಗಳು ಬರಲಿವೆ. ಕ್ಷೇತ್ರದ ವ್ಯಾಪ್ತಿಯ ಒಟ್ಟು ಮತದಾರರ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ.

ಅಭ್ಯರ್ಥಿಗಳ ಪಟ್ಟಿ

* ನೈಋತ್ಯ ಪದವೀಧರರ ಕ್ಷೇತ್ರ: ಆಯನೂರು ಮಂಜುನಾಥ (ಕಾಂಗ್ರೆಸ್), ಧನಂಜಯ ಸರ್ಜಿ (ಬಿಜೆಪಿ).

* ನೈಋತ್ಯ ಶಿಕ್ಷಕರ ಕ್ಷೇತ್ರ: ಕೆ. ಕೆ. ಮಂಜುನಾಥ (ಕಾಂಗ್ರೆಸ್), ಎಲ್. ಭೋಜೇಗೌಡ (ಜೆಡಿಎಸ್)

* ಆಗ್ನೇಯ ಶಿಕ್ಷಕರ ಕ್ಷೇತ್ರ: ವೈ. ಎ. ನಾರಾಯಣ ಸ್ವಾಮಿ (ಬಿಜೆಪಿ), ಡಿ. ಟಿ. ಶ್ರೀನಿವಾಸ್ (ಕಾಂಗ್ರೆಸ್)

ಕರ್ನಾಟಕದ ಆಡಳಿತ ಪಕ್ಷ ಕಾಂಗ್ರೆಸ್‌ಗೆ ಲೋಕಸಭೆ ಚುನಾವಣೆ ಫಲಿತಾಂಶದಂತೆ ವಿಧಾನ ಪರಿಷತ್ ಚುನಾವಣೆಯೂ ಮುಖ್ಯವಾಗಿದೆ. ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ ಮಾಡಿಕೊಂಡು ಚುನಾವಣೆ ಎದುರಿಸುತ್ತಿವೆ. ಆದರೆ ಕಾಂಗ್ರೆಸ್ ಪರಿಷತ್‌ನಲ್ಲಿ ಹೆಚ್ಚು ಸ್ಥಾನ ಗೆದ್ದು, ಬಲ ಹೆಚ್ಚಿಸಿಕೊಳ್ಳುವ ಜೊತೆಗೆ ಸಭಾಪತಿ ಸ್ಥಾನವನ್ನು ಪಡೆಯಬೇಕು ಎಂದು ಪಣ ತೊಟ್ಟಿದೆ.

ವಿಧಾನ ಪರಿಷತ್ ಸದಸ್ಯ ಬಲ 75. ಸದ್ಯ ಬಿಜೆಪಿಯ 32, ಕಾಂಗ್ರೆಸ್ 29 ಮತ್ತು ಜೆಡಿಎಸ್‌ನ 7 ಸದಸ್ಯರು ಇದ್ದಾರೆ. ಉಳಿದ ಸ್ಥಾನಗಳು ಖಾಲಿ ಇವೆ. ಬಿಜೆಪಿ-ಜೆಡಿಎಸ್ ಸೇರಿದರೆ ಸಾಮಾನ್ಯ ಬಹುಮತ 39 ಸದಸ್ಯರು ಇದ್ದಾರೆ. ಇದರಿಂದಾಗಿ ಕಾಂಗ್ರೆಸ್‌ಗೆ ಪರಿಷತ್‌ನಲ್ಲಿ ವಿಧೇಯಕ ಅಂಗೀಕಾರ ಮಾಡಿಕೊಳ್ಳಲು ತೊಂದರೆ ಆಗುತ್ತಿದೆ. ಆದ್ದರಿಂದ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+