ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪರಿಷತ್ ಚುನಾವಣೆ : ಮತಗಟ್ಟೆ, ಮತದಾರರ ಪಟ್ಟಿಗೆ ವೆಬ್ ಸೈಟ್ ನೋಡಿ

By Gururaj
|
Google Oneindia Kannada News

ಶಿವಮೊಗ್ಗ, ಜೂನ್ 01 : ನೈಋತ್ಯ ಪದವೀಧರರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಶಿವಮೊಗ್ಗ ಜಿಲ್ಲಾಡಳಿತ ಸಜ್ಜಾಗಿದೆ. ಜೂನ್ 8ರಂದು ಬೆಳಗ್ಗೆ 7ರಿಂದ ಸಂಜೆ 5ಗಂಟೆಯವರೆಗೆ ಮತದಾನ ಮಾಡಲು ಅವಕಾಶ ನೀಡಲಾಗಿದೆ.

ಶಿವಮೊಗ್ಗ ಜಿಲ್ಲಾಧಿಕಾರಿ ಎಂ.ಲೋಕೇಶ್ ಅವರು ಶುಕ್ರವಾರ ಈ ಕುರಿತು ಮಾಹಿತಿ ನೀಡಿದ್ದಾರೆ. 'ಮತದಾನದ ಅರ್ಹತೆ ಹೊಂದಿರುವ ಶಿಕ್ಷಕರಿಗೆ ಮತಗಟ್ಟೆ ವಿವರ ಇತ್ಯಾದಿ ಅಗತ್ಯ ಮಾಹಿತಿಗಳನ್ನು ಪಡೆಯಲು ಎಸ್‍ಎಂಎಸ್ ಮೂಲಕ ಮಾಹಿತಿ ಒದಗಿಸುವ ವ್ಯವಸ್ಥೆ ಮಾಡಲಾಗಿದೆ' ಎಂದರು.

ನೈಋತ್ಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಹೊಸಕೊಪ್ಪ ಸಂದರ್ಶನನೈಋತ್ಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಹೊಸಕೊಪ್ಪ ಸಂದರ್ಶನ

ಪ್ರತಿ ತಹಶೀಲ್ದಾರ್ ಕಚೇರಿಯಲ್ಲಿ ಈಗಾಗಲೇ ಹೆಲ್ಪ್ ಡೆಸ್ಕ್ ಪ್ರಾರಂಭಿಸಲಾಗಿದೆ. ಮತದಾರರ ಅಂತಿಮ ಪಟ್ಟಿ ಜಿಲ್ಲಾ ವೆಬ್‍ಸೈಟ್ shimoga.nic.in/ ಹಾಗೂ www.ceokarnataka.kar.nic.in ವೆಬ್‍ಸೈಟ್‍ನಲ್ಲಿ ಲಭ್ಯವಿದೆ.

Legislative Council election : SMS to Know your polling booth

ಮತದಾನದ ಸಮಯ ಬದಲಾವಣೆ : ಮತದಾನದ ಸಮಯವನ್ನು ಬೆಳಗ್ಗೆ 7ರಿಂದ 5ಗಂಟೆಯವರೆಗೆ ಬದಲಾಯಿಸಲಾಗಿದ್ದು, ಮತದಾರರು ಇದನ್ನು ಗಮನಿಸಬೇಕು. ಪದವೀಧರ ಕ್ಷೇತ್ರದ ಮತದಾರರಿಗೆ ಬಲಗೈ ತೋರು ಬೆರಳಿಗೆ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರಿಗೆ ಮಧ್ಯದ ಬೆರಳಿಗೆ ಶಾಯಿ ಗುರುತು ಹಾಕಲಾಗುತ್ತದೆ.

ವಿಧಾನಪರಿಷತ್ ಚುನಾವಣೆ : ಎಲ್ಲಾ 11 ಅಭ್ಯರ್ಥಿಗಳು ಅವಿರೋಧ ಆಯ್ಕೆ?ವಿಧಾನಪರಿಷತ್ ಚುನಾವಣೆ : ಎಲ್ಲಾ 11 ಅಭ್ಯರ್ಥಿಗಳು ಅವಿರೋಧ ಆಯ್ಕೆ?

ಪ್ರತಿ ಮತಗಟ್ಟೆಯಲ್ಲಿ ಮತಗಟ್ಟೆ ಅಧಿಕಾರಿ ಸೇರಿ 4 ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದು, 4ಮಂದಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುತ್ತದೆ. ಮತದಾನ ಮುಗಿದ ತಕ್ಷಣ ಮತಪೆಟ್ಟಿಗೆಗಳನ್ನು ನಿಯಮಾನುಸಾರ ಸೀಲ್ ಮಾಡಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿಸಬೇಕು. ರಾತ್ರಿ 9ಗಂಟೆ ಒಳಗಾಗಿ ಎಲ್ಲಾ ಮತಪೆಟ್ಟಿಗೆಗಳನ್ನು ಮೈಸೂರಿಗೆ ಕಳುಹಿಸಿಕೊಡಲಾಗುತ್ತದೆ.

English summary
Shivamogga deputy commissioner M.Lokesh said that voters of Legislative Council elections can visit website for the voter list, Polling booth and other information and send SMS for any help. Elections will be held on June 8, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X