• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋವಿಡ್ ವಾರ್ಡ್ ನಲ್ಲಿ ಪುಟ್ಟ ಲೈಬ್ರರಿ; ಸಾಗರ ತಾಲೂಕು ಆಸ್ಪತ್ರೆಯ ವಿಶಿಷ್ಟ ಪ್ರಯತ್ನ

By ಶಿವಮೊಗ್ಗ ಪ್ರತಿನಿಧಿ
|

ಶಿವಮೊಗ್ಗ, ಅಕ್ಟೋಬರ್ 08: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಅನುಕೂಲವಾಗುವ ದೃಷ್ಟಿಯಿಂದ ಕೋವಿಡ್ ವಾರ್ಡ್ ನಲ್ಲಿ ಪುಟ್ಟ ಗ್ರಂಥಾಲಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಹಲವು ಮಂದಿ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಕೊರೊನಾ ಸೋಂಕಿಗಾಗಿ ಚಿಕಿತ್ಸೆ ಪಡೆಯಬೇಕಾದರೆ ತಮ್ಮವರಿಂದ ದೂರವಿದ್ದು ಚಿಕಿತ್ಸೆ ಪಡೆಯುವ ಅನಿವಾರ್ಯತೆ ಇದೆ. ಹೀಗಾಗಿ ಸೋಂಕಿತರಿಗೆ ಒಂಟಿತನ ಹೆಚ್ಚಾಗಿ ಕಾಡುತ್ತಿದೆ. ಇದು ಮಾನಸಿಕ ಖಿನ್ನತೆಗೆ ದಾರಿ ಮಾಡಿಕೊಡುತ್ತಿದೆ. ಹೀಗಾಗಿ ಅವರಿಗೆ ಮಾನಸಿಕ ನೆಮ್ಮದಿ ದೊರಕಿಸುವ ಸಲುವಾಗಿ ಪ್ರಸಿದ್ಧ ಬರಹಗಾರರ ಗ್ರಂಥಗಳು ಸೇರಿ ಒಟ್ಟು 500 ಪುಸ್ತಕಗಳನ್ನು ಕೋವಿಡ್ ವಾರ್ಡ್ ನ ಗ್ರಂಥಾಲಯದಲ್ಲಿ ಇಡಲಾಗಿದೆ.

ಡಿಜಿಟಲ್ ಗ್ರಂಥಾಲಯದಲ್ಲಿ ದಾಖಲೆಯ ಸಂಖ್ಯೆಯ ಓದುಗರು!

ಸಾಹಿತಿಗಳು ಹಾಗೂ ಲೇಖಕರು ಯಾರಾದರೂ ಉಚಿತವಾಗಿ ತಾವು ಬರೆದಿರುವ ಪುಸ್ತಕವನ್ನು ನೀಡುವುದಾದರೆ ನೀಡಬಹುದು ಎಂದು ಆಸ್ಪತ್ರೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಒಟ್ಟಿನಲ್ಲಿ ಕೋವಿಡ್ ವಾರ್ಡ್ ನಲ್ಲಿ ಗ್ರಂಥಾಲಯ ತೆರೆದ ರಾಜ್ಯದ ಮೊದಲ ಆಸ್ಪತ್ರೆ ಇದ್ದಾಗಿದ್ದು, ಹೆಮ್ಮೆಯ ವಿಷಯವಾಗಿದೆ. ಸೋಂಕಿತರಿಗೂ ಇದರಿಂದ ಅನುಕೂಲವಾಗಲಿದೆ.

English summary
The Library has been set up in shivamogga's sagara taluk covid Hospital ward for the benefit of corona infected patients
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X