ಈಶ್ವರಪ್ಪಗೆ ಜೀವ ಬೆದರಿಕೆ ಕರೆ, ಎಸ್‌ಪಿಗೆ ದೂರು

Recommended Video

      KS Eshwarappa has received threat call from unknown person | Oneindia Kannada

      ಶಿವಮೊಗ್ಗ, ಸೆಪ್ಟೆಂಬರ್ 7 : ಬಿಜೆಪಿ ನಾಯಕ ಮತ್ತು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಶಿವಮೊಗ್ಗ ಎಸ್ಪಿಗೆ ಈಶ್ವರಪ್ಪ ಈ ಕುರಿತು ದೂರು ನೀಡಿದ್ದಾರೆ.

      ಬುಧವಾರ ಕೆ.ಎಸ್.ಈಶ್ವರಪ್ಪ ಅವರು ಜೀವ ಬೆದರಿಕೆ ಕರೆ ಬಂದಿರುವ ಬಗ್ಗೆ ಶಿವಮೊಗ್ಗ ಎಸ್ಪಿ ಅಭಿನವ್ ಖರೆ ಅವರಿಗೆ ದೂರು ನೀಡಿದ್ದಾರೆ. ಕನ್ನಡ ಮಿಶ್ರಿತ ಉರ್ದು ಭಾಷೆಯಲ್ಲಿ ಮಾತನಾಡಿದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

      Life threat to KS Eshwarappa complaint filed

      ಸೆ.5ರಂದು ಮಧ್ಯಾಹ್ನ 2.30ಕ್ಕೆ ಬೆದರಿಕೆ ಕರೆ ಬಂದಿದೆ. 'ಮುಸ್ಲಿಂ ವಿರೋಧಿಯಾದ ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ' ಎಂದು ಅನಾಮಿಕ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ಈಶ್ವರಪ್ಪ ದೂರು ಕೊಟ್ಟಿದ್ದಾರೆ.

      ಜೀವ ಬೆದರಿಕೆ ಹಾಕಿರುವ ಜೊತೆ ಅವಚ್ಯಾ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಈಶ್ವರಪ್ಪ ಹೇಳಿದ್ದಾರೆ. ಕರೆ ಮಾಡಿದ ವ್ಯಕ್ತಿಯನ್ನು ಬಂಧಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಈಶ್ವರಪ್ಪ ದೂರಿನಲ್ಲಿ ಮನವಿ ಮಾಡಿದ್ದಾರೆ.

      ಕೆಲವು ದಿನಗಳ ಹಿಂದೆ ಸಂಸದ ಪ್ರತಾಪ್ ಸಿಂಹ, ಡಿ.ಕೆ.ಸುರೇಶ್ ಮತ್ತು ಸಚಿವ ಎಚ್.ಎಂ.ರೇವಣ್ಣ ಅವರಿಗೆ ಬೆದರಿಕೆ ಕರೆಗಳು ಬಂದಿದ್ದವು. ಸಚಿವ ವಿನಯ್ ಕುಲಕರ್ಣಿ ಅವರಿಗೆ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+