Linganamakki Dam: ಜಲಾಶಯದಿಂದ ಸಾವಿರಾರು ಕ್ಯೂಸೆಕ್ ನೀರು ಬಿಡುಗಡೆ, ಮುಂದುವರಿದ ಭಾರೀ ಮಳೆ
ಶಿವಮೊಗ್ಗ, ಆಗಸ್ಟ್ 02: ರಾಜ್ಯದ ಪಶ್ಚಿಮ ಘಟ್ಟಗಳಲ್ಲಿ ಮುಂಗಾರು ಮಳೆಯ ಅಬ್ಬರ ಮತ್ತೆ ಜೋರಾಗಿದೆ. ಕಡಿಮೆ ಆಯ್ತು ಎಂದುಕೊಂಡಿದ್ದ ಮಳೆ ಮತ್ತೆ ಅಬ್ಬರಿಸಲು ಶುರುವಿಟ್ಟುಕೊಂಡಿದೆ. ರೆಡ್ ಅಲರ್ಟ್ ಸಹ ನೀಡಲಾಗಿದೆ. ಭಾರೀ ಮಳೆಯ ಕಾರಣಕ್ಕೆ ಲಿಂಗನಮಕ್ಕಿ ಜಲಾಶಯದ ಒಳಹರಿವು ಹೆಚ್ಚಲಾಗಿದೆ.
ಮಲೆನಾಡಲ್ಲಿ ಮಳೆ ಅಬ್ಬರ ಸದ್ಯಕ್ಕೆ ತಣ್ಣಗಾಗುವಂತೆ ಕಾಣುತ್ತಿಲ್ಲ. ನಿರಂತರ ಮಳೆಯ ಆಗಮನ ಹಿನ್ನೆಲೆಯಲ್ಲಿ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದೆ. ಹೀಗಾಗಿ ಸರ್ಕಾರ 27,000 ಕ್ಯೂಸೆಕ್ ನೀರು ಬಿಡುಗಡೆ ಮಾಡಿದೆ. ಭಾರೀ ಪ್ರಮಾಣದ ನೀರು ಡ್ಯಾಂ ಗೇಟ್‌ಗಳಿಂದ ಹಾಲಿನ ನೊರೆಯಂತೆ ಉಕ್ಕಿ ಹರಿಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಡ್ಯಾಂ ಭರ್ತಿಯಾಗಲು 04 ಅಡಿ ಬಾಕಿ
ಲಿಂಗನಮಕ್ಕಿ ಜಲಾಶಯದ 11 ಕ್ರಸ್ಟ್ ಗೇಟ್ ಮೂಲಕ 27 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಈ ಜಲಾಶಯವು ಒಟ್ಟು 1819 ಅಡಿ ಎತ್ತರವಿದ್ದು, ಸದ್ಯ ವಿಪರಿತ ಮಳೆಯಿಂದಾಗಿ ಈಗಾಗಲೇ ಜಲಾಶಯದ 1815 ಅಡಿ ಭರ್ತಿಯಾಗಿದೆ.
ಸದ್ಯ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಲು ಕೇವಲ ನಾಲ್ಕು ಅಡಿ ಬಾಕಿ ಇರುವಾಗಲೇ ನೀರು ಹೊರ ಬೀಡಲಾಗಿದೆ. ಇದರಿಂದ ನೀರಿನ ಹೊರ ಹರಿವಿನ ಪ್ರಮಾಣದಲ್ಲಿ ಭಾರೀ ಏರಿಕೆ ಆಗಿದೆ. ಜಲಾನಯನ ಪ್ರದೇಶಗಳ ನಿವಾಸಿಗಳಿಗೆ ಅಗತ್ಯ ಎಚ್ಚರಿಕೆ ನೀಡಲಾಗಿದೆ.
ಲಿಂಗನಮಕ್ಕಿ ಜಲಾಶಯವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಬಳಿ ಶರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದೆ. ಇದು ಜೋಗ ಜಲಪಾತದಿಂದ ಸುಮಾರು ಒಂಬತ್ತು ಕಿಲೋ ಮೀಟರ್ ದೂರದಲ್ಲಿದೆ. ಡ್ಯಾಂ ಒಟ್ಟು 151.64 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದೆ.

ರಾಜ್ಯದ ಪ್ರಮುಖ ಡ್ಯಾಂಗಳು ಭರ್ತಿ
ರಾಜ್ಯದಲ್ಲಿ ಕೇವಲ ಲಿಂಗನಮಕ್ಕಿ ಮಾತ್ರವಲ್ಲದೇ, ಕಬಿನಿ, ಹಾರಂಗಿ, ಕೃಷ್ಣ ರಾಜ ಸಾಗರ (ಕೆಆರ್‌ಎಸ್), ಆಲಮಟ್ಟಿ, ಘಟಪ್ರಭ, ಮಲಪ್ರಭಾ, ವಾಣಿ ವಿಲಾಸ ಸಾಗರ ಸೇರಿದಂತೆ ಪ್ರಮುಖ ಎಲ್ಲ ಜಲಾಶಯಗಳು ಭರ್ತಿಯಾಗಿವೆ. ನದಿಗಳಲ್ಲಿ ಒಳಹರಿವು ಏರಿಕೆ ಆಗಿದೆ.
ಇನ್ನೂ ಕೆಲವು ದಿನಗಳ ಕಾಲ ಮುಂಗಾರು ಮಳೆ ಆರ್ಭಟಿಸುವ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಅತ್ಯಧಿಕ ಮಳೆ ಸುರಿಯಲಿದೆ. ಮುಂದಿನ ನಾಲ್ಕು ದಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನಾ ವರದಿ ಮಾಹಿತಿ ನೀಡಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications