ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ ನಗರದಲ್ಲಿ ಲಾಕ್ ಡೌನ್ ಘೋಷಣೆ; ಅಂಗಡಿಗಳು ಬಂದ್

|
Google Oneindia Kannada News

ಶಿವಮೊಗ್ಗ, ಜುಲೈ 14 : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಇಂದು 10 ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 530.

Recommended Video

China ಸೈನಿಕರಿಗೆ ಅವಮಾನ | Oneindia Kannada

ಜುಲೈ 14ರ ಮಂಗಳವಾರದಿಂದ ಅನ್ವಯವಾಗುವಂತೆ ಮುಂದಿನ ಆದೇಶದ ತನಕ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಲಾಕ್ ಡೌನ್ ಜಾರಿಯಲ್ಲಿ ಇರುತ್ತದೆ. ಪ್ರತಿದಿನ ಮಧ್ಯಾಹ್ನ 3ಗಂಟೆಯಿಂದ ಮುಂಜಾನೆ 5ಗಂಟೆ ತನಕ ಎಲ್ಲಾ ವ್ಯಾಪಾರ ವಹಿವಾಟು ನಿಷೇಧಿಸಲಾಗಿದೆ.

ಶಿವಮೊಗ್ಗ ಕೊರೊನಾ ಪರಿಸ್ಥಿತಿ ಬಗ್ಗೆ ಜಿಲ್ಲಾಧಿಕಾರಿ ಸ್ಪಷ್ಟನೆಶಿವಮೊಗ್ಗ ಕೊರೊನಾ ಪರಿಸ್ಥಿತಿ ಬಗ್ಗೆ ಜಿಲ್ಲಾಧಿಕಾರಿ ಸ್ಪಷ್ಟನೆ

ನಗರದ ವ್ಯಾಪ್ತಿಯಲ್ಲಿನ ಎಲ್ಲಾ ಅಂಗಡಿ ಮುಂಗಟ್ಟುಗಳ ವ್ಯವಹಾರಗಳನ್ನು ನಿಷೇಧಿಸಿ ಲಾಕ್‍ ಡೌನ್ ಜಾರಿಗೊಳಿಸಲಾಗಿದೆ ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಬೆಂಗಳೂರು ಲಾಕ್ ಡೌನ್ ಆರಂಭ; ರಸ್ತೆ, ಫ್ಲೈ ಓವರ್ ಬಂದ್ ಬೆಂಗಳೂರು ಲಾಕ್ ಡೌನ್ ಆರಂಭ; ರಸ್ತೆ, ಫ್ಲೈ ಓವರ್ ಬಂದ್

Lockdown Announced In Shivamogga City Corporation Limits

ಲಾಕ್ ಡೌನ್ ಅವಧಿಯಲ್ಲಿ ಆಸ್ಪತ್ರೆ, ಔಷಧಿ ಅಂಗಡಿಗಳು, ಹಾಲು ಮಾರಾಟ ಕೇಂದ್ರಗಳು, ಕೈಗಾರಿಕಾ ವಸಾಹತು ಪ್ರದೇಶದಲ್ಲಿರುವ ಕೈಗಾರಿಕೆಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಶಿವಮೊಗ್ಗ: ಕರ್ತವ್ಯದ ವೇಳೆ ಏಕಾಏಕಿ ಕುಸಿದು ಬಿದ್ದ ಆಶಾ ಕಾರ್ಯಕರ್ತೆಶಿವಮೊಗ್ಗ: ಕರ್ತವ್ಯದ ವೇಳೆ ಏಕಾಏಕಿ ಕುಸಿದು ಬಿದ್ದ ಆಶಾ ಕಾರ್ಯಕರ್ತೆ

ಬುಧವಾರ ಸಭೆ : ಶಿವಮೊಗ್ಗ ಜಿಲ್ಲೆಯಾದ್ಯಂತ ಲಾಕ್ ಡೌನ್ ಮಾಡುವ ಕುರಿತು ಬುಧವಾರ ಸಭೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ, ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಲಾಕ್ ಡೌನ್ ಕುರಿತು ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಈಗಾಗಲೇ ಲಾಕ್ ಡೌನ್ ಜಾರಿಗೆ ಬಂದಿದೆ. ಕಲಬುರಗಿ, ಧಾರವಾಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರದಿಂದ ಲಾಕ್ ಡೌನ್ ಜಾರಿಗೆ ಬರಲಿದೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಲಾಕ್ ಡೌನ್ ಜಾರಿಗೊಳಿಸುವ ಕುರಿತು ಸ್ಥಳೀಯ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

English summary
Lockdown announced in Shivamogga City Corporation limits from 3 pm to morning 5 am. Lockdown in effect from July 14 to till further order.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X