ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿ ಯೂಸೂಫ್ ಖಾನ್ ನಾಪತ್ತೆ?
ಶಿವಮೊಗ್ಗ, ಏ.19:ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮುಕ್ತಾಯಗೊಂಡಿದೆ. ಎರಡನೇ ಹಂತದ ಚುನಾವಣೆಗೆ ಸಜ್ಜಾಗುತ್ತಿದೆ.
ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?
ಚುನಾವಣೆಯ ಹೊಸ್ತಿಲಿನಲ್ಲಿ ಶಿವಮೊಗ್ಗದ ಪಕ್ಷೇತರ ಅಭ್ಯರ್ಥಿ ಯೂಸೂಫ್ ಖಾನ್ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಶಿವಮೊಗ್ಗದಲ್ಲಿ ಏ.23ರಂದು ಮತದಾನ ನಡೆಯಲಿದೆ. ಅಭ್ಯರ್ಥಿ ನಾಪತ್ತೆ ಕುರಿತು ಈಗಾಗಲೇ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಸೂಳೆಬೈಲಿನಲ್ಲಿ ಇರುವ ತಮ್ಮ ಮನೆಯಿಂದ ಗುರುವಾರ ಮುಂಜಾನೆ ಕಾರಿನಲ್ಲಿ ಹೋದವರು ಮರಳಿ ಬಂದಿಲ್ಲ ಎಂದು ಅವರ ಮಗ ಮಹಮ್ಮದ್ ಸುಲೇಮಾನ್ ದೂರಿನಲ್ಲಿ ತಿಳಿಸಿದ್ದಾರೆ.
ರಿಯಲ್ ಎಸ್ಟೇಟ್ ಹಾಗೂ ಟಿಂಬರ್ ವ್ಯವಹಾರ ಮಾಡುತ್ತಿದ್ದ ಯೂಸೂಫ್ ಖಾನ್, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಐಎಂಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ 397 ಮತಗಳನ್ನು ಪಡೆದಿದ್ದರು. ಅಲ್ಲದೆ ಚುನಾವಣೆಗೆ ಒಂದು ವಾರ ಇರುವಾಗ ಎದೆ ನೋವು ಎಂದು ಆಸ್ಪತ್ರೆಗೆ ಸೇರಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications