ಹೆಲಿಕಾಪ್ಟರ್‌ನಲ್ಲೇ ಪ್ರಚಾರ ಮಾಡ್ತಾರಂತೆ ಶಿವಮೊಗ್ಗದ ಅಭ್ಯರ್ಥಿ!
ಶಿವಮೊಗ್ಗ, ಮಾರ್ಚ್ 30: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಶಿಕಾರಿಪುರದಿಂದ ಸ್ಪರ್ಧಿಸಲು ಹೆಲಿಕಾಪ್ಟರ್‌ನಲ್ಲಿ ಬಂದು ಗಮನ ಸೆಳೆದಿದ್ದ ವಿನಯ್ ರಾಜಾವತ್, ಲೋಕಸಭೆ ಚುನಾವಣೆಯಲ್ಲಿಯೂ ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗದಿಂದ ಕಣಕ್ಕಿಳಿಯಲಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ನಾಮಪತ್ರ ಸಲ್ಲಿಸಲು ಈ ಬಾರಿಯೂ ಅವರು ಹೆಲಿಕಾಪ್ಟರ್‌ನಲ್ಲಿಯೇ ತೆರಳಲಿದ್ದಾರೆ. ಮಾತ್ರವಲ್ಲ, ಕ್ಷೇತ್ರದಲ್ಲಿ ಹೆಲಿಕಾಪ್ಟರ್‌ನಲ್ಲಿಯೇ ಸುತ್ತಾಡಿ ಪ್ರಚಾರ ಮಾಡಲಿದ್ದಾರಂತೆ.
ವಿಧಾನಸಭೆ ಚುನಾವಣೆಯ ಸೋಲಿನಿಂದ ಪಾಠ ಕಲಿತಿದ್ದೇನೆ. ಯಾವುದೇ ಹಣ ಹೆಂಡದ ಆಮಿಷ ಒಡ್ಡದೆ ಚುನಾವಣೆ ಎದುರಿಸಿದ್ದೇನೆ. ಮುಂದಿನ ವಿಧಾನಸಭೆ ಚುನಾವಣೆಗೆ ಇನ್ನೂ ಸಮಯವಿದೆ. ಹೀಗಾಗಿ ಯಡಿಯೂರಪ್ಪ ಅವರಿಗೆ ಪೈಪೋಟಿ ನೀಡಲು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ವಿನಯ್ ಹೇಳಿದ್ದಾರೆ.

ಕಲೆದ ಚುನಾವಣೆಯಲ್ಲಿ ಹೆಲಿಕಾಪ್ಟರ್‌ನಲ್ಲಿ ಬಂದು ನಾಮಪತ್ರ ಸಲ್ಲಿಸಿದ್ದೆ. ಈ ಬಾರಿ ಚುನಾವಣೆ ಪ್ರಚಾರವನ್ನೂ ಹೆಲಿಕಾಪ್ಟರ್‌ನಲ್ಲಿಯೇ ಮಾಡಲಿದ್ದೇನೆ ಎಂದು ತಿಳಿಸಿದ್ದಾರೆ.
ಲೋಕಸಭೆ ಚುನಾವಣೆ ಮುಗಿದ ಬಳಿಕ ಯಡಿಯೂರಪ್ಪ ಅವರು ಬಿಜೆಪಿಗೆ ರಾಜೀನಾಮೆ ನೀಡುತ್ತಾರೆ. ಅದಕ್ಕೆ ಮಹತ್ವದ ಕೆಲವು ಸಾಕ್ಷ್ಯಾಧಾರಗಳಿವೆ ಎಂದು ಹೇಳಿದ್ದಾರೆ.












Click it and Unblock the Notifications