ಕಾರ್ಗಲ್: ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ, ಹಣಕ್ಕೆ ಬೆಂಕಿಯಿಟ್ಟ ಪಟ್ಟಣ ಪಂಚಾಯಿತಿ ಸದಸ್ಯ

ಶಿವಮೊಗ್ಗ, ನವೆಂಬರ್ 21: ಚಿಕನ್ ಅಂಗಡಿ ಮಾಲೀಕನಿಂದ ಲಂಚ ಪಡೆಯುತ್ತಿದ್ದ ವೇಳೆ ಪಟ್ಟಣ ಪಂಚಾಯಿತಿ ಸದಸ್ಯರೊಬ್ಬರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಲಂಚದ ಹಣ ಸುಡಲು ಯತ್ನಿಸಿದ ಘಟನೆ ನಡೆದಿದೆ.

ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಸಿ.ಹರೀಶ್ ಗೌಡ ಬಂಧಿತ. ಜೋಗ ಗ್ರಾಮದ ಚಿಕನ್ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

50 ಸಾವಿರ ರೂ. ಲಂಚದ ಹಣ

ಜೋಗ ಗ್ರಾಮದಲ್ಲಿ ಅಹ್ಮದ್ ಅಬ್ದುಲ್ ಬಾಕಿ ಸುಮಾರು 15 ವರ್ಷಗಳಿಂದ ಚಿಕನ್ ಅಂಗಡಿ ನಡೆಸುತ್ತಿದ್ದಾರೆ. ಪರವಾನಗಿ ಪಡೆಯದೆ ಅಂಗಡಿ ನಡೆಸುತ್ತಿರುವುದರಿಂದ ತೆರವುಗೊಳಿಸುವಂತೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ತಿಳಿಸಿದ್ದಾರೆ. ಹಾಗಾಗಿ ಅಹ್ಮದ್ ಅಬ್ದುಲ್ ಅವರು ಪರವಾನಗಿಗೆ ಅರ್ಜಿ ಸಲ್ಲಿಸಿದ್ದರು. ಸಮಸ್ಯೆಯ ಕುರಿತು ತಮ್ಮ ವಾರ್ಡ್ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಸಿ.ಹರೀಶ್ ಗೌಡ ಬಳಿ ತಿಳಿಸಿದ್ದಾರೆ.

Lokayukta Police Trap a Town Panchayat Member Accepting a Bribe from A Chicken Shop Owner

ಅಂಗಡಿ ನಡೆಸಲು ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು, ಪ್ರತಿ ತಿಂಗಳು 3 ಸಾವಿರ ರೂ. ಹಣ ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್ ಗೌಡ ಸೂಚಿಸಿದ್ದಾರೆ. ಇದು ಕಷ್ಟವಾಗಲಿದೆ ಎಂದು ಅಹ್ಮದ್ ಅಬ್ದುಲ್ ತಿಳಿಸಿದ್ದಾರೆ. ಆಗ 50 ಸಾವಿರ ರೂ. ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ.

ಲೋಕಾಯುಕ್ತದಲ್ಲಿ ದೂರು ದಾಖಲು

ಲಂಚಕ್ಕೆ ಬೇಡಿಕೆಯಿಟ್ಟ ಹಿನ್ನಲೆ ಅಹ್ಮದ್ ಅಬ್ದುಲ್ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಹರೀಶ್ ಗೌಡ ವಿರುದ್ಧ ದೂರು ನೀಡಿದ್ದಾರೆ. ಸೋಮವಾರ ಮಧ್ಯಾಹ್ನ ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್ ಗೌಡ ಮನೆಗೆ ತೆರಳಿ 50 ಸಾವಿರ ರೂ. ಲಂಚದ ಹಣ ನೀಡಿದ್ದಾರೆ. ಹರೀಶ್ ಗೌಡ ಹಣ ಪಡೆಯುತ್ತಿದ್ದಂತೆ ಲೋಕಾಯುಕ್ತ ಅಧಿಕಾರಿಗಳು ಮನೆ ಮೇಲೆ ದಾಳಿ ನಡೆಸಿದ್ದಾರೆ. ವಿಚಲಿತನಾದ ಆತ ಹಣವನ್ನು ಮನೆಯಲ್ಲಿದ್ದ ಗ್ಯಾಸ್ ಸ್ಟೌ ಮೇಲೆ ಹಣ ಇಟ್ಟು ಬೆಂಕಿ ಹೊತ್ತಿಸಿದ್ದಾನೆ.

ಸದ್ಯ ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್ ಗೌಡನನ್ನು ಲೋಕಾಯುಕ್ತ ಪೊಲೀಸ್‌ ಬಂಧಿಸಿದ್ದಾರೆ. ಶಿವಮೊಗ್ಗ ಲೋಕಾಯುಕ್ತ ಡಿ.ವೈ.ಎಸ್.ಪಿ ಮೃತ್ಯುಂಜಯ.ಎನ್ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಗಿದೆ. ಇನ್ಸ್ ಪೆಕ್ಟರ್ ರಾಧಾಕೃಷ್ಣ, ಇನ್ಸ್ ಪೆಕ್ಟರ್ ಹೆಚ್.ಎಂ.ಜಗನ್ನಾಥ, ಸಿಬ್ಬಂದಿ ಪ್ರಸನ್ನ, ಬಿ.ಲೋಕೇಶಪ್ಪ, ಮಹಾಂತೇಶ, ಚನ್ನೇಶ, ಪ್ರಶಾಂತ್ ಕುಮಾರ್, ಅರುಣ್ ಕುಮಾರ್, ಪುಟ್ಟಮ್ಮ, ಸಾವಿತ್ರಮ್ಮ, ಗಂಗಾಧರ, ತರುಣ್ ಕುಮಾರ್, ಪ್ರದೀಪ್ ಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+